ಬೈಕ್‌ನಂತೆ 27 Km ಮೈಲೇಜ್.. 10.77 ಲಕ್ಷ ರೂಪಾಯಿ, 5-ಸೀಟರ್..
ಆಟೋಮೊಬೈಲ್ಸ್
- 8 month, 18 days ago
ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara) ಪ್ರಖ್ಯಾತ ಎಸ್‌ಯುವಿ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ಕಳೆದು ತಿಂಗಳು (ಡಿಸೆಂಬರ್ - 2025) ಸಹ ಗ್ರ್ಯಾಂಡ್ ವಿಟಾರಾ ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 8,597 ಯುನಿಟ್‌ಗಳನ್ನು ಗ್ರಾಹಕರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 7,093 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಅಂಶವನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 21.20% ಪ್ರಗತಿಯಾಗಿದೆ.