Short News

ತೆರೆಮರೆಯ ಚಾಣಾಕ್ಷನಿಗೆ ಸಿಕ್ತು ಹೊಸ ನೆಲೆ

ತೆರೆಮರೆಯ ಚಾಣಾಕ್ಷನಿಗೆ ಸಿಕ್ತು ಹೊಸ ನೆಲೆ

ಕಾಂಗ್ರೆಸ್ಸಿನ ತಂತ್ರಗಳಿಗೆ ಪ್ರತಿತಂತ್ರಗಳನ್ನು ಹೆಣೆಯುತ್ತಲೇ ರಾಜ್ಯ ರಾಜಕೀಯದಲ್ಲಿ ತೆರೆಮರೆಯ ಚಾಣಕ್ಯ ಎಂದೇ ಗುರುತಿಸಿಕೊಂಡಿರುವ ಗಣಿ ಉದ್ಯಮಿ ಮಾಜಿ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನರೆಡ್ಡಿ ಅವರಿಗೆ ಹೊಸ ನೆಲೆ ಸಿಕ್ಕಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ನಿಯಂತ್ರಿಸಲು ಮಹತ್ತರ ನಿರ್ಧಾರ ಕೈಗೊಂಡು, ರಾಂಪುರದ ತೋಟದ ಮನೆಗೆ ಶೀಘ್ರದಲ್ಲೇ ಶಿಫ್ಟ್ ಆಗಲಿದ್ದಾರೆ. ಇನ್ನು ಮುಂದೆ ರೆಡ್ಡಿಗಳ ರಾಜಕೀಯ ಶಕ್ತಿ ಕೇಂದ್ರ ರಾಂಪುರದ ತೋಟದ ಮನೆ ಆಗಲಿದೆ.

'ಕಾಂಗ್ರೆಸ್ ದೀಪ ರಾಜ್ಯವನ್ನೇ ಸುಡುತ್ತಿದೆ':

'ಕಾಂಗ್ರೆಸ್ ದೀಪ ರಾಜ್ಯವನ್ನೇ ಸುಡುತ್ತಿದೆ':

ವಿಧಾನಸಭೆ ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿ ಇರುವುದರಿಂದ ರಾಜ್ಯದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಪರಸ್ಪರ ಕೆಸರೆರಚಾಟ ಮುಂದುವರಿದಿದೆ.

ಪಿಎನ್ ಬಿ ಹಗರಣವನ್ನಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಬೆಳಿಗ್ಗೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಹೈದರಾಬಾದ್ ಎದುರು ಬೃಹತ್ ಮೊತ್ತ ಪೇರಿಸಿದ ಕರ್ನಾಟಕ

ಹೈದರಾಬಾದ್ ಎದುರು ಬೃಹತ್ ಮೊತ್ತ ಪೇರಿಸಿದ ಕರ್ನಾಟಕ

ವಿಜಯ್ ಹಜಾರೆ ಟೂರ್ನಿಯ ನಾಕೌಟ್‌ ಪಂದ್ಯದಲ್ಲಿ ಹೈದರಾಬಾದ್ ತಂಡದ ವಿರುದ್ಧ ಕರ್ನಾಟಕ ತಂಡವು ಬೃಹತ್ ಮೊತ್ತ ಪೇರಿಸಿದೆ. ಕರ್ನಾಟಕದ ಭರವಸೆಯ ಬ್ಯಾಟ್ಸ್‌ಮನ್‌ಗಳಾದ ಮಯಾಂಕ್ ಅಗರ್ವಾಲ್ ಮತ್ತು ಆರ್.ಸಮರ್ಥ್ ಅವರ ಅದ್ಬುತ ಶತಕದ ನೆರವಿನಿಂದ 347 ರನ್‌ ಗುರಿಯನ್ನು ಹೈದರಾಬಾದ್ ತಂಡದ ಎದುರು ಕರ್ನಾಟಕ ತಂಡ ಇರಿಸಿದೆ. ನವದೆಹಲಿಯ ಫಿರೋಜ್‌ ಷಾ ಕೋಟ್ಲಾ ಮೈದಾನದಲ್ಲಿ ಟಾಸ್ ಗೆದ್ದ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡ ಆರಂಭದಲ್ಲಿಯೇ ನಾಯರ್ (10) ವಿಕೆಟ್ ಕಳೆದುಕೊಂಡಿತಾದರೂ ಆ ನಂತರ ಮಯಾಂಕ್ ಅಗರ್ವಾಲ್ ಮತ್ತು ಆರ್.ಸಮರ್ಥ್ ದ್ವಿಶತಕದ ದಾಖಲೆ ಜೊತೆಯಾಟ ಆಡಿದರು.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುರ ಇಬ್ಬರು ಆಪ್ತರು ಅರೆಸ್ಟ್

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುರ ಇಬ್ಬರು ಆಪ್ತರು ಅರೆಸ್ಟ್

ಇಸ್ರೇಲ್ ಪೊಲೀಸರು ಅಲ್ಲಿಯ ಪ್ರಧಾನಿ ಬೆಂಜಮಿನ್ ನೆತನ್ಯಾಹುರ ಇಬ್ಬರು ಆಪ್ತರನ್ನು ಅರೆಸ್ಟ್ ಮಾಡಿದ್ದಾರೆ. ನೆತನ್ಯಾಹುರ ಮಾಜಿ ವಕ್ತಾರ ನಿರ್ ಹೆಫೆಟ್ಝ್ ಮತ್ತು ದೂರಸಂಪರ್ಕ ಸಚಿವಾಲಯದ ಮಾಜಿ ನಿರ್ದೇಶಕ ಶ್ಲೋಮೊ ಫಿಲ್ಬರ್ ರನ್ನು ವ್ಯಾಪಕ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದೆ ಬಂಧಿಸಿದ್ದಾರೆ. ಟೆಲಿಕಾಮ್ ಕಂಪೆನಿಗೆ ಸಂಧಿಸಿದಂತೆ ಅಕ್ರಮ ಎಸಲಾಗಿದ್ದು, ಇದರಿಂದ ಕೋಟ್ಯಾಂತರ ಡಾಲರ್ ಗಳನ್ನು ಅಕ್ರಮವಾಗಿ ಸಂಪಾದಿಸಿದ್ದಾರೆಂದು ದೂರಲಾಗಿದೆ.