Short News

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ದೇಶದಲ್ಲಿ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ...

ಕರ್ನಾಟಕ ವಿಧಾನಸಭಾ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ತೈಲ ಕಂಪೆನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಹೆಚ್ಚಳ ಮಾಡುವ ಮೂಲಕ ವಾಹನ ಸವಾರರಿಗೆ ಶಾಕ್ ನೀಡಿವೆ. ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್‌ ದರದಲ್ಲಿ ಪ್ರತಿ ಲೀಟರ್‌ಗೆ 23 ಪೈಸೆ ಹಾಗೂ ಡೀಸೆಲ್‌ ದರದಲ್ಲಿ ಲೀಟರ್‌ಗೆ 23ಪೈಸೆ ಏರಿಕೆಯಾಗಿದ್ದು, ಕ್ರಮವಾಗಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ.76.54 ಪೈಸೆ ಹಾಗೂ ಡೀಸೆಲ್ ಬೆಲೆ ರೂ. 67.94 ಪೈಸೆ ಬೆಲೆ ನಿಗದಿ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಿಂದ ವಾಹನ ಸವಾರರು ಕಂಗಾಲಾಗಿದ್ದಾರೆ.
ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ವಿಧಾನಸಭಾ ಕ್ಷೇತ್ರಕ್ಕೆ ಅವರ ಸೋದರ ಪ್ರಹ್ಲಾದ್ ಬಾಬು ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಪ್ರಹ್ಲಾದ್ ಬಾಬು ಹೆಸನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದರೆ ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ. ಜೂನ್ 11ರಂದು ಮತದಾನ ನಡೆಯಲಿದ್ದು, ಜೂನ್ 13ಕ್ಕೆ ಮತ ಎಣಿಕೆ ನಡೆಯಲಿದೆ.
ಎಸ್ಬಿಐ ತ್ರೈಮಾಸಿಕ ಫಲಿತಾಂಶ, ರೂ. 7,720 ಕೋಟಿ ನಷ್ಟ

ಎಸ್ಬಿಐ ತ್ರೈಮಾಸಿಕ ಫಲಿತಾಂಶ, ರೂ. 7,720 ಕೋಟಿ ನಷ್ಟ

  • ದೇಶದ ಅತಿದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿರುವ ಎಸ್ಬಿಐ 2018 ಮಾರ್ಚ್ ತಿಂಗಳಲ್ಲಿ ಕೊನೆಗೊಂಡ ತ್ರೈಮಾಸಿಕದಲ್ಲಿ ರೂ. 7,720 ಕೋಟಿ ನಷ್ಟ ಅನುಭವಿಸಿದೆ. ಇದು ಸತತ ಎರಡನೇ ತ್ರೈಮಾಸಿಕ ನಷ್ಟವಾಗಿದೆ.
  • ಡಿಸೆಂಬರ್ ಕೊನೆಗೊಂಡ ತ್ರೈಮಾಸಿಕದಲ್ಲಿ ಬ್ಯಾಂಕ್ ರೂ. 2416.37 ಕೋಟಿ ನಿವ್ವಳ ನಷ್ಟ ಅನುಭವಿಸಿದೆ.
  • ಕಳೆದ ವರ್ಷಕ್ಕೆ ಹೋಲಿಸಿದರೆ ಎರಡುಪಟ್ಟು ಸಾಲ ಹೆಚ್ಚಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ರೂ. 11,740 ಕೋಟಿ ಇತ್ತು. ಮಾರ್ಚ್ ಅಂತ್ಯದ ತ್ರೈಮಾಸಿಕದಲ್ಲಿ ಹಿಂದಿನ ತ್ರೈಮಾಸಿಕದಲ್ಲಿ 10.35% ರಿಂದ 10.9% ಕ್ಕೆ ಏರಿದೆ.
ಹೆಚ್ ಡಿಕೆ ಪ್ರಮಾಣವಚನಕ್ಕೆ ಭರ್ಜರಿ ಸಿದ್ಧತೆ, 1 ಲಕ್ಷ ಆಸನದ ವ್ಯವಸ್ಥೆ

ಹೆಚ್ ಡಿಕೆ ಪ್ರಮಾಣವಚನಕ್ಕೆ ಭರ್ಜರಿ ಸಿದ್ಧತೆ, 1 ಲಕ್ಷ ಆಸನದ ವ್ಯವಸ್ಥೆ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ  ಹೆಚ್.ಡಿ.ಕುಮಾರಸ್ವಾಮಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭವು ಬುಧವಾರ ಸಂಜೆ 4.30ಕ್ಕೆ ನಡೆಯಲಿದೆ. ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಸೋಮವಾರದಿಂದಲೇ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 80*40 ಅಡಿ ಗಾತ್ರದ ಬೃಹತ್ ವೇದಿಕೆ ಸಜ್ಜುಗೊಳ್ಳುತ್ತಿದ್ದು, ಗಣ್ಯರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಸೇರಿದಂತೆ ಸುಮಾರು ಸುಮಾರು 1 ಲಕ್ಷ ಮಂದಿಗೆ ಆಸನಗಳ ಏರ್ಪಾಡು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಪ್ರಮಾಣ ವಚನ ಸ್ವೀಕಾರ ವೀಕ್ಷಿಸಲು ಬೃಹತ್ ಗಾತ್ರದ ಸುಮಾರು 15ಕ್ಕೂ ಹೆಚ್ಚು ಎಲ್ಇಡಿ ಪರದೆಗಳನ್ನು ಹಾಕಲಾಗುತ್ತಿದೆ.