10.73 ಲಕ್ಷ: 5-ಸೀಟರ್.. ಈ Hyundai SUVಗೆ ಫುಲ್ ಡಿಮ್ಯಾಂಡ್
ಆಟೋಮೊಬೈಲ್ಸ್
- 11 month, 24 days ago
ಹ್ಯುಂಡೈ ಕ್ರೆಟಾ (Hyundai Creta) ವಿಶ್ವಾಸಾರ್ಹ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಹಲವು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಲಭ್ಯವಿದೆ. ಗ್ರಾಹಕರು ಸಹ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ 'ಕ್ರೆಟಾ' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಸರಿ ಸುಮಾರು 18,861 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. ಇದೇ ವರ್ಷದ ಜೂನ್‌ನಿಂದ ಆಗಸ್ಟ್‌ವರೆಗೂ ಒಟ್ಟು 48,608 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.