ಓವೈಸಿ 'ಯೂ ಟರ್ನ್', ಚುನಾವಣೆ ಸ್ಪರ್ಧೆಯಿಂದ ದೂರ ಸರಿದ ಎಐಎಂಐಎಂ
ಭಾರತ
- 11 days ago
ಕರ್ನಾಟಕ ವಿಧಾನಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದ ಎಐಎಂಐಎಂ ಪಕ್ಷದ ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ನಾವು ಕರ್ನಾಟಕದಲ್ಲಿ ಸ್ಪರ್ಧೆ ಮಾಡುವುದಿಲ್ಲ. ಜಾತ್ಯಾತೀತ ಮತಗಳನ್ನು ಒಡೆಯುವುದು ನಮಗಿಷ್ಟವಿಲ್ಲ ಎಂದು ಸ್ಪರ್ಧೆಯಿಂದ ಹಿಂದೆ ಸರಿದಿರುವ ತಮ್ಮ ನಿರ್ಧಾರಕ್ಕೆ ಅವರು ಕಾರಣ ನೀಡಿದ್ದಾರೆ.
ಈ ಹಿಂದೆ ಅಸಾದುದ್ದೀನ್ ಓವೈಸಿ ಸ್ಪರ್ಧೆಯಿಂದ ಹಿಂದೆ ಸರಿಯುವ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಬಯಸಿತ್ತು. ಈ ಸಂಬಂಧ ಮಾತುಕತೆಗೆ ಕಾಂಗ್ರೆಸ್ ಕಡೆಯಿಂದ ಜಮೀರ್ ಅಹಮದ್ ಖಾನ್ ರನ್ನು ಕಳುಹಿಸಲಾಗಿತ್ತು.