ಹೋಂಡಾ ಆಕ್ಟಿವಾ 125 vs ಟಿವಿಎಸ್ ಜುಪಿಟರ್ 125: ಕಮ್ಮಿ ಬೆಲೆ..
ಆಟೋಮೊಬೈಲ್ಸ್
- 7 month, 27 days ago
ಹೋಂಡಾ ಆಕ್ಟಿವಾ 125 (Honda Activa 125) ಪ್ರಮುಖ ಸ್ಕೂಟರ್ ಆಗಿದೆ. ಅತಿಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟಗೊಳ್ಳುತ್ತಿದ್ದು, ನಂ.1 ಸ್ಥಾನದಲ್ಲಿದೆ. ಇದಕ್ಕೆ ಟಿವಿಎಸ್ ಜುಪಿಟರ್ 125 (TVS Jupiter 125) ನೇರವಾದ ಎದುರಾಳಿಯಾಗಿವೆ. ದಿನಬಳಕೆಗೂ ಹೆಚ್ಚು ಸೂಕ್ತವಾಗಿವೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿವೆ. ದೀರ್ಘಕಾಲ ಬಾಳಿಕೆಯೂ ಬರುತ್ತವೆ. ನಾವಿಲ್ಲಿ ಇವೆರೆಡು ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.