Swift: 6 ಲಕ್ಷ.. 32.85 Km ಮೈಲೇಜ್.. 5-ಸೀಟರ್, ಮಾರುತಿ ಸ್ವಿಫ್ಟ್..
ಆಟೋಮೊಬೈಲ್ಸ್
- 1 year, 1 month, 25 days ago
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಪ್ರಮುಖ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ರೂ.6.49 ಲಕ್ಷದಿಂದ ರೂ.9.64 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ನೀವು ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಪ್ಲಾನ್ ಮಾಡಿದ್ದೀರಾ.. ಹಾಗಾದರೆ, 'ಸ್ವಿಫ್ಟ್'ನ್ನು ತೆಗೆದುಕೊಳ್ಳಬಹುದು. ನಾವಿಲ್ಲಿ, ಇದೇ ಕಾರಿನ ಆನ್-ರೋಡ್ ಬೆಲೆ (On-Road Price) ಮತ್ತು ಇಎಂಐ (EMI) ಆಯ್ಕೆಯ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.