Short News

ಸೀರೆಯಲ್ಲೇ ಪುಶ್ ಅಪ್ಸ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ ಮಂದಿರಾ ಬೇಡಿ

ಸೀರೆಯಲ್ಲೇ ಪುಶ್ ಅಪ್ಸ್ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ ಮಂದಿರಾ ಬೇಡಿ

ನಟಿ ಹಾಗೂ ಖ್ಯಾತ ನಿರೂಪಕಿ ಮಂದಿರಾ ಬೇಡಿ ಫಿಟ್ನೆಸ್ ಬಗ್ಗೆ ಸಿಕ್ಕಾಪಟ್ಟೆ ಕಾಳಜಿ ವಹಿಸ್ತಾರೆ. ಇದೀಗ ಮಂದಿರಾ ಸೀರೆ ಉಟ್ಟು, ಹೈ ಹೀಲ್ಸ್ ತೊಟ್ಟ ಪುಶ್ ಅಪ್ಸ್ ಮಾಡ್ತಿರೋ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ಟಿವ್ ಆಗಿರೋ ಮಂದಿರಾ ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ಬೇಡಿಗೆ ಈಗ 45 ವರ್ಷ. ಈಗಲೂ 20ರ ಹರೆಯದವರಂತೆ ತಮ್ಮ ದೇಹದ ಫಿಟ್ನೆಸ್ ಕಾಪಾಡಿಕೊಂಡಿದ್ದಾರೆ ಅನ್ನೋದಕ್ಕೆ ಇದೇ ಸಾಕ್ಷಿ.
ಮಗನ ಗೂಂಡಾಗಿರಿ, ಸದನದಲ್ಲಿ ಕ್ಷಮೆ ಕೇಳಿದ ತಂದೆ ಹ್ಯಾರಿಸ್

ಮಗನ ಗೂಂಡಾಗಿರಿ, ಸದನದಲ್ಲಿ ಕ್ಷಮೆ ಕೇಳಿದ ತಂದೆ ಹ್ಯಾರಿಸ್

ತಮ್ಮ ಮಗ ಮೊಹಮ್ಮದ್ ನಲಪಾಡ್ ಗೂಂಡಾಗಿರಿ ಪ‍್ರಕರಣಕ್ಕೆ ಸಂಬಂಧಿಸಿ ಶಾಸಕ ಎನ್.ಎ.ಹ್ಯಾರಿಸ್ ಸದನದಲ್ಲಿ ಕ್ಷಮೆ ಕೋರಿದರು ಸದನದ ಸದಸ್ಯನಾದರೂ, ಮೊಹಮ್ಮದ್ ನಲಪಾಡ್‌ ತಂದೆಯೂ ಹೌದು, ಆತ ಮುಂದೆ ತಪ್ಪು ಮಾಡದಂತೆ ನೋಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು. ಕಾನೂನು ಎಲ್ಲರಿಗೂ ಸಮಾನ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಮಗನ ರಕ್ಷಣೆಗಾಗಿ ನಾನು ಸರ್ಕಾರಕ್ಕೆ ಒತ್ತಡ ಹೇರಿಲ್ಲ. ಆತ ನನಗೆ ಸಿಕ್ಕಿದ್ದರೆ ನಾನೇ ಪೊಲೀಸ್ ಠಾಣೆಗೆ ಒಪ್ಪಿಸುತ್ತಿದ್ದೆ. ಸದನ, ಸರ್ಕಾರಕ್ಕೆ ಅಪಮಾನವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಎಲ್ಲರ ಮುಂದೆ ಹೇಳಿದ್ದಾರೆ.
ಕಣ್ಸನ್ನೆ ಮಾಡಿ 'ನ್ಯಾಷನಲ್ ಕ್ರಶ್' ಆಗಿದ್ದ ಪ್ರಿಯಾಗೆ ಈಗ ಸಂಕಷ್ಟ.!

ಕಣ್ಸನ್ನೆ ಮಾಡಿ 'ನ್ಯಾಷನಲ್ ಕ್ರಶ್' ಆಗಿದ್ದ ಪ್ರಿಯಾಗೆ ಈಗ ಸಂಕಷ್ಟ.!

ಬರಿ ಕಣ್ಸನ್ನೆಯಿಂದಲೇ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಮಲಯಾಳಂ ನಟಿ ಪ್ರಿಯಾ ವಾರಿಯರ್ ರಾತ್ರೋರಾತ್ರಿ ಸೂಪರ್ ಸ್ಟಾರ್ ಆಗಿದ್ದಾರೆ. ಮಕ್ಕಳಿಂದ ಹಿಡಿದು ಮುದುಕರವರೆಗೂ ಪ್ರಿಯಾ ಕಣ್ಸನ್ನೆ ಬಗ್ಗೆನೇ ಮಾತನಾಡ್ತಿದ್ದಾರೆ.

ಹೀಗೆ, ಕಳೆದ ಕೆಲ ದಿನಗಳಿಂದ ಸಾಮಾನ್ಯ ಜನರ ಹಾಟ್ ಟಾಪಿಕ್ ಆಗಿರುವ ಪ್ರಿಯಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಿಯಾ ಪ್ರಕಾಶ್ ವಾರಿಯರ್ ಅವರಿಂದ ಮುಸ್ಲಿಂ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಎಫ್.ಐ.ಆರ್ ದಾಖಲಾಗಿದೆ.

ಸೇವೆ ಖಾಯಂಗೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ

ಸೇವೆ ಖಾಯಂಗೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ

ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸಿ ಸೇವೆಯನ್ನು ಖಾಯಂಗೊಳಿಸುವ ಮೂಲಕ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿ ರಾಜ್ಯ ಗುತ್ತಿಗೆ, ದಿನಗೂಲಿ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿ ಅನಿರ್ದಿಷ್ಟ ಮುಷ್ಕರ ಅರಂಭಿಸಿದರು.

ರಾಜ್ಯದ ಎಲ್ಲಾ ಇಲಾಖೆಗಳಲ್ಲಿ ಸುಮಾರು 1.5 ಲಕ್ಷ ಸಂಖ್ಯೆಯಲ್ಲಿ ಈ ನೌಕರರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಸುಮಾರು 30 ವರ್ಷಗಳಿಂದ ಕೆಲಸ ಮಾಡುತ್ತಿರುವ ನೌಕರರು ಸೇರಿದ್ದಾರೆ. ಮಹಿಳೆಯರು ಸೇರಿದಂತೆ ನೂರಾರು ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟ ಮುಷ್ಕರ ಕೈಗೊಂಡಿದ್ದಾರೆ.