Acer Faster Awards: ಮಹೀಂದ್ರಾ ಥಾರ್ ರಾಕ್ಸ್ & ಬಜಾಜ್ ಫ್ರೀಡಂ..
ಆಟೋಮೊಬೈಲ್ಸ್
- 1 year, 6 month, 8 days ago
ದೇಶದ ಆಟೋಮೋಟಿವ್ ಮಾಧ್ಯಮಗಳ ಒಕ್ಕೂಟವಾಗಿ 'ಫಾಸ್ಟರ್' ಹೊರಹೊಮ್ಮಿದೆ. ಗುರುಗ್ರಾಮದಲ್ಲಿ ಬುಧವಾರ ಪ್ರಖ್ಯಾತ ಕಾರು & ದ್ವಿಚಕ್ರ ವಾಹನಗಳಿಗೆ ಕೊಡಲಾಗುವ ಏಸರ್ ಫಾಸ್ಟರ್ ಪ್ರಶಸ್ತಿ (Acer Faster Awards - 2025) ಸಮಾರಂಭಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಜನಪ್ರಿಯ ಆಫ್-ರೋಡ್ ಎಸ್‌ಯುವಿ ಮಹೀಂದ್ರಾ ಥಾರ್ ರಾಕ್ಸ್ (Mahindra Thar Roxx) ವರ್ಷದ ಕಾರೆಂಬ ಪ್ರಶಸ್ತಿಯನ್ನು ಪಡೆದರೆ, ಬಜಾಜ್ ಫ್ರೀಡಂ 125 (Bajaj Freedom 125) ವರ್ಷದ ಮೋಟಾರ್‌ಸೈಕಲ್ ಎಂಬ ಗೌರವಕ್ಕೆ ಪಾತ್ರವಾಯಿತು.