Short News

ಬೆಳ್ಳಂದೂರು ಮೆಟ್ರೋ ನಿಲ್ದಾಣ: ಇಂಟೆಲ್ ಜೊತೆಗೆ ನಮ್ಮ ಮೆಟ್ರೋ ಒಪ್ಪಂದ

ಬೆಳ್ಳಂದೂರು ಮೆಟ್ರೋ ನಿಲ್ದಾಣ: ಇಂಟೆಲ್ ಜೊತೆಗೆ ನಮ್ಮ ಮೆಟ್ರೋ ಒಪ್ಪಂದ

ನಮ್ಮ ಮೆಟ್ರೋ ಮಾರ್ಗದ ಎರಡನೇ ಹಂತದ ಕಾಮಗಾರಿಯಲ್ಲಿ ಬರುವ ಬೆಳ್ಳಂದೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಬಿಎಂಆರ್ ಸಿಎಲ್ ನೊಂದಿಗೆ ಇಂಟೆಲ್ ಕಂಪನಿ ಕೈಜೋಡಿಸಿದ್ದು ಒಪ್ಪಂದಕ್ಕೆ ಸಹಿ ಹಾಕಿದೆ.

ನಮ್ಮ ಮೆಟ್ರೋ ಎರಡನೇ ಹಂತದಲ್ಲಿ ನಿರ್ಮಾಣವಾಗಲಿರುವ ಬೆಳ್ಳಂದೂರು ಮೆಟ್ರೋ ನಿಲ್ದಾಣ, ಔಟರ್ ರಿಂಗ್ ರಸ್ತೆ ಜತೆಗೆ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆಆರ್ ಪುರಂ ನಡುವೆ ಕಾಮಗಾರಿಗಳು ಆರಂಭವಾಗಲಿದ್ದು ಅದಕ್ಕೆ ಇಂಟೆಲ್ ಕಂಪನಿ ಒಪ್ಪಂದಕ್ಕೆ ಸಹಿ ಹಾಕಿದೆ.

ಸಿಎಂ ಓಲೈಕೆ ರಾಜಕಾರಣ ಯಶಸ್ವಿಯಾಗದು: ಕುಕ್ಕೆಯಲ್ಲಿ ಅಮಿತ್ ಶಾ

ಸಿಎಂ ಓಲೈಕೆ ರಾಜಕಾರಣ ಯಶಸ್ವಿಯಾಗದು: ಕುಕ್ಕೆಯಲ್ಲಿ ಅಮಿತ್ ಶಾ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಪಕ್ಕದ ಕುಲ್ಕುಂದದಲ್ಲಿ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

"ಓಲೈಕೆ ರಾಜಕಾರಣ ಯಶಸ್ವಿಯಾಗುತ್ತದೆ ಎಂದು ಸಿದ್ದರಾಮಯ್ಯ ಅಂದುಕೊಂಡಿದ್ದರೆ ಅದು ಅವರ ತಪ್ಪು ಭಾವನೆ ಅಷ್ಟೆ. ಅವರ ಓಲೈಕೆ ಮತ್ತು ಧ್ರುವೀಕರಣ ರಾಜಕಾರಣ ಯಶಸ್ವಿಯಾಗುವುದಿಲ್ಲ," ಎಂದು ಅವರು ಹೇಳಿದ್ದಾರೆ.

"ಓಲೈಕೆ ರಾಜಕಾರಣ ಯಶಸ್ವಿಯಾಗುತ್ತದೆ ಎಂದು ಸಿದ್ದರಾಮಯ್ಯ ಅಂದುಕೊಂಡಿದ್ದರೆ

ಕಾಲೇಜು ವಿದ್ಯಾರ್ಥಿಗಳೊಂದಿಗೆ ಶಾ ಸಂವಾದ

ಕಾಲೇಜು ವಿದ್ಯಾರ್ಥಿಗಳೊಂದಿಗೆ ಶಾ ಸಂವಾದ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಭೇಟಿ ಹಾಗೂ ಕುಲ್ಕುಂದ ನವಶಕ್ತಿ ಸಮಾವೇಶದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪುತ್ತೂರಿಗೆ ಆಗಮಿಸಿ, ಇಲ್ಲಿನ ಸ್ವಾಮಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಕಾಲೇಜಿಗೆ ಬಂದ ಅಮಿತ್ ಶಾರನ್ನು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪುಷ್ವಗುಚ್ಚ ನೀಡಿ ಬರಮಾಡಿಕೊಂಡರು. ನವ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಷಯದ ಕುರಿತು ಇದೇ ಸಂದರ್ಭದಲ್ಲಿ ಅಮಿತ್ ಶಾ ಮಾತನಾಡಿದರು.

ಭಾರತದ 'ಚಂದ್ರಯಾನ-2' ಯೋಜನೆ ವೆಚ್ಚ ಒಂದು ಹಾಲಿವುಡ್ ಸಿನಿಮಾಗಿಂತ ಕಡಿಮೆ!!

ಭಾರತದ 'ಚಂದ್ರಯಾನ-2' ಯೋಜನೆ ವೆಚ್ಚ ಒಂದು ಹಾಲಿವುಡ್ ಸಿನಿಮಾಗಿಂತ ಕಡಿಮೆ!!

ಚಂದ್ರನ ನೆಲದಲ್ಲಿ ಸುಗಮವಾಗಿ ಇಳಿಯಬಲ್ಲ ಚಂದ್ರಯಾನ-2 ಯೋಜನೆ ಮತ್ತು ರೋವರ್‌ ನಡಿಗೆಯನ್ನು ಇಸ್ರೋ ಕೈಗೊಳ್ಳಲಿದ್ದು, ಈ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಶುರುವಾಗುತ್ತಿರುವ ಭಾರತ 'ಚಂದ್ರಯಾನ-2' ಯೋಜನೆ ಒಂದು ಹಾಲಿವುಡ್ ಸಿನಿಮಾಗಿಂತಲೂ ಕಡಿಮೆ ವೆಚ್ಚದ ಬಜೆಟ್ ಆಗಿರಲಿದೆ.!!

ನಾಸಾದ ಅಪೋಲೋ ಮತ್ತು ರಷ್ಯಾದ ಲೂನಾ ಮಿಷನ್‌ಗಳಲ್ಲಿ ರೋವರ್‌ಗಳು ಚಂದ್ರನ ಸಮಭಾಜಕ ಪ್ರದೇಶದಲ್ಲಿ ಇಳಿದಿದ್ದವು. ಆದರೆ ಇಸ್ರೋ ತನ್ನ ನೌಕೆಯನ್ನು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿಸಲು ಯೋಚಿಸುತ್ತಿದೆ ಎಂದು ಇಸ್ರೋ ಅಧ್ಯಕ್ಷ ಡಾ. ಕೆ. ಶಿವನ್ ಅವರು ಮಾಧ್ಯಮಗಳಿಗೆ ತಿಳಸಿದ್ದಾರೆ.!!