Toyota: ಗಟ್ಟಿಮುಟ್ಟಾದ ಕಾರಿದು.. 28 ಕಿ.ಮೀ ಮೈಲೇಜ್, 10.99 ಲಕ್ಷ..
ಆಟೋಮೊಬೈಲ್ಸ್
- 4 month, 20 days ago
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಮೆಚ್ಚಿದ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) 'ಅರ್ಬನ್ ಕ್ರೂಸರ್ ಹೈರೈಡರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 9,156 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 4,941 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 85% ಬೆಳವಣಿಗೆಯಾಗಿದೆ.