Short News

ವಿದೇಶದಲ್ಲಿ ಬಿಜೆಪಿ ಸರ್ಕಾರವನ್ನು ಟೀಕಿಸಿ, ಆಡಿಕೊಳ್ಳುವವರ ಬಾಯಿಗೆ ತುತ್ತಾದ ರಾಹುಲ್ ಗಾಂಧಿ!

ವಿದೇಶದಲ್ಲಿ ಬಿಜೆಪಿ ಸರ್ಕಾರವನ್ನು ಟೀಕಿಸಿ, ಆಡಿಕೊಳ್ಳುವವರ ಬಾಯಿಗೆ ತುತ್ತಾದ ರಾಹುಲ್ ಗಾಂಧಿ!

ಜರ್ಮನಿ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಹಂಬರ್ಗ್ ನಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, ಬಿಜೆಪಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಲು ವಿಫಲವಾಗಿರುವುದಕ್ಕೆಯೇ ಐಸಿಸ್ ನಂಥ ಭಯೋತ್ಪಾದಕ ಸಂಘಟನೆಗಳು ಹುಟ್ಟಿಕೊಳ್ಳುತ್ತಿವೆ. ಉದ್ಯೋಗವಿಲ್ಲದೆ ಕಂಗೆಟ್ಟ ಜನರು ಐಸಿಸ್ ಗೆ ಸೇರುವಂತಾಗಿದೆ' ಎಂದಿದ್ದರು. ಪರೋಕ್ಷವಾಗಿ ಐಸಿಸ್ ಅನ್ನು ಸಮರ್ಥಿಸಿಕೊಂಡ ರಾಹುಲ್ ನಡೆಯನ್ನು ಟ್ವಿಟ್ಟಿಗರು ಖಂಡಿಸಿದ್ದಾರೆ. ಜೊತೆಗೆ ಬಿಜೆಪಿ ಕೂಡ ಇದನ್ನಿಟ್ಟುಕೊಂಡು ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ. #RahulInsultsMuslims ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ.
ದೇವೇಗೌಡ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ ಮಾಡುವೆ ಎಂದು ಯಡಿಯೂರಪ್ಪ ಸವಾಲ್

ದೇವೇಗೌಡ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ ಮಾಡುವೆ ಎಂದು ಯಡಿಯೂರಪ್ಪ ಸವಾಲ್

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕುಟುಂಬದ ಹಗರಣಗಳ ದಾಖಲೆ ಬಿಡುಗಡೆ ಮಾಡುವುದಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬೆದರಿಕೆ ಹಾಕಿದ್ದಾರೆ. ಇಂದು ಸಂಜೆ ನಾನು ದೇವೇಗೌಡರ ಕುಟುಂಬದ ಹಗರಣಗಳ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇನೆ. ಈ ಅಕ್ರಮಗಳ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಉತ್ತರ ನೀಡಲಿ. ಕುಮಾರಸ್ವಾಮಿ ವಿರುದ್ಧವೂ ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣಗಳಿವೆ ಎಂದು ಬಿಎಸ್ ವೈ ವಾಗ್ದಾಳಿ ನಡೆಸಿದ್ದಾರೆ. ನಿಮಗೆ ನನ್ನ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ನಿಮ್ಮ ಅಧಿಕಾರ ಶಾಶ್ವತ ಅಲ್ಲ ಎಂದಿದ್ದಾರೆ.
ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಪ್ರಚಾರ, ಮಹಿಳಾ ಮತಗಳ ಮೇಲೆ ರಾಹುಲ್​ ಕಣ್ಣು

ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಪ್ರಚಾರ, ಮಹಿಳಾ ಮತಗಳ ಮೇಲೆ ರಾಹುಲ್​ ಕಣ್ಣು

ಇದೇ ನವೆಂಬರ್​, ಡಿಸೆಂಬರ್​ ನಲ್ಲಿ ನಡೆಯುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ನಡುವೆ ಕೈಲಾಸ ಮಾನಸ ಸರೋವರ ಯಾತ್ರೆ ಮುಗಿಸಿಕೊಂಡು ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಸರಣಿ ಪ್ರವಾಸ ಆರಂಭಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಸಂಕಲ್ಪಯಾತ್ರೆಗೆ ಚಾಲನೆ ನೀಡಿರುವ ಅವರು, ಆಂಧ್ರಕ್ಕೂ ಭೇಟಿ ನೀಡಿ ಕರ್ನೂಲ್​​ನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ್ದರು. ಇದರ ಮುಂದುವರೆದ ಭಾಗವಾಗಿ ಇಂದು ರಾಜಸ್ಥಾನದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ಬಾರಿ ಹೆಚ್ಚಿನ ಮಹಿಳೆಯರನ್ನು ಕಣದಲ್ಲಿ ಕಾಣ ಬಯಸುತ್ತೇನೆ ಎಂದಿದ್ದಾರೆ.
ಸಿಎಂ ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ:ಸಿಟಿ ರವಿ

ಸಿಎಂ ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ:ಸಿಟಿ ರವಿ

ಸಿ.ಎಂ. ಕುಮಾರಸ್ವಾಮಿ ಹತಾಶರಾಗಿದ್ದಾರೆ. ದಂಗೆಗೆ ಕರೆ ಕೊಡುವ ಹೇಳಿಕೆ ಸಂವಿಧಾನ ಬಾಹಿರ ಹಾಗೂ ಖಂಡನೀಯ. ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಮಗಳೂರಿನಲ್ಲಿ  ಮಾತನಾಡಿದ ಅವರು ಕುಮಾರಸ್ವಾಮಿ ನೈತಿಕ ದಾರಿಯಲ್ಲಿ ಮುಖ್ಯಮಂತ್ರಿ ಆಗಿಲ್ಲ. ಅಧಿಕಾರಕ್ಕಾಗಿ ಯಾವುದೇ ಕಾಂಪ್ರಮೈಸ್ ಮಾಡಿಕೊಳ್ಳುವವರು ಇಷ್ಟೊಂದು ಪೌರುಷದ ಮಾತುಗಳನ್ನು ಆಡುವ ಅವಶ್ಯಕತೆ ಇಲ್ಲ. ಆಪರೇಷನ್, ಬಂಡಾಯ ನೀವು ಮಾಡದಿರುವ ಕೆಲಸ ಅಲ್ಲ. ನೀವು ಮಾಡಿದ್ರೆ ಪ್ರಜಾಪ್ರಭುತ್ವ ಮಾರ್ಗ. ಬೇರೆಯವರು ಮಾಡಿದ್ರೆ ಪ್ರಜಾಪ್ರಭುತ್ವ ವಿರೋಧಿ ಎನ್ನುವುದು ಸಿ.ಎಂ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದರು.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more