Tata: 468 ಕಿ.ಮೀ ಓಡುತ್ತೆ.. ಹೊಸ ಟಾಟಾ SUVಗೆ 3 ಪರ್ಯಾಯ..
ಆಟೋಮೊಬೈಲ್ಸ್
- 7 month, 4 days ago
ಇತ್ತೀಚೆಗೆ ಟಾಟಾ ಪಂಚ್ ಇವಿ ಫೇಸ್‌ಲಿಫ್ಟ್ (Tata Punch EV Facelift) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಇದು ಕನಿಷ್ಠ ರೂ.9.69 ಲಕ್ಷ ಹಾಗೂ ಗರಿಷ್ಠ ರೂ.12.59 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಬೆಂಗಾಲ್ ರೂಜ್, ಕ್ಯಾರಮೆಲ್, ಫಿಯರ್‌ಲೆಸ್ ಯೆಲ್ಲೋ, ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 195 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,700 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.