Tata: ಪವರ್ ತೋರಿಸಿದ ಟಾಟಾ.. ಅಗ್ಗದ ಹೊಸ ಕಾರಿಗೆ 5-ಸ್ಟಾರ್ ಸೇಫ್ಟಿ..
ಆಟೋಮೊಬೈಲ್ಸ್
- 7 month, 22 days ago
ಇತ್ತೀಚೆಗೆ 2026ರ ನೂತನ ಟಾಟಾ ಪಂಚ್ ಫೇಸ್‌ಲಿಫ್ಟ್ (Tata Punch Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) 'ಪಂಚ್ ಫೇಸ್‌ಲಿಫ್ಟ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ತೀರ್ಮಾನಿಸಿದೆ.