ಬಿಜೆಪಿ 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕರ್ನಾಟಕ ಬಿಜೆಪಿ ಏಪ್ರಿಲ್ 16ರ ಸೋಮವಾರ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಕೆರಳಿಸಿದ್ದ ಸಾಗರ ಕ್ಷೇತ್ರದಲ್ಲಿ ಹರತಾಳು ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಏಪ್ರಿಲ್ 9ರಂದು ಪಕ್ಷ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. 2ನೇ ಪಟ್ಟಿಯಲ್ಲಿ 82 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಾಂಗ್ರೆಸ್ 218, ಜೆಡಿಎಸ್ 120 ಅಭ್ಯರ್ಥಿಗಳನ್ನು ಈಗಾಗಲೇ ಘೋಷಣೆ ಮಾಡಿದೆ. ಇನ್ನೂ 70ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.