ರಸ್ತೆಗಳ ರಾಜ ರಾಯಲ್ ಎನ್‌ಫೀಲ್ಡ್ ಪ್ರಾಬಲ್ಯ
ಆಟೋಮೊಬೈಲ್ಸ್
- 1 year, 9 month, 3 days ago
ರಾಯಲ್ ಎನ್‌ಫೀಲ್ಡ್ (Royal Enfield) ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಪ್ರೀಮಿಯಂ ಮೋಟಾರ್‌ಸೈಕಲ್ ಬ್ರ್ಯಾಂಡ್ ಆಗಿದ್ದು, ಇದರ ಬೈಕ್ ಗಳು ದಾಖಲೆಯ ಮಾರಾಟವಾಗುತ್ತಿದೆ. ರಾಯಲ್ ಎನ್‌ಫೀಲ್ಡ್ ಬ್ರ್ಯಾಂಡ್‌ನ ಭರ್ಜರಿ ಮಾರಾಟವನ್ನು ವರದಿ ಮಾಡಿದೆ. 2024ರ ಡಿಸೆಂಬರ್ ತಿಂಗಳಿನಲ್ಲಿ ರಾಯಲ್ ಎನ್‌ಫೀಲ್ಡ್ ಕಂಪನಿಯು ಒಟ್ಟು 79,466 ಬೈಕುಗಳನ್ನು ಮಾರಾಟ ಮಾಡಿವೆ. ಇನ್ನು ಕಳೆದ ವರ್ಷದ ಡಿಸೆಂಬರ್ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.25 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಕಳೆದ ತಿಂಗಳು ರಾಯಲ್ ಎನ್‌ಫೀಲ್ಡ್ 11,575 ಬೈಕುಗಳನ್ನು ರಫ್ತು ಮಾಡಿದೆ.