Short News

10ನೇ ತರಗತಿಯಲ್ಲಿ ಮಗ ಫೇಲ್ ಆಗಿದ್ದಕ್ಕೆ ಪೆಂಡಾಲ್ ಹಾಕಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿದ ತಂದೆ

10ನೇ ತರಗತಿಯಲ್ಲಿ ಮಗ ಫೇಲ್ ಆಗಿದ್ದಕ್ಕೆ ಪೆಂಡಾಲ್ ಹಾಕಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿದ ತಂದೆ

ಮಧ್ಯಪ್ರದೇಶದ ಸಾಗರದಲ್ಲಿ ಸೋಮವಾರ 10ನೇ ತರಗತಿ ಹಾಗೂ 12 ನೇ ತರಗತಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಅನೇಕ ವಿದ್ಯಾರ್ಥಿಗಳು ರ‍್ಯಾಂಕ್‌ ಪಡೆದು ಪಾಸ್‌‌ ಆಗಿದ್ದಾರೆ. ಇದರ ಮಧ್ಯೆ ಒಂದು ವಿಚಿತ್ರ ಘಟನೆ ಸಹ ನಡೆದಿದೆ. ಮಗ ಫೇಲ್ ಆಗಿರುವುದರಿಂದ ಖುಷಿಯಾಗಿರುವ ಆತನ ತಂದೆ ಮನೆ ಮುಂದೆ ಪೆಂಡಾಲ್‌ ಹಾಕಿಸಿ ಪಟಾಕಿ ಹೊಡೆದಿರುವ ಜತೆಗೆ ಗ್ರಾಮಸ್ಥರಿಗೆ ಸಿಹಿ ಹಂಚಿದ್ದಾರೆ. ನಂತರ ಮಾತನಾಡಿದ ಅವರು ಪರೀಕ್ಷೆಗಳಲ್ಲಿ ಕೇವಲ ಉತ್ತೀರ್ಣಗೊಳ್ಳುವ ವಿದ್ಯಾರ್ಥಿಗಳನ್ನ ಪ್ರೋತ್ಸಾಹಿಸುವ ಬದಲಿಗೆ ಫೇಲ್‌ ಆಗಿರುವ ಮಕ್ಕಳನ್ನು ಪ್ರೋತ್ಸಾಹಿಸಿದಾಗ ಮಾತ್ರ ಮುಂದಿನ ದಿನಗಳಲ್ಲಿ ಅವರು ಉತ್ತಮ ಸಾಧನೆ ಮಾಡಲು ಸಾಧ್ಯ ಎಂದಿದ್ದಾರೆ.
ಭೀಕರ ರಸ್ತೆ ಅಪಘಾತ: ಖ್ಯಾತ  ನಟಿ  ಸಾವು

ಭೀಕರ ರಸ್ತೆ ಅಪಘಾತ: ಖ್ಯಾತ ನಟಿ ಸಾವು

ಚಿತ್ರೀಕರಣದ ಸ್ಥಳಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಖ್ಯಾತ ಭೋಜ್ ಪುರಿ ನಟಿ 45 ವರ್ಷದ ನಟಿ ಮನೀಶಾ ರೈ ಮೃತಪಟ್ಟಿರುವ ಘಟನೆ ನಡೆದಿದೆ. ತನ್ನ ಸಹವರ್ತಿ ಸಂಜೀವ್ ಮಿಶ್ರಾ ಜತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದ್ದು, ಸಂಜೀವ್ ಮಿಶ್ರಾ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ ಉತ್ತರಪ್ರದೇಶದ ಬಾಲಿಯಾ ಜಿಲ್ಲೆಯಲ್ಲಿ ಈ ಅಪಘಾತ ನಡೆದಿದ್ದು, ಚಿತ್ರೀಕರಣದಲ್ಲಿ ಭಾಗಿಯಾಗುವ ಸಲುವಾಗಿ ನಟಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ನಿರ್ಣಾಯಕ ಪಂದ್ಯ: ಮುಂಬೈಗೆ 175 ರನ್  ಟಾರ್ಗೆಟ್ ನೀಡಿದ ಡೆಲ್ಲಿ

ನಿರ್ಣಾಯಕ ಪಂದ್ಯ: ಮುಂಬೈಗೆ 175 ರನ್ ಟಾರ್ಗೆಟ್ ನೀಡಿದ ಡೆಲ್ಲಿ

ದೆಹಲಿಯ ಫಿರೂಜ್ ಶಾ ಕೋಟ್ಲಾ ಮೈದಾನದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್‌ ಮತ್ತು ಮುಂಬೈ ಇಂಡಿಯನ್ಸ್ ಟಿ-20 ಟೂರ್ನಿಯ ನಿರ್ಣಾಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ರಿಷಭ್ ಪಂತ್ ಆಕರ್ಷಕ ಅರ್ಧಶತಕದ (64) ನೆರವಿನೊಂದಿಗೆ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 174 ರನ್‌ ಟಾರ್ಗೆಟ್ ನೀಡಿದೆ. ವಿಜಯದ ಗುರಿ ಬೆನ್ನು ಹತ್ತಿರುವ ಮುಂಬೈ ಈಗಾಗಲೇ 12 ಓವರ್ ಗೆ 5 ವಿಕೆಟ್ ಕಳೆದುಕೊಂಡು 99 ರನ್ ಗಳಿಸಿ. ಆಟ ಮುಂದುವರೆಸಿದೆ.
ದಕ್ಷಿಣ ಕೊಡಗಿನಲ್ಲಿ  ಕೆಸರು ಎರಚಿ ಹರಕೆ ತೀರಿಸುವ ಅಪರೂಪದ ಹಬ್ಬ

ದಕ್ಷಿಣ ಕೊಡಗಿನಲ್ಲಿ ಕೆಸರು ಎರಚಿ ಹರಕೆ ತೀರಿಸುವ ಅಪರೂಪದ ಹಬ್ಬ

ಕೊಡಗಿನ ವಿಶಿಷ್ಟ ಹಬ್ಬ 'ಬೋಡ್ ನಮ್ಮೆ' ಸಾಮಾನ್ಯವಾಗಿ ಜಿಲ್ಲೆಯಾದ್ಯಂತ ನಡೆಯುತ್ತದೆಯಾದರೂ ಒಂದು ಕಡೆಯಿಂದ ಮತ್ತೊಂದು ಕಡೆಗೆ ಆಚರಣೆಯಲ್ಲಿ ವಿಭಿನ್ನತೆ ಇರುವುದನ್ನು ನಾವು ಕಾಣಬಹುದಾಗಿದೆ.

ಇದೀಗ ದಕ್ಷಿಣ ಕೊಡಗಿನ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೇಡು ಹಬ್ಬ ಆರಂಭವಾಗಿದ್ದು, ಗ್ರಾಮದಲ್ಲಿ ಸಂಭ್ರಮದ ವಾತಾವರಣ ಸೃಷ್ಠಿಯಾಗಿದೆ.

ಹಬ್ಬವು ಶನಿವಾರ (ಮೇ.19) ರಂದು ಆರಂಭವಾಗಿದ್ದು ಭಾನುವಾರ (ಮೇ.20) ಮುಕ್ತಾಯಗೊಳ್ಳಲಿದೆ. ಈ ಎರಡು ದಿನಗಳ ಕಾಲ ಹಬ್ಬದ ಅಂಗವಾಗಿ ಹಲವು ಸಂಪ್ರದಾಯದ ಕಾರ್ಯಕ್ರಮಗಳು, ಪೂಜಾ ಕಾರ್ಯಗಳು ನಡೆಯಲಿವೆ.