Short News

2 ಸಾವಿರ ರುಪಾಯಿ ನೋಟು ವಾಪಸ್ ಪ್ರಸ್ತಾವ ಸರಕಾರಕ್ಕಿಲ್ಲ

2 ಸಾವಿರ ರುಪಾಯಿ ನೋಟು ವಾಪಸ್ ಪ್ರಸ್ತಾವ ಸರಕಾರಕ್ಕಿಲ್ಲ

2 ಸಾವಿರ ಮುಖ ಬೆಲೆಯ ನೋಟುಗಳನ್ನು ಹಿಂಪಡೆಯುವ ಯಾವ ಪ್ರಸ್ತಾವವೂ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ. 2016ರ ನವೆಂಬರ್ ನಲ್ಲಿ 1,000 ಹಾಗೂ 500 ರುಪಾಯಿ ಮುಖಬೆಲೆಯ ನೋಟುಗಳ ಅಮಾನ್ಯ ಮಾಡಿದ ನಂತರ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು 2 ಸಾವಿರ ರುಪಾಯಿಯ ನೋಟು ಪರಿಚಯಿಸಿತ್ತು. ಹಣಕಾಸು ಖಾತೆಯ ರಾಜ್ಯ ಸಚಿವ ಪೊಣ್ ರಾಧಾಕೃಷ್ಣನ್ ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಹೀಗೆ ಉತ್ತರಿಸಿದರು. ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಹಣಕಾಸು ಖಾತೆ ರಾಜ್ಯ ಸಚಿವ ಶಿವ್ ಪ್ರತಾಪ್ ಶುಕ್ಲಾ, 2008ರಿಂದ 2014ರ ಮಧ್ಯೆ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳು ಸಿಕ್ಕಾಪಟ್ಟೆ ಸಾಲ ನೀಡಿವೆ ಎಂದಿದ್ದಾರೆ.
ಸತತ ಮಳೆಗೆ ನಲುಗಿದ ಕೊಡಗಿನಲ್ಲಿ ಭೂ ಕುಸಿತಕ್ಕೆ ಮೂವರು ಸಾವು

ಸತತ ಮಳೆಗೆ ನಲುಗಿದ ಕೊಡಗಿನಲ್ಲಿ ಭೂ ಕುಸಿತಕ್ಕೆ ಮೂವರು ಸಾವು

ಕೊಡಗಿನಲ್ಲಿ ಸುರಿಯುತ್ತಿದ್ದ ಮಳೆಗೆ ಇದುವರೆಗೆ ಕೇವಲ ಆಸ್ತಿಪಾಸ್ತಿ ಮಾತ್ರ ನಷ್ಟವಾಗಿದ್ದರೆ, ಇದೀಗ ಭೂಕುಸಿತ ಸಂಭವಿಸಿದ ಕಾರಣ ಮಣ್ಣಿನಡಿಯಲ್ಲಿ ಸಿಲುಕಿ ಮೂವರು ಮೃತಪಟ್ಟಿದ್ದಾರೆ. ಮಡಿಕೇರಿ ಸಮೀಪದ ತಾಳತ್‍ಮನೆಯಲ್ಲಿ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವನ್ನಪ್ಪಿದ್ದರು, ಅದರ ಬೆನ್ನಲ್ಲೇ ಸಮೀಪದ ಕಾಟಕೇರಿಯಲ್ಲಿ ಗುಡ್ಡಕುಸಿದ ಕಾರಣ ಮಣ್ಣಿನಡಿಗೆ ಒಂದೇ ಕುಟುಂಬದ ನಾಲ್ವರು ಸಿಲುಕಿದ್ದು ತಕ್ಷಣ ಕಾರ್ಯಾಚರಣೆ ನಡೆಸಿ ಮಣ್ಣಿನಿಂದ ಹೊರತೆಗೆಯಲಾಯಿತಾದರೂ ಅಷ್ಟರಲ್ಲೇ ಮೂವರು ಮೃತಪಟ್ಟಿದ್ದರು. ಒಬ್ಬನನ್ನು ರಕ್ಷಿಸಲಾಗಿದ್ದು, ಈತ ಗಂಭೀರ ಸ್ಥಿತಿಯಲ್ಲಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅಬ್ಬಾಬ್ಬಾ ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ 40 ಕೋಟಿ ನಷ್ಟ!

ಅಬ್ಬಾಬ್ಬಾ ಉಡುಪಿ ಜಿಲ್ಲೆಯಲ್ಲಿ ಮಹಾಮಳೆಗೆ 40 ಕೋಟಿ ನಷ್ಟ!

ರಾಜ್ಯದಲ್ಲಿ ಮಲೆನಾಡು ಶಿವಮೊಗ್ಗ, ಕರಾವಳಿ, ದಕ್ಷಿಣ ಕನ್ನಡ, ಬಳ್ಳಾರಿ, ದಾವಣಗೆರೆ ಜಿಲ್ಲೆಯಾದ್ಯಂತ ಮಳೆ ನಿರಂತರವಾಗಿ ಸುರಿಯುತ್ತಲೇ ಇದೆ. ಜಿಲ್ಲಾಡಳಿತ ನರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಅಂದಹಾಗೆ ಉಡುಪಿಯಲ್ಲಿ ಮಳೆಯ ಆರ್ಭಟಕ್ಕೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, 40 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಕಳಿಸಲಾಗಿದೆ. ಮುಖ್ಯವಾಗಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ವ್ಯಾಪ್ತಿಯಲ್ಲಿ ಅತಿ ಹೆಚ್ಚು ಹಾನಿ ಉಂಟಾಗಿದ್ದು, ಈತನಕ ಹಲವು ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ.
"ಒಂದೇ ಒಂದು ಬಾರಿ ವಾಜಪೇಯಿ  ಭಾಷಣ ಕೇಳಬೇಕು ಎಂದೆನಿಸುತ್ತಿದೆ"

"ಒಂದೇ ಒಂದು ಬಾರಿ ವಾಜಪೇಯಿ ಭಾಷಣ ಕೇಳಬೇಕು ಎಂದೆನಿಸುತ್ತಿದೆ"

ಅಟಲ್ ಬಿಹಾರಿ ವಾಜಪೇಯಿ ಅವರಿಂದ ಮತ್ತೊಮ್ಮೆ ಭಾಷಣವನ್ನು ಕೇಳಬೇಕು ಎಂದೆನಿಸುತ್ತಿದೆ ಎಂದು ವಾಜಪೇಯಿ ಅವರ ಸೋದರಿಯ ಮಗಳು ಕಾಂತಿ ಮಿಶ್ರಾ ಹೇಳಿಕೊಂಡಿದ್ದಾರೆ. ಅವರು ಭಾಷಣ ಮಾಡುವುದನ್ನು ನಮ್ಮ ಕುಟುಂಬಸ್ಥರು ಎಂದೂ ಮರೆಯುವುದಿಲ್ಲ ಎಂದಿದ್ದಾರೆ. ಮಾಜಿ ಪ್ರಧಾನಿ ಮತ್ತು ಭಾರತರತ್ನ ಪುರಸ್ಕೃತ ವಾಜಪೇಯಿ ಅವರು ವಯೋ ಸಹಜ ಅನಾರೋಗ್ಯಕ್ಕೀಡಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ನಲ್ಲಿ ಇಡಲಾಗಿದೆ. ಅವರ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಗೊತ್ತಾಗುತ್ತಿದ್ದಂತೆಯೇ ಸಂಬಂಧಿಗಳು, ಗಣ್ಯರು ಆಸ್ಪತ್ರೆಯತ್ತ ದೌಡಾಯಿದುತ್ತಿದ್ದು, ಆಸ್ಪತ್ರೆಯ ಸುತ್ತ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more