Short News

ಸದ್ದಿಲ್ಲದೆ ಚಿತ್ರರಂಗದಲ್ಲಿ ಶೈನ್ ಆಗುತ್ತಿದ್ದಾಳೆ ಶ್ರೀಲೀಲಾ

ಸದ್ದಿಲ್ಲದೆ ಚಿತ್ರರಂಗದಲ್ಲಿ ಶೈನ್ ಆಗುತ್ತಿದ್ದಾಳೆ ಶ್ರೀಲೀಲಾ

ಕನ್ನಡದಲ್ಲೊಬ್ಬಳು ದೀಪಿಕಾ ಪಡುಕೋಣೆ ಹುಟ್ಟುಕೊಂಡಿದ್ದಾಳೆ. ಹೌದು ಅಭಿನಯಿಸಿದ ಮೊದಲನೇ ಚಿತ್ರದಲ್ಲೇ ಭರವಸೆ ಮೂಡಿಸಿ ಚಿತ್ರ ಬಿಡುಗಡೆಗೂ ಮುನ್ನವೇ ಕನ್ನಡದ ಸ್ಟಾರ್ ನಾಯಕರ ಜೊತೆಯಲ್ಲಿ ಅಭಿನಯಿಸಲು ಅವಕಾಶ ಪಡೆದುಕೊಂಡಿದ್ದಾರೆ. ಶ್ರೀ ಲೀಲಾ ಸದ್ಯ ಕನ್ನಡ ಸಿನಿಮಾರಂಗಕ್ಕೆ 'ಕಿಸ್' ಚಿತ್ರದ ಮೂಲಕ ಪರಿಚಯವಾಗುತ್ತಿರುವ ನಟಿ. ಬೆಂಗಳೂರಿನವರೇ ಆದ ಈಕೆ ಸೆಕೆಂಡ್ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. 'ಕಿಸ್' ಸಿನಿಮಾ ಆರಂಭ ಆಗುವ ಮುನ್ನವೇ ಚಿತ್ರದ ಫೋಟೋಶೂಟ್ ನಲ್ಲೇ ಶ್ರೀ ಲೀಲಾ ಪ್ರೇಕ್ಷಕರ ಗಮನ ಸೆಳೆದಿದ್ದರು. ಶ್ರೀ ಲೀಲಾ ಅವರನ್ನು ನೋಡಿರುವ ಸಿನಿಮಾ ಮಂದಿ ಹೊಸ ಚಿತ್ರಗಳಲ್ಲಿ ಅಭಿನಯಿಸಲು ಅವಕಾಶ ನೀಡುತ್ತಿದ್ದಾರೆ.
ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ: ಬಿಜೆಪಿಯಿಂದ ಶ್ರದ್ಧಾಂಜಲಿ

ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯತಿಥಿ: ಬಿಜೆಪಿಯಿಂದ ಶ್ರದ್ಧಾಂಜಲಿ

ಭಾರತೀಯ ಜನಸಂಘವನ್ನು ಸ್ಥಾಪಿಸಿದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ನಿಧನರಾಗಿ ಇಂದಿಗೆ 65 ವರ್ಷ. ಅವರು ನಿಧನರಾದ ದಿನವನ್ನು(ಜೂನ್ 23) ಬಿಜೆಪಿ ನಾಯಕರು ಬಲಿದಾನ ದಿನವನ್ನಾಗಿ ಆಚರಿಸಿ, ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವುದು ವಾಡಿಕೆ. ಈ ಬಾರಿಯೂ ಬಿಜೆಪಿಯ ಹಲವು ನಾಯಕರು ಮುಖರ್ಜಿ ಅವರ ಪುಣ್ಯತಿಥಿಯನ್ನು ಸ್ಮರಿಸಿದ್ದಾರೆ. ಭಾರತೀಯ ಜನಸಂಘವೇ ನಂತರ ಭಾರತೀಯ ಜನತಾಪಕ್ಷ(ಬಿಜೆಪಿ)ವಾಗಿ ಬದಲಾಗಿ, ಇದೀಗ ದೇಶದ ಬಹುಪಾಲು ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ.
ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದ ಸ್ಟಾಲಿನ್ ಪೊಲೀಸ್ ವಶಕ್ಕೆ

ರಾಜ್ಯಪಾಲರ ವಿರುದ್ಧ ಪ್ರತಿಭಟನೆ ಮಾಡಿದ ಸ್ಟಾಲಿನ್ ಪೊಲೀಸ್ ವಶಕ್ಕೆ

ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಅವರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ರಾಜ್ಯಪಾಲ ಬನ್ವಾರಿಲಾಲ್, ಸಂಯುಕ್ತ ವ್ಯವಸ್ಥೆಯ ತತ್ತ್ವದ ವಿರೋಧಿಯಾಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದ ಡಿಎಂಕೆಯ ಹಲವು ಮುಖಂಡರನ್ನು ನಿನ್ನೆ ಬಂಧಿಸಲಾಗಿತ್ತು. ಈ ಕ್ರಮವನ್ನು ವಿರೋಧಿಸಿ ಎಂಕೆ ಸ್ಟಾಲಿನ್ ಇಂದು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 
ಕಾರಿನ ಮೇಲೆ ದಾಳಿ ಮಾಡಿದ ಕಾಡಾನೆ, ಆರು ಮಂದಿಗೆ ಗಂಭೀರ ಗಾಯ

ಕಾರಿನ ಮೇಲೆ ದಾಳಿ ಮಾಡಿದ ಕಾಡಾನೆ, ಆರು ಮಂದಿಗೆ ಗಂಭೀರ ಗಾಯ

ಕಾಡಾನೆ ದಾಳಿ ನಡೆಸಿದ ಪರಿಣಾಮ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರು ಆರು ಮಂದಿ ಗಾಯಗೊಂಡಿದ್ದಾರೆ. ಕಡೂರು ಮೂಲದ ಯಾತ್ರಾರ್ಥಿಗಳಿದ್ದ ಮಾರುತಿ ಓಮ್ನಿ ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾರು ಬಿಳಿನೆಲೆ ಸಮೀಪ ತಲುಪಿದಾಗ ಕಾಡಾನೆ ರಸ್ತೆಯನ್ನು ದಾಟುತ್ತಿತ್ತು. ಧಿಡೀರನೇ ಕಾಡಾನೆಯನ್ನು ಕಂಡ ಕಾರ್ ಚಾಲಕ ಆನೆಯ ಬಳಿ ಕಾರು ನಿಲ್ಲಿಸಿದ್ದು, ಈ ವೇಳೆ ವಿಚಲಿತಗೊಂಡ ಆನೆ ಕಾರಿನ ಮೇಲೆ ದಾಳಿ ಮಾಡಿದೆ ಎನ್ನಲಾಗಿದೆ. ಮಾರುತಿ ಆಮ್ನಿ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more