ಬಡವರ ಪ್ರೀಮಿಯಂ ಕಾರಿದು.. 5.35 ಲಕ್ಷ ರೂಪಾಯಿ, 20.89 Km ಮೈಲೇಜ್..
ಆಟೋಮೊಬೈಲ್ಸ್
- 7 month, 26 days ago
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಎಂದೇ ಮನೆ ಮಾತಾಗಿದೆ. ಈ ಕಾರಿಗೆ ಫುಲ್ ಡಿಮ್ಯಾಂಡ್ ಇದ್ದು, ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಕೊಂಡುಕೊಳ್ಳುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್ - 2025) 'ಇಗ್ನಿಸ್' ಭಾರೀ ಸಂಖ್ಯೆ ಮಾರಾಟಗೊಂಡಿದೆ. ಒಟ್ಟು 1,910 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 749 ಯುನಿಟ್‌ಗಳನ್ನು ಮಾರಲಾಗಿದೆ. ಈ ಅಂಕಿಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 155% ಬೆಳವಣಿಗೆಯಾಗಿದೆ.