Hero Splendor Plus vs Bajaj Platina 100: ಅಗ್ಗದ ಬೈಕ್‌ಗಳಿವು..
ಆಟೋಮೊಬೈಲ್ಸ್
- 1 year, 5 month, 14 days ago
ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus) ಹಾಗೂ ಬಜಾಜ್ ಪ್ಲಾಟಿನಾ 100 (Bajaj Platina 100) ಜನಪ್ರಿಯ ಬೈಕ್‌ಗಳಾಗಿ ಹೊರಹೊಮ್ಮಿವೆ. ಇವೆರೆಡು ಮೋಟಾರ್‌ಸೈಕಲ್‌ಗಳು ವಿಶ್ವಾಸಾರ್ಹತೆಗೂ ಹೆಸರುವಾಸಿಯಾಗಿದ್ದು, ನಿರ್ವಹಣಾ ವೆಚ್ಚವು ಕಮ್ಮಿಯಿದೆ. ಜೊತೆಗೆ ಹೆಚ್ಚಿನ ಇಂಧನ ದಕ್ಷತೆಯನ್ನು (fuel efficiency) ಒದಗಿಸಲಿವೆ. ದಿನನಿತ್ಯದ ಬಳಕೆಗೆ ಹೆಚ್ಚು ಸೂಕ್ತವಾಗಿದ್ದು, ಮಧ್ಯಮ ವರ್ಗದ ಗ್ರಾಹಕರಿಗೆ ಹೇಳಿ ಮಾಡಿಸಿದ ರೀತಿಯಲ್ಲಿವೆ. ನಾವಿಲ್ಲಿ ಈ ಬೈಕ್‌ಗಳ ಬೆಲೆ ಹಾಗೂ ವಿಶೇಷತೆಗಳನ್ನು ಹೋಲಿಕೆ ಮಾಡಿದ್ದೇವೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.