Mahindra Scorpio: 7-ಸೀಟರ್.. 13 ಲಕ್ಷ, ಮಹೀಂದ್ರಾ ಸ್ಕಾರ್ಪಿಯೋಗೆ..
ಆಟೋಮೊಬೈಲ್ಸ್
- 11 month, 27 days ago
ಮಹೀಂದ್ರಾ ಸ್ಕಾರ್ಪಿಯೋ (Mahindra Scorpio) ಜಗಮೆಚ್ಚಿದ ಎಸ್ಯುವಿ ಎಂದೇ ಹೆಸರುವಾಸಿಯಾಗಿದೆ. 2002 ರಿಂದಲೂ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಖರೀದಿದಾರರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಈ ಅಕ್ಟೋಬರ್ ತಿಂಗಳಲ್ಲೂ 'ಸ್ಕಾರ್ಪಿಯೋ' ದೊಡ್ಡ ಸಂಖ್ಯೆಯಲ್ಲಿ ಮಾರಾಟವಾಗಿದೆ. ಸರಿ ಸುಮಾರು 18,107 ಯುನಿಟ್ಗಳನ್ನು ಗ್ರಾಹಕರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 15,877 ಯುನಿಟ್ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 14% ಪ್ರಗತಿಯಾಗಿದೆ.