ಹೆಲಿಕಾಪ್ಟರ್ನಲ್ಲಿ ಓಡಾಡುವುದು ನನ್ನ ವೈಯಕ್ತಿಕ: ರಘು ಆಚಾರ್ ಟಾಂಗ್
ಚಿತ್ರದುರ್ಗ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಆಚಾರ್, ಸ್ಥಳೀಯ ಶಾಸಕರ ಕಮಿಷನ್ ದಂಧೆ ಕುರಿತು ಲೋಕಾಯುಕ್ತ ತನಿಖೆಗೆ ನಾವೇ ಆಗ್ರಹಿಸಿದ್ದೇವೆ. ಈ ಆರೋಪ ಜನಪ್ರತಿನಿಧಿಗಳಿಗೆ ಅಂಟಿರುವ ಕಳಂಕವಾಗಿದೆ ಎಂದು ಆಕ್ರೋಶ ಹೊರಹಾಕಿದರು. ಶಾಸಕರಾಗಲಿ, ಗ್ರಾಮ ಪಂಚಾಯಿತಿ ಸದಸ್ಯನಾಗಲಿ ಯಾರೇ ಆದರೂ ಅವರ ಮೇಲೆ ನಂಬಿಕೆ ಇಟ್ಟು ಮತ ಹಾಕಿರುತ್ತೇವೆ. ಆ ಮಹತ್ವ ಉಳಿಸಿಕೊಳ್ಳುವುದು ಶಾಸಕರ ಹಾಗೂ ಜನಪ್ರತಿನಿಧಿಗಳ ಕರ್ತವ್ಯವಾಗಿರುತ್ತದೆ. ಶಾಸಕರೇ ಖುದ್ದಾಗಿ ಮುಖ್ಯಮಂತ್ರಿ ಬಳಿ ಹೋಗಿ ಈ ಪ್ರಕರಣ ತನಿಖೆ ಮಾಡಿಸಲು ಸೂಚನೆ ನೀಡಬೇಕು ಎಂದು ತಿಳಿಸಿದರು.