Maruti Suzuki: 32+ Km ಮೈಲೇಜ್.. 6.49 ಲಕ್ಷ, 5-ಸೀಟರ್..

ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಪ್ರಮುಖ ವಾಹನ ತಯಾರಕ ಕಂಪನಿಗಳು ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನೂತನ ಸ್ವಿಫ್ಟ್ ಕಾರು ಉತ್ತಮ ಸಂಖ್ಯೆಯಲ್ಲಿಯೂ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Women's day: ನಿಮ್ಮ ಮೆಚ್ಚಿನ ಅಮ್ಮ & ಸಹೋದರಿಗೆ ಗಿಫ್ಟ್ ನೀಡಬೇಕೇ..

ಪ್ರತಿವರ್ಷ ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ (International Women's Day) ಆಚರಿಸಲಾಗುತ್ತದೆ. ಈ ದಿನ ಮಹಿಳೆಯರ ಹಕ್ಕಿನ ಸಂಬಂಧ ಜಾಗೃತಿಯನ್ನು ಮೂಡಿಸಲಾಗುತ್ತದೆ. ನೀವು ಮಹಿಳಾ ದಿನಾಚರಣೆಯಂದು ನಿಮ್ಮ ತಾಯಿ, ಸಹೋದರಿ ಅಥವಾ ಮಡದಿಗೆ ಹೊಚ್ಚ ಹೊಸ ಎಲೆಕ್ಟ್ರಿಕ್ ಸ್ಕೂಟರ್‌ವೊಂದನ್ನು ಉಡುಗೊರೆಯಾಗಿ ನೀಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೀರೋ ವಿಡಾ ವಿ2, ಎಥರ್ ರಿಜ್ಟಾ, ಓಲಾ ಎಸ್1ಎಕ್ಸ್, ಟಿವಿಎಸ್ ಐಕ್ಯೂಬ್ ಹಾಗೂ ಬಜಾಜ್ ಚೇತಕ್ ಮಾಡೆಲ್‌ಗಳು ಹೆಚ್ಚು ಸೂಕ್ತವಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Toyota: 26.11 Km ಮೈಲೇಜ್.. 7-ಸೀಟರ್.. ಈ ಜನಪ್ರಿಯ ಫ್ಯಾಮಿಲಿ..

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor), ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga) ರೀ-ಬ್ಯಾಡ್ಜ್ ಮಾಡೆಲ್ ರೂಮಿಯನ್ (Rumion) ಎಂಪಿವಿಯನ್ನು ಮಾರಾಟಗೊಳಿಸುತ್ತಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಈ ಕಾರಿನ ಬೆಲೆಯನ್ನು ಕೊಂಚ ಮಟ್ಟಿಗೆ ಅಧಿಕಗೊಳಿಸಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನಿನ್ನೆಯಷ್ಟೇ ಬಿಡುಗಡೆ.. ದರವೂ ಅಗ್ಗ, ಅಲ್ಟ್ರಾವೈಲೆಟ್‌ನ ಪ್ರಪ್ರಥಮ..

ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಲ್ಟ್ರಾವೈಲೆಟ್ (Ultraviolette), ಜನಪ್ರಿಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಗ್ರಾಹಕರಿಗಾಗಿ ಬುಧವಾರ ಹೊಚ್ಚ ಹೊಸ ಟೆಸ್ಸೆರಾಕ್ಟ್ (Tesseract) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಾರಾಟಕ್ಕೆ ತಂದಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯಲಿದೆ. ನಾವಿಲ್ಲಿ ಈ ನೂತನ 'ಅಲ್ಟ್ರಾವೈಲೆಟ್‌ ಟೆಸ್ಸೆರಾಕ್ಟ್' ಇ-ಸ್ಕೂಟರ್‌ನ ಪ್ರಮುಖಾಂಶಗಳ ಕುರಿತಂತೆ ತಿಳಿಸಿಕೊಟ್ಟಿದ್ದೇವೆ.
Advertisement

Renault: ಈಗಲೇ ಶೋರೂಂಗೆ ಭೇಟಿ ನೀಡಿ.. ಈ ಪ್ರಖ್ಯಾತ ಕಾರುಗಳಿಗೆ..

ರೆನಾಲ್ಟ್ ಇಂಡಿಯಾ (Renault India) ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕ್ವಿಡ್, ಕಿಗರ್ ಹಾಗೂ ಟ್ರೈಬರ್ ಕಾರುಗಳನ್ನು ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿದ್ದು, ಗ್ರಾಹಕರು ಇಷ್ಟಪಟ್ಟು ತಮ್ಮ ಕುಟುಂಬದ ವಾಹನವಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ, ರೆನಾಲ್ಟ್ ಕಂಪನಿಯು ಮತ್ತಷ್ಟು ಸಂಖ್ಯೆಯಲ್ಲಿ ಖರೀದಿದಾರರನ್ನು ಸೆಳೆಯಲು ಈ ಮಾರ್ಚ್ ತಿಂಗಳಲ್ಲಿ ಎಲ್ಲ ಕಾರುಗಳ ಮೇಲೆ ಭರ್ಜರಿ ರಿಯಾಯಿತಿ ಪ್ರಯೋಜನವನ್ನು ಘೋಷಣೆ ಮಾಡಿದ್ದು, ಅಧಿಕೃತ ವೆಬ್‌ಸೈಟ್‌ನಲ್ಲಿಯೂ ಮಾಹಿತಿ ನೀಡಿದೆ.

6 ಏರ್‌ಬ್ಯಾಗ್‌ನೊಂದಿಗೆ ಸಿಗುವ ಜನಪ್ರಿಯ ಕಾರುಗಳಿವು..

ಪ್ರಯಾಣಿಕರ ರಕ್ಷಣೆಗಾಗಿ ಏರ್‌ಬ್ಯಾಗ್‌ಗಳು ಮಹತ್ವದ ಪಾತ್ರವಹಿಸುತ್ತವೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಬಹುತೇಕ ಎಲ್ಲ ಕಾರುಗಳು ಹೆಚ್ಚಿನ ಏರ್‌ಬ್ಯಾಗ್‌ಗಳು ಹಾಗೂ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿವೆ. ನೀವು ಬಜೆಟ್ ಬೆಲೆಯಲ್ಲಿ 6 ಏರ್‌ಬ್ಯಾಗ್‌ಗಳನ್ನು ಪಡೆದುಕೊಂಡಿರುವ ಕಾರನ್ನು ಖರೀದಿಸಲು ಯೋಚಿಸಿದ್ದೀರಾ.. ಹಾಗಾದರೆ ಮಾರುತಿ ಸುಜುಕಿ ಆಲ್ಟೊ, ಟಾಟಾ ಆಲ್ಟ್ರೋಜ್ ಹಾಗೂ ಮಾರುತಿ ಸುಜುಕಿ ಸೆಲೆರಿಯೊ ಹ್ಯಾಚ್‌ಬ್ಯಾಕ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ. ಬನ್ನಿ.. ಈ ಕಾರುಗಳ ವಿಶೇಷತೆಗಳ ಬಗ್ಗೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಯೋಣ.

ಕಷ್ಟಪಟ್ಟು ದುಡಿಯುವ ಜನರಿಗೆ ಈ ಟೂ ವೀಲರ್‌ಗಳು ಸೂಪರ್..

ಭಾರತದಲ್ಲಿ ದುಡಿಯುವ ವರ್ಗದವರು ಹೆಚ್ಚಿದ್ದು, ಹಳ್ಳಿಯಿಂದ ದಿಲ್ಲಿವರೆಗಿನ ಜನರಿಗೆ ದ್ವಿಚಕ್ರ ವಾಹನಗಳು (Two Wheelers) ತೀರಾ ಅನಿವಾರ್ಯವಾಗಿವೆ. ಆದರೆ, ಬಹುತೇಕರಿಗೆ ಹೆಚ್ಚಿನ ಹಣ ಪಾವತಿ ಮಾಡಿ, ಹೊಸ ಬೈಕ್ ಹಾಗೂ ಸ್ಕೂಟರ್‌ಗಳನ್ನು ಖರೀದಿ ಮಾಡಲು ಸಾಧ್ಯವಾಗುವುದಿಲ್ಲ. ಅಂತಹವರಿಗೆ ಟಿವಿಎಸ್ ಸ್ಪೋರ್ಟ್, ಹೀರೋ ಎಚ್‌ಎಫ್ 100 ಹಾಗೂ ಟಿವಿಎಸ್ ಎಕ್ಸ್‌ಎಲ್ 100 ಹೆಚ್ಚು ಸೂಕ್ತವಾಗಲಿವೆ. ನಾವಿಲ್ಲಿ ಇವುಗಳ ಬೆಲೆ, ಮೈಲೇಜ್ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ಮಾಹಿತಿಯನ್ನು ತಿಳಿಸಿಕೊಟ್ಟಿದ್ದೇವೆ.

Ultraviolette: ಬೆಂಗಳೂರಿನ ಅಲ್ಟ್ರಾವೈಲೆಟ್‌ ಕಂಪನಿಯಿಂದ ಹೊಸ..

ಬೆಂಗಳೂರಿನ ಅಲ್ಟ್ರಾವೈಲೆಟ್ (Ultraviolette), ಪ್ರಖ್ಯಾತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ (Electric Two Wheeler) ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿಂದು ಮೊದಲ 'ಟೆಸ್ಸೆರಾಕ್ಟ್' ಇ-ಸ್ಕೂಟರ್‌ನ್ನು ಬಿಡುಗಡೆಗೊಳಿಸಿದೆ. ಇದರೊಟ್ಟಿಗೆ ಆಫ್-ರೋಡ್ ಎಲೆಕ್ಟ್ರಿಕ್ ಬೈಕ್ 'ಶಾಕ್‌ವೇವ್'ನ್ನು ಮಾರಾಟಕ್ಕೆ ತಂದಿದೆ. ಇದು ಹೆಚ್ಚು ಅತ್ಯಾಧುನಿಕವಾಗಿದೆ. ಬನ್ನಿ.. ನೂತನ ಇ-ಮೋಟಾರ್‌ಸೈಕಲ್ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
Advertisement

ಬೆಂಗಳೂರಿನ ಅಲ್ಟ್ರಾವೈಲೆಟ್‌ನಿಂದ ಮೊದಲ ಇ-ಸ್ಕೂಟರ್ ಬಿಡುಗಡೆ..

ಬೆಂಗಳೂರು ಮೂಲದ ಅಲ್ಟ್ರಾವೈಲೆಟ್ (Ultraviolette), ಬಹುನಿರೀಕ್ಷಿತ ಎ77 ಸೀರೀಸ್ ಇ-ಬೈಕ್‌ನ್ನು ಮಾರಾಟ ಮಾಡುವುದರೊಂದಿಗೆ ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿತ್ತು. ಬುಧವಾರ ಕಂಪನಿಯು ತನ್ನ ಮೊದಲ 'ಟೆಸ್ಸೆರಾಕ್ಟ್' ಎಲೆಕ್ಟ್ರಿಕ್ ಸ್ಕೂಟರ್‌ನ್ನು ಆದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ನೂತನ ಸ್ಕೂಟರ್ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಬಜೆಟ್ ಬೆಲೆಯಲ್ಲಿಯೂ ಮಾರಾಟಕ್ಕೆ ಬಂದಿದೆ. ಬನ್ನಿ.. ಹೊಚ್ಚ ಹೊಸ ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಎಲೆಕ್ಟ್ರಿಕ್ ಸ್ಕೂಟರ್‌ ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.

Dzire: 5-ಸ್ಟಾರ್ ಸೇಫ್ಟಿಯ ಮಾರುತಿ ಡಿಜೈರ್ ಕಾರು ಭೀಕರ ಅಪಘಾತಕ್ಕೆ..

ಮಾರುತಿ ಸುಜುಕಿ ಡಿಜೈರ್ (Maruti Suzuki Dzire) ಜನಪ್ರಿಯ ಸೆಡಾನ್ ಆಗಿದೆ. ಕಳೆದ ನವೆಂಬರ್ 11 ರಂದು ಈ ಕಾರನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲಾಗಿತ್ತು. ನೂತನ ಡಿಜೈರ್ ಅತ್ಯಂತ ಸುರಕ್ಷಿತ ಕಾರಾಗಿಯೂ ಹೊರಹೊಮ್ಮಿದೆ. 'ಗ್ಲೋಬಲ್ ಎನ್‌ಸಿಎಪಿ'ಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ ಪಡೆದ ಕಂಪನಿ ಮೊದಲ ಕಾರು ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಸದ್ಯ ಈ ಡಿಜೈರ್ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದ್ದು, ಹೆಚ್ಚಿನ ಹಾನಿಯಾಗಿದೆ. ಆದರೂ ಡಿಜೈರ್‌ನ ನಿರ್ಮಾಣ ಗುಣಮಟ್ಟಕ್ಕೆ ಸರಿಸಾಟಿಯೇ ಇಲ್ಲ ಎಂದು ಹೇಳಬಹುದು.

Bengaluru 2nd Airport: ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..

ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಇದೇ ಸೋಮವಾರದಿಂದ ಪ್ರಾರಂಭಗೊಂಡಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್‌ (Thawar Chand Gehlot) ಅವರು ಭಾಷಣ ಮಾಡಿದ್ದರು. ಮಾರ್ಚ್ 21 ರವರೆಗೆ ಅಧಿವೇಶನ ನಡೆಯಲಿದೆ. ಮಾರ್ಚ್ 7ರಂದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಹೊಸ ದಾಖಲೆಯೊಂದನ್ನು ಮಾಡಲಿದ್ದಾರೆ.

ಇದು ರಸ್ತೆ ಮೇಲಿನ ಐರಾವತ: ಹೊಸ ರೇಂಜ್ ರೋವರ್ ಕಾರು ಖರೀದಿಸಿದ..

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ (MS Dhoni), ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸದ್ಯ, ಅವರ ವಯಸ್ಸು 43 ಆಗಿದ್ದು, ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಾರೆ. ಆರಂಭದಲ್ಲಿ ತಮ್ಮ ಅಬ್ಬರದ ಆಟದಿಂದ ಗುರುತಿಸಿಕೊಂಡಿದ್ದ ಅವರು, ಆ ಬಳಿಕ 'ಕ್ಯಾಪ್ಟನ್ ಕೂಲ್' ಎಂದೇ ಜನಪ್ರಿಯರಾದರು. ಧೋನಿ ಅವರಿಗೆ ಕ್ರಿಕೆಟ್‌ನಂತೆಯೇ ಕಾರು ಹಾಗೂ ಬೈಕ್‌ಗಳ ಮೇಲೆಯೂ ವಿಶೇಷವಾದ ಪ್ರೀತಿಯಿದೆ.
Advertisement

Volvo: 2025ರ ವೋಲ್ವೋ ಎಕ್ಸ್‌ಸಿ90 ಫೇಸ್‌ಲಿಫ್ಟ್ ಬಿಡುಗಡೆ..

ವೋಲ್ವೋ ಕಾರ್ ಇಂಡಿಯಾ (Volvo Car India) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಹಲವು ಕಾರುಗಳನ್ನು ಯಶಸ್ವಿಯಾಗಿ ಮಾರಾಟ ಮಾಡುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ವೋಲ್ವೋ ನವೀಕರಣಗೊಳಿಸಿರುವ ಹೊಚ್ಚ ಹೊಸ ಎಕ್ಸ್‌ಸಿ90 ಎಸ್‌ಯುವಿಯನ್ನು ಬಿಡುಗಡೆಗೊಳಿಸಿದೆ. ಬನ್ನಿ.. ಈ ಕಾರಿನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದನ್ನು ತಿಳಿಯೋಣ.

ಬಡವರ ಬಂಡಿಗಳು: 62,000 ಬೆಲೆ.. 70+ Km ಮೈಲೇಜ್, ಈ ಬೈಕ್‌ಗಳನ್ನು...

ದೇಶದ ನಗರ ಪ್ರದೇಶದಂತೆ ಗ್ರಾಮೀಣ ಭಾಗದಲ್ಲೂ ಹೆಚ್ಚಿನ ಜನರು ವಾಸಿಸುತ್ತಾರೆ. ಹಳ್ಳಿ ಹಾಗೂ ನಗರವಾಸಿಗಳ ದಿನನಿತ್ಯದ ಬಳಕೆಗೆ ಬೈಕ್‌ಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಹೀರೋ ಸ್ಪ್ಲೆಂಡರ್, ಹೋಂಡಾ ಶೈನ್, ಹೀರೋ ಹೆಚ್ಎಫ್ ಡಿಲಕ್ಸ್ ಹಾಗೂ ಬಜಾಜ್ ಪಲ್ಸರ್ 125 ಮೋಟಾರ್‌ಸೈಕಲ್‌ಗಳು ಹೆಚ್ಚು ಸೂಕ್ತವಾಗಬಲ್ಲವು. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತಿಹೆಚ್ಚಿನ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಬನ್ನಿ.. ಈ ನೂತನ ಬೈಕ್‌ಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.

28.51 Km ಮೈಲೇಜ್.. 7.52 ಲಕ್ಷ.. ಟಾಟಾ - ಹ್ಯುಂಡೈ ಅಲ್ಲ..

ಭಾರತವು ವಿಶ್ವದಲ್ಲಿಯೇ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಇತ್ತೀಚೆಗೆ ಎಲ್ಲ ವಾಹನ ತಯಾರಕ ಕಂಪನಿಗಳು 2025 ಫೆಬ್ರವರಿಯ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿವೆ. ಅದರಲ್ಲೂ ಮಾರುತಿ ಸುಜುಕಿಗೆ ಈ ಫೆಬ್ರವರಿ ತುಂಬಾ ಮಹತ್ವದ ತಿಂಗಳಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಮಾರಾಟಗೊಂಡ ಟಾಪ್ 10 ಕಾರುಗಳ ಪಟ್ಟಿಯಲ್ಲಿ ಕಂಪನಿಯ 7 ಕಾರುಗಳು ಸ್ಥಾನ ಪಡೆದಿವೆ. ಈ ಪಟ್ಟಿಯಲ್ಲಿ ಮಾರುತಿ ಸುಜುಕಿ ಹೊರತುಪಡಿಸಿ, ಟಾಟಾದ ಎರಡು ಹಾಗೂ ಹ್ಯುಂಡೈನ ಒಂದು ಕಾರು ಸಹ ಇದೆ.

ಹೊಸ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಮೊದಲ ಅಪಘಾತ ವರದಿ..

ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳನ್ನು ಬೆಸೆಯಲು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯನ್ನು ಅಭಿವೃದ್ಧಿಪಡಿಸಲಾಗಿದೆ. ಕೆಲವೇ ದಿನಗಳ ಹಿಂದೆ, ರಾಜ್ಯದ ವ್ಯಾಪ್ತಿಯಲ್ಲಿ ಹಾದುಹೋಗುವ ಈ ಹೆದ್ದಾರಿಯನ್ನು ಅನಧಿಕೃತವಾಗಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಭಾನುವಾರ ತಡರಾತ್ರಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಬಳಿಕ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಎಚ್ಚೆತ್ತುಕೊಂಡಿದ್ದು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿದೆ.
Advertisement

Hyundai: ಜನಪ್ರಿಯ ಹ್ಯುಂಡೈ ಕ್ರೆಟಾದ ಹೊಸ ವೇರಿಯೆಂಟ್‌ಗಳು ಬಿಡುಗಡೆ..

ಭಾರತದಲ್ಲಿ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India), ಕ್ರೆಟಾ ಎಸ್‌ಯುವಿಯನ್ನು ಯಶಸ್ವಿಯನ್ನು ಮಾರಾಟ ಮಾಡುತ್ತಿದೆ. ಈ ಕಾರು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಸಹ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ನೂತನ ಹ್ಯುಂಡೈ ಕ್ರೆಟಾಗಿರುವ ಬೇಡಿಕೆಯನ್ನು ಮನಗಂಡಿರುವ ಕಂಪನಿಯು ಎರಡು ಹೊಚ್ಚ ಹೊಸ ರೂಪಾಂತರಗಳನ್ನು (ವೇರಿಯೆಂಟ್) ಪರಿಚಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

TATA: ಟಾಟಾಗೆ ಗ್ರಾಹಕರಿಂದ ಯಾರು ನಿರೀಕ್ಷಿಸದ ಟ್ವಿಸ್ಟ್.. ಏನು?

ಟಾಟಾ ಮೋಟಾರ್ಸ್ (Tata Motors), ನಂಬಿಕಾರ್ಹ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಪ್ರಯಾಣಿಕ ವಾಹನ (Passenger vehicle) ಹಾಗೂ ವಾಣಿಜ್ಯ ವಾಹನ (Commercial Vehicle) ಮಾರಾಟಗೊಳಿಸುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಇತ್ತೀಚೆಗೆ ಟಾಟಾ ಫೆಬ್ರವರಿ ತಿಂಗಳ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ನಿರೀಕ್ಷೆಗೂ ಮೀರಿದ ಪ್ರಗತಿಯನ್ನು ಸಾಧಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹಳ್ಳಿಗೂ ಜೈ.. ಸಿಟಿಗೂ ಸೈ.. 59+ ಮೈಲೇಜ್, 80,000 ಆರಂಭಿಕ ಬೆಲೆ..

ಭಾರತದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ವಾಸಿಸುತ್ತಾರೆ. ಹಳ್ಳಿಯಿಂದ ಹಿಡಿದು ನಗರ ಪ್ರದೇಶದ ಜನರಿಗೆ ದ್ವಿಚಕ್ರ ವಾಹನಗಳು ತೀರಾ ಅನಿವಾರ್ಯವಾಗಿವೆ. ಅದರಲ್ಲೂ ಬೈಕ್‌ಗಳಿಗೆ ಹೋಲಿಕೆ ಮಾಡಿದರೆ, ಸ್ಕೂಟರ್‌ಗಳು ಮಹಿಳೆ ಹಾಗೂ ಪುರುಷರಿಬ್ಬರಿಗೂ ಹೆಚ್ಚು ಸೂಕ್ತವಾಗಿವೆ. ನೀವು ಹೊಸ ಸ್ಕೂಟರ್‌ವೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಹಾಗಾದರೆ, ಹೀರೋ ಡೆಸ್ಟಿನಿ, ಹೋಂಡಾ ಆಕ್ಟಿವಾ, ಸುಜುಕಿ ಆಕ್ಸೆಸ್, ಯಮಹಾ ಫ್ಯಾಸಿನೋ ಹಾಗೂ ಟಿವಿಎಸ್ ಎನ್‌ಟಾರ್ಕ್ ಮಾಡೆಲ್‌ಗಳು ಅತ್ಯುತ್ತಮ ಆಯ್ಕೆಯಾಗಲಿವೆ.

TVS: ಒಬಿಡಿ-2ಬಿ ಹೊಸ 'ಟಿವಿಎಸ್ ಜುಪಿಟರ್ 110' ಸ್ಕೂಟರ್ ಬಿಡುಗಡೆ..

ಟಿವಿಎಸ್ ಮೋಟಾರ್ (TVS Motor) ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ತನ್ನದೆಯಾದ ಛಾಪನ್ನು ಮೂಡಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ವಿವಿಧ ಮೋಟಾರ್‌ಸೈಕಲ್ ಹಾಗೂ ಸ್ಕೂಟರ್‌ಗಳನ್ನು ಭಾರೀ ಸಂಖ್ಯೆಯಲ್ಲಿಯೂ ಮಾರಾಟಗೊಳಿಸುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಟಿವಿಎಸ್ ಕಂಪನಿಯು ಒಬಿಡಿ-2ಬಿ (OBD-2B) ಮಾನದಂಡಗಳನ್ನು ಪೂರೈಸಿರುವ ಹೊಚ್ಚ ಹೊಸ 'ಜುಪಿಟರ್ 110' ಸ್ಕೂಟರ್‌ನ್ನು ಬಿಡುಗಡೆಗೊಳಿಸಿದೆ. ಅದರ ಹೊರತಾಗಿ ನೂತನ ಸ್ಕೂಟರ್ ವೈಶಿಷ್ಟ್ಯಗಳ ವಿಚಾರದಲ್ಲಿ ಯಾವುದೇ ಬದಲಾವಣೆಯನ್ನು ಪಡೆದುಕೊಂಡಿಲ್ಲ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
Advertisement

Nissan: ಜನಮೆಚ್ಚಿದ 'ನಿಸ್ಸಾನ್ ಮ್ಯಾಗ್ನೈಟ್' ಕಾರು ಶೀಘ್ರ..

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಗೇಮ್ ಚೇಂಜರ್ ಎಸ್‌ಯುವಿಯಾಗಿ ಹೊರ ಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಪ್ರತಿ ತಿಂಗಳು 2000ಕ್ಕೂ ಅಧಿಕ ಖರೀದಿದಾರರು ಇದೇ ಮ್ಯಾಗ್ನೈಟ್ ಎಸ್‌ಯುವಿಯನ್ನು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ನೂತನ ನಿಸ್ಸಾನ್ ಮ್ಯಾಗ್ನೈಟ್ ಕಾರನ್ನು ಹೊಸ ಅವತಾರದಲ್ಲಿ ಮಾರಾಟಕ್ಕೆ ತರಲು ಕಂಪನಿಯು ಭರದಿಂದ ಸಿದ್ಧತೆಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬಜಾಜ್, ಓಲಾಗೆ ಶುರುವಾಯ್ತು ನಡುಕ.. ಭಾರೀ ಬೇಡಿಕೆ, ಟಿವಿಎಸ್‌..

ಟಿವಿಎಸ್ ಮೋಟಾರ್ (TVS Motor) ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಬೈಕ್ ಹಾಗೂ ಸ್ಕೂಟರ್‌ಗಳು ಹೆಚ್ಚು ಆಕರ್ಷಕವಾಗಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ಇತ್ತೀಚೆಗೆ ಟಿವಿಎಸ್ ಫೆಬ್ರವರಿ ತಿಂಗಳ ಒಟ್ಟಾರೆ ಮಾರಾಟದ ಅಂಕಿಅಂಶಗಳ ವರದಿಯನ್ನು ಪ್ರಕಟಿಸಿದ್ದು, ಬರೋಬ್ಬರಿ 403,976 ಯುನಿಟ್ ವಾಹನಗಳನ್ನು ಮಾರಾಟಗೊಳಿಸಿದೆ. 2024ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 368,424 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 10% ಬೆಳವಣಿಗೆ ಸಾಧಿಸಿದೆ.

1.17 ಲಕ್ಷ.. 102 ಕಿ.ಮೀ ರೇಂಜ್.. ಶೋರೂಂಗೆ ಬಂದೇ ಬಿಡ್ತು ಹೊಸ..

ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. ಕಳೆದ ತಿಂಗಳು ಅದ್ದೂರಿಯಾಗಿ ತೆರೆಬಿದ್ದಿದ್ದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಕಂಪನಿಯು ಹೊಚ್ಚ ಹೊಸ ಕ್ಯೂಸಿ1(QC1) ಹಾಗೂ ಆಕ್ಟಿವಾ ಇ (Activa e) ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಮಾರಟಕ್ಕೆ ತಂದಿತ್ತು. ಸದ್ಯ, ಹೋಂಡಾ ಕಂಪನಿಯು ನೂತನ 'ಆಕ್ಟಿವಾ ಇ' ಮಾಡೆಲ್‌ನ್ನು ದೇಶಾದ್ಯಂತ ವಿವಿಧ ಶೋರೂಂಗಳಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ನೀಡಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಮುಂದಿನ ವಾರದಿಂದಲೇ ಈ ಸ್ಕೂಟರ್‌ನ ವಿತರಣೆಗಳು ಶುರುವಾಗಲಿದೆ.

33.85 ಕಿ.ಮೀ ಮೈಲೇಜ್.. 4 ಲಕ್ಷ, ಮಾರುತಿ ಸುಜುಕಿ ಆಲ್ಟೊ ಕಾರಿನಲ್ಲಿ..

ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದೆ. ಇದು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ದೊರೆಯುತ್ತದೆ. ಈ ಕಾರನ್ನು ಸುರಕ್ಷತೆಗೆ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ ಆಯ್ಕೆಯಲ್ಲಿ ಮಾರಾಟಗೊಳಿಸಲಾಗಿತ್ತು. ಸದ್ಯ, 6 ಏರ್‌ಬ್ಯಾಗ್‌ಗಳೊಂದಿಗೆ ನವೀಕರಿಸಿ ಹೊರತರಲಾಗಿದೆ. ಬನ್ನಿ.. ಈ ಕಾರಿನ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.
Advertisement

ಆಕ್ಟಿವಾ ಇ ಪ್ರತಿಸ್ಪರ್ಧಿ: ಹೊಸ ಸುಜುಕಿ ಆಕ್ಸೆಸ್ ಇ-ಸ್ಕೂಟರ್..

ಸುಜುಕಿ ಮೋಟಾರ್‌ಸೈಕಲ್ ಇಂಡಿಯಾ (Suzuki Motorcycle India), ದೇಶೀಯ ಮಾರುಕಟ್ಟೆಯಲ್ಲಿ ಆಕ್ಸೆಸ್ 125 ಸ್ಕೂಟರ್‌ನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇದೇ ಸ್ಕೂಟರ್‌ನ್ನು ಎಲೆಕ್ಟ್ರಿಕ್ ರೂಪದಲ್ಲಿಯೂ ಬಿಡುಗಡೆಗೊಳಿಸಲು ಕಂಪನಿಯು ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳತ್ತಿದೆ. ಕಳೆದ ತಿಂಗಳು ನವದೆಹಲಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಹೊಚ್ಚ ಹೊಸ ಇ ಆಕ್ಸೆಸ್ (e Access) ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅನಾವರಣಗೊಳಿಸಿತ್ತು. ಸದ್ಯ ಈ ನೂತನ ಸ್ಕೂಟರ್ ಹಬ್ಬದ ಋತುವಿನಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.