Short News

ದರ್ಶನ್ ಗೆ ಸವಾಲು ಹಾಕಲು ಬಂದ 'ಸಿಂಗಂ 3' ವಿಲನ್

ದರ್ಶನ್ ಗೆ ಸವಾಲು ಹಾಕಲು ಬಂದ 'ಸಿಂಗಂ 3' ವಿಲನ್

ನಟ ದರ್ಶನ್ ಅವರ 51ನೇ ಸಿನಿಮಾದ ಮುಹೂರ್ತ ಕೆಲ ದಿನಗಳ ಹಿಂದೆ ನಡೆದಿದೆ. ಬಿ.ಸುರೇಶ್ ಅವರ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾವನ್ನು ಪಿ.ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ದರ್ಶನ್ ಅವರ ಹೊಸ ಸಿನಿಮಾಗೆ ಈಗ ಖಡಕ್ ವಿಲನ್ ಎಂಟ್ರಿ ಕೊಟ್ಟಿದ್ದಾರೆ.ಕಾಲಿವುಡ್ ಹಿಟ್ ಸಿನಿಮಾವಾದ 'ಸಿಂಗಂ 3'ದಲ್ಲಿ ನಟಿಸಿದ್ದ ಖಳ ನಟ ಠಾಕೂರ್ ಅನೂಪ್ ಸಿಂಗ್ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ದರ್ಶನ್ ಜೊತೆಗೆ ಮೊದಲ ಬಾರಿಗೆ ಠಾಕೂರ್ ಅನೂಪ್ ಸಿಂಗ್ ತೆರೆ ಹಂಚಿಕೊಳ್ಳಲಿದ್ದಾರೆ. ಈ ಹಿಂದೆ 'ರೋಗ್' ಸಿನಿಮಾದ ಮೂಲಕ ಠಾಕೂರ್ ಅನೂಪ್ ಸಿಂಗ್ ಸ್ಯಾಂಡಲ್

ವೃತ್ತಿ ಜೀವನದಲ್ಲಿಯೇ ಮೊದಲ ಬಾರಿಗೆ ನೈಟ್ ಶೂಟಿಂಗ್ ಮಾಡಿದ ಅಂಬಿ

ವೃತ್ತಿ ಜೀವನದಲ್ಲಿಯೇ ಮೊದಲ ಬಾರಿಗೆ ನೈಟ್ ಶೂಟಿಂಗ್ ಮಾಡಿದ ಅಂಬಿ

ಅಂಬರೀಶ್ ಅವರ ಇಷ್ಟು ವರ್ಷದ ಕೆರಿಯರ್ ನಲ್ಲಿ ಎಂದು ಕೂಡ ರಾತ್ರಿ ಶೂಟಿಂಗ್ ಮಾಡಿರಲಿಲ್ಲವಂತೆ. ಆದರೆ ಇದೇ ಮೊದಲ ಬಾರಿಗೆ 'ಅಂಬಿ ನಿಂಗೆ ವಯಸ್ಸಾಯ್ತೋ' ಚಿತ್ರದ ರಾತ್ರಿ ಶೂಟಿಂಗ್ ನಲ್ಲಿ ಅವರು ಭಾಗಿಯಾಗಿದ್ದಾರೆ.ಕೆಲದಿನಗಳ ಹಿಂದೆ ಚಿತ್ರದ ಚಿತ್ರೀಕರಣ ನಾಗರಬಾವಿ ಹತ್ತಿರ ನಡೆದಿದೆ. ಬೆಳ್ಳಗೆ 12 ಗಂಟೆಗೆ ಶುರುವಾದ ಶೂಟಿಂಗ್ ರಾತ್ರಿ 2 ಗಂಟೆವರೆಗೆ ಸಾಗಿದೆ. ಅಂಬರೀಶ್ ಮೊದಲ ಬಾರಿಗೆ ತಡ ರಾತ್ರಿಯ ಚಿತ್ರೀಕರಣದಲ್ಲಿ ತೊಡಗಿದ್ದಾರೆ.

ಚಿತ್ರೀಕರಣ ಅನುಭವದ ಬಗ್ಗೆ ಮಾತನಾಡಿದ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ಮಾತನಾಡಿದ ನಿರ್ದೇಶಕ ಗುರುದತ್ ''ತುಂಬ ಖುಷಿ ಆಗುತ್ತಿದೆ.

ಸುಪ್ರೀಂ ಕೋರ್ಟ್ ಮೆಟ್ಟಲೇರಿದ ಕಣ್ಸನ್ನೆ  ಬೆಡಗಿ ಪ್ರಿಯಾ ?

ಸುಪ್ರೀಂ ಕೋರ್ಟ್ ಮೆಟ್ಟಲೇರಿದ ಕಣ್ಸನ್ನೆ ಬೆಡಗಿ ಪ್ರಿಯಾ ?

ಬರಿ ಕಣ್ಸನ್ನೆಯಿಂದಲೇ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಮಲಯಾಳಂ ನಟಿ ಪ್ರಿಯಾ ವಾರಿಯರ್ ರಾತ್ರೋರಾತ್ರಿ ಸೂಪರ್ ಸ್ಟಾರ್ ಆಗಿದ್ದಾರೆ. ಆದರೆ ಪ್ರಿಯಾ ಪ್ರಕಾಶ್ ವಾರಿಯರ್ ಅವರಿಂದ ಮುಸ್ಲಿಂ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಎಫ್.ಐ.ಆರ್ ದಾಖಲಾಗಿದೆ. ಇದನ್ನ ಖಂಡಿಸಿರುವ ಪ್ರಿಯಾ ಪ್ರಕಾಶ್ ವಾರಿಯರ್ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌.ಐ.ರ್ ರದ್ದುಪಡಿಸಬೇಕು ಮತ್ತು ತೆಲಂಗಾಣ, ಮಹಾರಾಷ್ಟ್ರ ಸರಕಾರಗಳು ಯಾವುದೇ ಕ್ರಮಕ್ಕೆ ಮುಂದಾಗದಂತೆ ತಡೆ ನೀಡಬೇಕು ಎಂದು ಪ್ರಿಯಾ ಪ್ರಕಾಶ್ ವಾರಿಯರ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಕಣ್ಸನ್ನೆ ಮಾಡಿ 'ನ್ಯಾಷನಲ್ ಕ್ರಶ್' ಆಗಿದ್ದ ಪ್ರಿಯಾಗೆ ಈಗ ಸಂಕಷ್ಟ.!

ಕಣ್ಸನ್ನೆ ಮಾಡಿ 'ನ್ಯಾಷನಲ್ ಕ್ರಶ್' ಆಗಿದ್ದ ಪ್ರಿಯಾಗೆ ಈಗ ಸಂಕಷ್ಟ.!

ಬರಿ ಕಣ್ಸನ್ನೆಯಿಂದಲೇ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ಮಲಯಾಳಂ ನಟಿ ಪ್ರಿಯಾ ವಾರಿಯರ್ ರಾತ್ರೋರಾತ್ರಿ ಸೂಪರ್ ಸ್ಟಾರ್ ಆಗಿದ್ದಾರೆ. ಮಕ್ಕಳಿಂದ ಹಿಡಿದು ಮುದುಕರವರೆಗೂ ಪ್ರಿಯಾ ಕಣ್ಸನ್ನೆ ಬಗ್ಗೆನೇ ಮಾತನಾಡ್ತಿದ್ದಾರೆ.

ಹೀಗೆ, ಕಳೆದ ಕೆಲ ದಿನಗಳಿಂದ ಸಾಮಾನ್ಯ ಜನರ ಹಾಟ್ ಟಾಪಿಕ್ ಆಗಿರುವ ಪ್ರಿಯಾ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಿಯಾ ಪ್ರಕಾಶ್ ವಾರಿಯರ್ ಅವರಿಂದ ಮುಸ್ಲಿಂ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಎಫ್.ಐ.ಆರ್ ದಾಖಲಾಗಿದೆ.