Honda: ಹೊಸ ಬಣ್ಣಗಳೊಂದಿಗೆ 2025 ಹೋಂಡಾ ಶೈನ್ 125 ಬೈಕ್ ಬಿಡುಗಡೆ..
ಆಟೋಮೊಬೈಲ್ಸ್
- 1 year, 8 month, 28 days ago
ಹೋಂಡಾ ಸ್ಕೂಟರ್ & ಮೋಟಾರ್‌ಸೈಕಲ್ ಇಂಡಿಯಾ (Honda Scooter & Motorcycle India), ವಿಶ್ವಾಸಾರ್ಹ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದ್ದು, ಸಾಮಾನ್ಯ ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ಸದ್ಯ, 2025ರ ಶೈನ್ 125 (Shine 125) ಬೈಕ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿದೆ. ಈ ನೂತನ ಮೋಟಾರ್‌ಸೈಕಲ್ ಹಲವು ಹೊಸತನಗಳಿಗೂ ಸಾಕ್ಷಿಯಾಗಿದ್ದು, ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.