Short News

ಬ್ರೇಕಿಂಗ್ : ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಗುರುವಾರ ಪ್ರಮಾಣ

ಬ್ರೇಕಿಂಗ್ : ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಗುರುವಾರ ಪ್ರಮಾಣ

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮೇ 17ರಂದು ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಎಲ್ಲ ಅಂದುಕೊಂಡಂತೆ ನಡೆದರೆ, ಸರಿಯಾಗಿ 12.20 ಗಂಟೆಗೆ 75 ವರ್ಷದ ಹಿರಿಯ ರಾಜಕಾರಣಿ, ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಬ್ಬರು ಪಕ್ಷೇತರರು ಮತ್ತು ಕೆಲ ಬಂಡಾಯ ಶಾಸಕರ ಬೆಂಬಲದೊಂದಿಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ವಿಶ್ವಾಸವನ್ನು ಬಿಜೆಪಿ ಹೊಂದಿದೆ.

ಬ್ರೇಕಿಂಗ್ : ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಗುರುವಾರ ಪ್ರಮಾಣ

ಮಂಗಳೂರಿನಲ್ಲಿ ಮಾರಕ ನಿಫಾಹ್ ವೈರಾಣು ಸೊಂಕು ತಗುಲಿರುವ ಎರಡು  ಪ್ರಕರಣಗಳು ಪತ್ತೆ

ಮಂಗಳೂರಿನಲ್ಲಿ ಮಾರಕ ನಿಫಾಹ್ ವೈರಾಣು ಸೊಂಕು ತಗುಲಿರುವ ಎರಡು ಪ್ರಕರಣಗಳು ಪತ್ತೆ

ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಫಾಹ್ ವೈರಾಣು ಸೊಂಕು ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಪತ್ತೆಯಾಗಿದೆ. ನಿಫಾಹ್ ವೈರಾಣು ಸೊಂಕು ತಗುಲಿರುವ ಶಂಕಿತ ಎರಡು ಪ್ರಕರಣಗಳು ಪತ್ತೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾಹಿತಿ ನೀಡಿದ್ದಾರೆ. ಈ ಶಂಕಿತ ಸೋಂಕು ತಗುಲಿದ ವ್ಯಕ್ತಿಗಳಲ್ಲಿ ಒಬ್ಬರು ಮಂಗಳೂರಿನವರು ಮತ್ತೊಬ್ಬರು ಕೇರಳದವರೆಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಈ ಇಬ್ಬರ ರಕ್ತದ ಮಾದರಿಯನ್ನಯ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಪಷ್ಟನೆ ತಿಳಿಯಲಿದೆ ಎಂದಿದ್ದಾರೆ.
ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ವಿಧಾನಸಭಾ ಕ್ಷೇತ್ರಕ್ಕೆ ಅವರ ಸೋದರ ಪ್ರಹ್ಲಾದ್ ಬಾಬು ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಪ್ರಹ್ಲಾದ್ ಬಾಬು ಹೆಸನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದರೆ ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ. ಜೂನ್ 11ರಂದು ಮತದಾನ ನಡೆಯಲಿದ್ದು, ಜೂನ್ 13ಕ್ಕೆ ಮತ ಎಣಿಕೆ ನಡೆಯಲಿದೆ.
ಯೋಧ ತಂದೆಯ ಮೃತದೇಹದ ಎದುರು ಕಣ್ಣೀರಿಟ್ಟ ಬಾಲಕಿ

ಯೋಧ ತಂದೆಯ ಮೃತದೇಹದ ಎದುರು ಕಣ್ಣೀರಿಟ್ಟ ಬಾಲಕಿ

ಉಗ್ರರ ವಿರುದ್ಧದ ಹೋರಾಟದಲ್ಲಿ ಮಡಿದ ವೀರಯೋಧನ ಮಗಳು ತಂದೆಯ ಮೃತದೇಹಕ್ಕೆ ಪುಷ್ಪನಮನ ಅರ್ಪಿಸಿ ದುಃಖಿಸುತ್ತಿರುವ ಮನಕಲಕುವ ಚಿತ್ರ ಜನರನ್ನು ಭಾವುಕರನ್ನಾಗಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಏಪ್ರಿಲ್ 10ರಂದು ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ನಾಯ್ಕ್ ದೀಪಕ್ ನೈನ್ವಾಲ್ ಅವರ ದೇಹಕ್ಕೆ ಎರಡು ಗುಂಡುಗಳು ಹೊಕ್ಕಿದ್ದರಿಂದ ತೀವ್ರ ಗಾಯಗೊಂಡಿದ್ದರು. ಪುಣೆಯ ಕಮಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಭಾನುವಾರ ಮೃತಪಟ್ಟಿದ್ದರು. ತಂದೆಯ ಮೃಹದೇಹಕ್ಕೆ ಬಾಲಕಿ ಪುಷ್ಪನಮನ ಸಲ್ಲಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.