Short News

ನನ್ನ ಸೋಲಿಗೆ ಸಿದ್ದರಾಮಯ್ಯ ಕಾರಣ; ಬಾಗೂರು ಮಂಜೇಗೌಡ

ನನ್ನ ಸೋಲಿಗೆ ಸಿದ್ದರಾಮಯ್ಯ ಕಾರಣ; ಬಾಗೂರು ಮಂಜೇಗೌಡ

ಸರ್ಕಾರ ಯಾರು ರಚಿಸುತ್ತಾರೊ ಬಿಡುತ್ತಾರೊ ಆದರೆ ಕಾಂಗ್ರೆಸ್‌ಗೆ ಸೋಲಾಗಿರುವುದು ಸ್ಪಷ್ಟ. ಈಗ ಸೋಲಿಗೆ ಯಾರು ಕಾರಣ ಎಂದು ಹುಡುಕುವ ಕಾರ್ಯ ಶುರುವಾಗಿದೆ. ಇಷ್ಟರಲ್ಲೇ ಸ್ಪೀಕರ್‌ ಕೋಳಿವಾಡ ಅವರು ಸಿದ್ದರಾಮಯ್ಯ ಅವರನ್ನು ದೋಷಿ ಸ್ಥಾನದಲ್ಲಿ ನಿಲ್ಲಿಸಿದ್ದಾರೆ. ಅವರ ಜೊತೆ ಇನ್ನೊಬ್ಬರು ಸೇರಿಕೊಂಡಿದ್ದಾರೆ. ಹಾಸನದ ಹೊಳೆನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಾಗೂರು ಮಂಜೇಗೌಡ ಅವರು ಕೂಡಾ ನನ್ನ ಸೋಲಿಗೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ನನ್ನ ಪರ ಪ್ರಚಾರಕ್ಕೆ ಬಂದಿದ್ದರೆ ನನಗೆ ಗೆಲುವಾಗುತ್ತಿತ್ತು
ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ, ಬಿಜೆಪಿಯಿಂದ ಕರಾಳ ದಿನ ಆಚರಣೆ

ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ, ಬಿಜೆಪಿಯಿಂದ ಕರಾಳ ದಿನ ಆಚರಣೆ

ಎಚ್.ಡಿ.ಕುಮಾರಸ್ವಾಮಿ ಬುಧವಾರ ಸಂಜೆ 4.30ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ದೇಶದ ಗಣ್ಯಾತಿ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದರೆ, ಬಿಜೆಪಿ ಶಾಸಕರು ಗೈರು ಹಾಜರಾಗುತ್ತಿದ್ದಾರೆ. ಇದರ ಜೊತೆಗೆ ರಾಜ್ಯಾದ್ಯಂತ ಕರಾಳ ದಿನ ಆಚರಣೆಗೆ ಬಿಜೆಪಿ ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ವರದಿ ತಿಳಿಸಿದೆ. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಕರಾಳ ದಿನ ಆಚರಣೆ ಮಾಡಲು ಬಿಜೆಪಿ ಕರೆ ನೀಡಿದೆ.
ಮಂಗಳೂರಿನಲ್ಲಿ ಮಾರಕ ನಿಫಾಹ್ ವೈರಾಣು ಸೊಂಕು ತಗುಲಿರುವ ಎರಡು  ಪ್ರಕರಣಗಳು ಪತ್ತೆ

ಮಂಗಳೂರಿನಲ್ಲಿ ಮಾರಕ ನಿಫಾಹ್ ವೈರಾಣು ಸೊಂಕು ತಗುಲಿರುವ ಎರಡು ಪ್ರಕರಣಗಳು ಪತ್ತೆ

ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಫಾಹ್ ವೈರಾಣು ಸೊಂಕು ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಪತ್ತೆಯಾಗಿದೆ. ನಿಫಾಹ್ ವೈರಾಣು ಸೊಂಕು ತಗುಲಿರುವ ಶಂಕಿತ ಎರಡು ಪ್ರಕರಣಗಳು ಪತ್ತೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾಹಿತಿ ನೀಡಿದ್ದಾರೆ. ಈ ಶಂಕಿತ ಸೋಂಕು ತಗುಲಿದ ವ್ಯಕ್ತಿಗಳಲ್ಲಿ ಒಬ್ಬರು ಮಂಗಳೂರಿನವರು ಮತ್ತೊಬ್ಬರು ಕೇರಳದವರೆಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಈ ಇಬ್ಬರ ರಕ್ತದ ಮಾದರಿಯನ್ನ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಪಷ್ಟನೆ ತಿಳಿಯಲಿದೆ ಎಂದಿದ್ದಾರೆ.
ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ವಿಧಾನಸಭಾ ಕ್ಷೇತ್ರಕ್ಕೆ ಅವರ ಸೋದರ ಪ್ರಹ್ಲಾದ್ ಬಾಬು ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಪ್ರಹ್ಲಾದ್ ಬಾಬು ಹೆಸನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದರೆ ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ. ಜೂನ್ 11ರಂದು ಮತದಾನ ನಡೆಯಲಿದ್ದು, ಜೂನ್ 13ಕ್ಕೆ ಮತ ಎಣಿಕೆ ನಡೆಯಲಿದೆ.