Short News

'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆದ ರಮೇಶ್

'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆದ ರಮೇಶ್

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಈಗ ನಟ ರಮೇಶ್ ಅರವಿಂದ್ ಆಗಮಿಸಿದ್ದಾರೆ. ರಮೇಶ್ ಕಾರ್ಯಕ್ರಮಕ್ಕೆ ಬಂದಿರುವ ಫೋಟೋ ಇದೀಗ 'ಫಿಲ್ಮಿಬೀಟ್ ಕನ್ನಡ'ಕ್ಕೆ ಲಭ್ಯವಾಗಿದೆ. ರಮೇಶ್ ಅವರ ಸಂಚಿಕೆಯ ಚಿತ್ರೀಕರಣ ಈಗಾಗಲೇ ನಡೆದಿದೆ. 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮ ಮುಖ್ಯವಾಗಿ ಸ್ನೇಹಿತರಿಗಾಗಿ ಇರುವ ಕಾರ್ಯಕ್ರಮ. ಆದರೆ, ರಮೇಶ್ ಜೊತೆಗೆ ಬಂದಿರುವ ಅವರ ಆಪ್ತ ಸ್ನೇಹಿತ ಯಾರು ಎಂಬುದು ಇನ್ನು ನಿಗೂಢವಾಗಿದೆ. ಹಾಗೆ ಹೇಳಬೇಕು ಅಂದರೆ ಶಿವಣ್ಣ ಅವರೇ ರಮೇಶ್ ಗೆ ಹತ್ತಿರದ ಸ್ನೇಹಿತರು.
ತುಮಕೂರು ನಗರ ಬಿಜೆಪಿ ಟಿಕೆಟ್ ಶೀಘ್ರ ಪ್ರಕಟಿಸಲು ಬಿಎಸ್‌ವೈಗೆ ಮನವಿ

ತುಮಕೂರು ನಗರ ಬಿಜೆಪಿ ಟಿಕೆಟ್ ಶೀಘ್ರ ಪ್ರಕಟಿಸಲು ಬಿಎಸ್‌ವೈಗೆ ಮನವಿ

ತುಮಕೂರು ನಗರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಶೀಘ್ರವಾಗಿ ಘೋಷಿಸುವಂತೆ ಒತ್ತಾಯಿಸಿ ತುಮಕೂರು ನಗರ ವೀರಶೈವ ಸಮಾಜದ ಮುಖಂಡರ ನಿಯೋಗ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿತು. ತುಮಕೂರಿನಲ್ಲಿ ಬಿಜೆಪಿ ಯಾರಿಗೂ ಖಚಿತವಾಗದೆ ಕಾರ್ಯಕರ್ತರಲ್ಲಿ ಗೊಂದಲ ಏರ್ಪಟ್ಟಿರುವ ಕಾರಣ, ಬೆಂಗಳೂರಿನಲ್ಲಿ ಮಂಗಳವಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ವೀರಶೈವ ಸಮಾಜದ ಮುಖಂಡರು ಆದಷ್ಟು ಬೇಗ ಸಮರ್ಥ ಮತ್ತು ಈಗ ಕ್ಷೇತ್ರದಲ್ಲಿ ನಿರ್ಮಾಣವಾಗಿರುವ ಗೊಂದಲವನ್ನು ನಿವಾರಿಸುವ ಶಕ್ತಿ, ಜಾಣ್ಮೆಯುಳ್ಳ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು.
ಭಾರೀ ಬೇಡಿಕೆ, ಮೈಸೂರಿಗೆ ಮತ್ತೊಂದು ಫ್ಲೈ ಬಸ್

ಭಾರೀ ಬೇಡಿಕೆ, ಮೈಸೂರಿಗೆ ಮತ್ತೊಂದು ಫ್ಲೈ ಬಸ್

ಕೆಎಸ್ಆರ್‌ಟಿಸಿ ಫ್ಲೈ ಬಸ್ ಸೇವೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಮೈಸೂರು-ಬೆಂಗಳೂರು ಮಾರ್ಗಕ್ಕೆ ಭಾರೀ ಬೇಡಿಕೆ ಬಂದಿದೆ. ಆದ್ದರಿಂದ, ಮತ್ತೊಂದು ಬಸ್‌ಅನ್ನು ಹೆಚ್ಚುರಿಯಾಗಿ ಓಡಿಸಲಾಗುತ್ತದೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾ.22ರಿಂದ ಮತ್ತೊಂದು ಫ್ಲೈ ಬಸ್ ಮೈಸೂರಿಗೆ ಸಂಚಾರ ನಡೆಸಲಿದೆ. 2013ರಲ್ಲಿ ಆರಂಭವಾಗಿದ್ದ ಪ್ಲೈ ಬಸ್ ಸೇವೆ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೆಚ್ಚುವರಿ ಬಸ್ ಮೈಸೂರು-ಬೆಂಗಳೂರು ನಗರದ ನಡುವೆ ದಿನಕ್ಕೆ 2 ಬಾರಿ ಸಂಚಾರ ನಡೆಸಲಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮ

ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮ

ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಇತ್ತೀಚೆಗೆ ಉತ್ತರ ಪ್ರದೇಶದ ಗೋರಖ್ ಪುರ ಮತ್ತು ಫಲ್ಪುರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೀಡಿದ ಕಳಪೆ ಪ್ರದರ್ಶನದ ನಂತರ ಈ ಬೆಳವಣಿಗೆ ಸಂಭವಿಸಿದೆ. ಗೋರಖ್ ಪುರ ಕ್ಷೇತ್ರವನ್ನು ಈ ಮೊದಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿನಿಧಿಸುತ್ತಿದ್ದರೆ, ಫಲ್ಪುರ ಕ್ಷೇತ್ರವನ್ನು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿನಿಧಿಸುತ್ತಿದ್ದರು.