Short News

ಸ್ಯಾಂಡಲ್ ವುಡ್ ಗೆ 'ನಿರ್ಮಾಪಕಿ'ಯಾಗಿ ಶ್ರುತಿ ನಾಯ್ಡು ಎಂಟ್ರಿ

ಸ್ಯಾಂಡಲ್ ವುಡ್ ಗೆ 'ನಿರ್ಮಾಪಕಿ'ಯಾಗಿ ಶ್ರುತಿ ನಾಯ್ಡು ಎಂಟ್ರಿ

ಕನ್ನಡ ಕಿರುತೆರೆ ಲೋಕದಲ್ಲಿ ಜನಪ್ರಿಯ ನಿರ್ದೇಶಕಿ ಆಗಿ ಗುರುತಿಸಿಕೊಂಡಿರುವ ಶ್ರುತಿ ನಾಯ್ಡು ಇದೀಗ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದಾರೆ. 'ಶ್ರೀರಸ್ತು ಶುಭಮಸ್ತು', 'ಪುನರ್ ವಿವಾಹ', 'ಮಹಾದೇವಿ', 'ಬ್ರಹ್ಮಗಂಟು' ಮುಂತಾದ ಧಾರಾವಾಹಿಗಳ ರೂವಾರಿ ಆಗಿರುವ ಶ್ರುತಿ ನಾಯ್ಡು ಈಗ ಚಿತ್ರ ನಿರ್ಮಾಪಕಿ ಆಗಲು ಹೊರಟಿದ್ದಾರೆ. 'ಪ್ರೀಮಿಯರ್ ಪದ್ಮಿನಿ' ಎಂಬ ಚಿತ್ರಕ್ಕೆ ಬಂಡವಾಳ ಹಾಕಲು ಶ್ರುತಿ ನಾಯ್ಡು ಮುಂದಾಗಿದ್ದಾರೆ. ಈಗಾಗಲೇ 'ಪ್ರೀಮಿಯರ್ ಪದ್ಮಿನಿ' ಚಿತ್ರದ ಫೋಟೋ ಶೂಟ್ ಕೂಡ ನಡೆದಿದ್ದು, ಸದ್ಯದಲ್ಲೇ ಶೂಟಿಂಗ್ ಶುರು ಆಗಲಿದೆ.
ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಶಾಲಾ ಬಸ್‌ - ರೈಲು ಡಿಕ್ಕಿ, 13ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾವು

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಶಾಲಾ ಬಸ್‌ - ರೈಲು ಡಿಕ್ಕಿ, 13ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸಾವು

ಉತ್ತರ ಪ್ರದೇಶದ ಕುಶೀನಗರದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ದುದಹೀ ರೈಲ್ವೆ ಕ್ರಾಸಿಂಗ್ ಬಳಿ ಶಾಲಾ ಮಕ್ಕಳ ಬಸ್‌ಗೆ ರೈಲು ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಾಲಾ ಬಸ್‌‌ನಲ್ಲಿ ಒಟ್ಟು 25 ಮಕ್ಕಳಿದ್ದರು. ಘಟನೆ ಯಲ್ಲಿ 8 ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತಪಟ್ಟ ಕುಟುಂಬಸ್ಥರಿಗೆ 2ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ರೈಲಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್:ಉ.ಪ್ರದೇಶದಲ್ಲಿ 11  ಮಕ್ಕಳು ಸಾವು

ರೈಲಿಗೆ ಡಿಕ್ಕಿ ಹೊಡೆದ ಸ್ಕೂಲ್ ಬಸ್:ಉ.ಪ್ರದೇಶದಲ್ಲಿ 11 ಮಕ್ಕಳು ಸಾವು

ಶಾಲಾ ವಾಹನವೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಕ್ಕಳು ದುರ್ಮರಣಕ್ಕೀಡಾದ ದುರ್ಘಟನೆ ಉತ್ತರ ಪ್ರದೇಶದ ಖುಷಿ ನಗರದಲ್ಲಿ ನಡೆದಿದೆ.

ಬೆಳ್ಳಂಬೆಳಗ್ಗೆ ಶಾಲೆಗೆ ಹೋರಟಿದ್ದ ಮಕ್ಕಳನ್ನು ಹೊತ್ತು ಸಾಗುತ್ತಿದ್ದ ಬಸ್ಸು ರೈಲ್ವೇ ಕ್ರಾಸಿಂಗ್ ಬಳಿ ತೆರಳುತ್ತಿದ್ದ ಸಂದರ್ಭದಲ್ಲಿ ಚಲಿಸುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಬಸ್ಸಿನಲ್ಲಿ ಸುಮಾರು 20-30 ಮಕ್ಕಳು ಪ್ರಯಾಣಿಸುತ್ತಿದ್ದರು. ಇವರಲ್ಲಿ 13 ವಿದ್ಯಾರ್ಥಿಗಳು ಮೃತರಾಗಿದ್ದು, 8 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ನ್ಯಾಯಾಂಗದಲ್ಲಿ ಹೊಸ ಇತಿಹಾಸ, ಇಂದು ಮಲ್ಹೋತ್ರ ಸುಪ್ರೀಂ ಕೋರ್ಟ್ ಜಡ್ಜ್

ನ್ಯಾಯಾಂಗದಲ್ಲಿ ಹೊಸ ಇತಿಹಾಸ, ಇಂದು ಮಲ್ಹೋತ್ರ ಸುಪ್ರೀಂ ಕೋರ್ಟ್ ಜಡ್ಜ್

ಹಿರಿಯ ವಕೀಲೆ ಇಂದು ಮಲ್ಹೋತ್ರರನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಕೊಲಿಜಿಯಂ ಮಾಡಿದ್ದ ಶಿಫಾರಸ್ಸಿಗೆ ಕೇಂದ್ರ ಸರಕಾರ ಒಪ್ಪಿದೆ. ಈ ಮೂಲಕ ದೇಶದ ನ್ಯಾಯಾಂಗ ಇತಿಹಾಸದಲ್ಲಿ ನೇರವಾಗಿ ಸುಪ್ರೀಂ ನ್ಯಾಯಮೂರ್ತಿಯಾಗಿ ನೇಮಕವಾದ ಪ್ರಥಮ ಮಹಿಳಾ ವಕೀಲೆ ಎಂಬ ಹಿರಿಮೆಗೆ ಇಂದು ಮಲ್ಹೋತ್ರಾ ಪಾತ್ರವಾಗಿದ್ದಾರೆ. ಇಂದು  ಜೊತೆಗೆ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ.ಜೋಸೆಫ್‌ ಹೆಸರನ್ನೂ ಶಿಫಾರಸ್ಸು ಮಾಡಲಾಗಿತ್ತು. ಆದರೆ ಇದಕ್ಕೆ ತಡೆ ಹಿಡಿದಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಕೊಲಿಜಿಯಂ ಇವರಿಬ್ಬರ ಹೆಸರನ್ನು ಜನವರಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.