Tata Nexon: 5-ಸೀಟರ್.. ಹೊಸ ರೂಪದಲ್ಲಿ ಟಾಟಾ ನೆಕ್ಸಾನ್ ಸಿಎನ್‌ಜಿ..
ಆಟೋಮೊಬೈಲ್ಸ್
- 1 year, 8 month, 8 days ago
ಭಾರತದ ಕಾರು ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ (Tata Nexon) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಇತ್ತೀಚೆಗೆ ನವದೆಹಲಿಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ 'ನೆಕ್ಸಾನ್ ಸಿಎನ್‌ಜಿ ರೆಡ್ ಡಾರ್ಕ್ ಎಡಿಷನ್'ನ್ನು ಪ್ರದರ್ಶಿಸಲಾಗಿತ್ತು. ಸೋಮವಾರ ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿದೆ.