Short News

ಇಸ್ರೇಲ್ ಪ್ರಧಾನಿ ನೇತನ್ಯಾಹು ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಲು ಶಿಫಾರಸ್ಸು!

ಇಸ್ರೇಲ್ ಪ್ರಧಾನಿ ನೇತನ್ಯಾಹು ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಲು ಶಿಫಾರಸ್ಸು!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಲು ಇಸ್ರೇಲ್ ಪೊಲೀಸರು ಶಿಫಾರಸ್ಸು ಮಾಡಿದ್ದಾರೆಂದು ವರದಿ ತಿಳಿಸಿದೆ. ಮೂಲಗಳ ಪ್ರಕಾರ ನೇತನ್ಯಾಹು ತಮ್ಮ ಅಧಿಕಾರದ ದುರ್ಬಳಕೆ ಮಾಡಿಕೊಂಡಿದ್ದು, ಕಿಕ್ ಬ್ಯಾಕ್ ಪಡೆದಿದ್ದಾರೆ. ಹೀಗಾಗಿ ನಂಬಿಕೆ ದ್ರೋಹ ಮತ್ತು ಭ್ರಷ್ಟಾಚಾರ ಪ್ರಕರಣ ದಾಖಲಿಸುವಂತೆ ಅಟಾರ್ನಿ ಜನರಲ್ ಅವಿಚೈ ಮ್ಯಾಂಡೆಲ್ಬ್ಲಿಟ್ ಗೆ ಶಿಫಾರಸ್ಸು ಮಾಡಲಾಗಿದೆಯಂತೆ. ನೇತನ್ಯಾಹು ವಿರುದ್ಧದ 2ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಮ್ಮ ಬಳಿ ಸಾಕ್ಷಿಗಳಿದ್ದು, ಪ್ರಕರಣ ದಾಖಲಿಸಬಹುದು ಎಂದು ಇಸ್ರೇಲ್ ಪೊಲೀಸರು ಶಿಫಾರಸ್ಸಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಮೈಸೂರು-ಬೆಂಗಳೂರು ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಪ್ರಧಾನಿ  ಚಾಲನೆ

ಮೈಸೂರು-ಬೆಂಗಳೂರು ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಪ್ರಧಾನಿ ಚಾಲನೆ

ಮೈಸೂರು-ಬೆಂಗಳೂರು ವಿದ್ಯುತ್ ರೈಲು ಮಾರ್ಗ ಹಾಗೂ ಮೈಸೂರು-ರಾಜಸ್ತಾನದ ಉದಯಪುರ ನಡುವಣೆ ಪ್ಯಾಲೆಸ್ ಕ್ವೀನ್ ಹಮ್ ಸಫರ್ ನೂತನ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿದರು. ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಮುಗಿಸಿ ಮೈಸೂರಿಗೆ ಆಗಮಿಸಿದ ಮೋದಿ ಮೈಸೂರಿನ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1ರಲ್ಲಿ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಈ ವೇಳೆ ಉಪಸ್ಥಿತರಿದ್ದರು.
ಅಬ್ದುಲ್ ಕರಿಂ ಲಾಲ್ ತೆಲಗಿ ಆಸ್ತಿಗಾಗಿ ಕುಟುಂಬಸ್ಥರ ಮಧ್ಯೆ  ಕಿತ್ತಾಟ !

ಅಬ್ದುಲ್ ಕರಿಂ ಲಾಲ್ ತೆಲಗಿ ಆಸ್ತಿಗಾಗಿ ಕುಟುಂಬಸ್ಥರ ಮಧ್ಯೆ ಕಿತ್ತಾಟ !

ಬಹುಕೋಟಿ ಛಾಪಾ ಕಾಗದ ಹಗರಣದ ರೂವಾರಿ ಅಬ್ದುಲ್ ಕರಿಂ ಲಾಲ್ ತೆಲಗಿ ಆಸ್ತಿಗಾಗಿ ಕುಟುಂಬಸ್ಥರ ಮಧ್ಯೆ ಗಲಾಟೆ ಆರಂಭವಾಗಿದೆ. ಬೆಳಗಾವಿಯಲ್ಲಿ  ತೆಲಗಿ ಪತ್ನಿ ಶಹೀದಾ, ಮಗಳು ಸನಾ ಮೇಲೆ ತೆಲಗಿ ಸಹೋದರ ಅಜೀಂ ತೆಲಗಿ ಹಲ್ಲೆ‌ ನಡೆಸಿದ್ದಾನೆ. ಹಗರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ತೆಲಗಿ ಶಿಕ್ಷೆ ಪೂರ್ಣಗೊಳ್ಳುವ ಮುನ್ನವೇ ಸಾವನ್ನಪ್ಪಿದ್ದ. ಈತನ ಸಾವಿನ ಬಳಿಕ ಹಗರಣದಲ್ಲಿಗಳಿಸಿದ ಆಸ್ತಿಯನ್ನು ಸರ್ಕಾರಕ್ಕೆ ನೀಡಲು ಶಹೀದಾ ನಿರ್ಧರಿಸಿದ್ದರು. ಈ ಬಗ್ಗೆ ಪುಣೆ ನ್ಯಾಯಾಲಯಕ್ಕೆ ಅರ್ಜಿಯನ್ನೂ ಸಲ್ಲಿಸಿದ್ದರು. ಆದರೆ ಇದಕ್ಕೆ ಸಹೋದರನ ವಿರೋಧ ವ್ಯಕ್ತವಾಗಿದ್ದು ಶಹೀದಾ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾನೆಂದು ತಿಳಿದುಬಂದಿದೆ.
ಟೀಂ ಇಂಡಿಯಾದ ಮೂವರಿಗೆ ಪ್ರತಿಷ್ಠಿತ ಕ್ರಿಕ್​ಇನ್ಫೋ ಪ್ರಶಸ್ತಿ

ಟೀಂ ಇಂಡಿಯಾದ ಮೂವರಿಗೆ ಪ್ರತಿಷ್ಠಿತ ಕ್ರಿಕ್​ಇನ್ಫೋ ಪ್ರಶಸ್ತಿ

ಕ್ರಿಕೆಟ್​ನ ಪ್ರತಿಷ್ಠಿತ ವೆಬ್​ಸೈಟ್​ ಇಎಸ್​ಪಿಎನ್​ ಅತ್ಯುತ್ತಮ ಪ್ರದರ್ಶನ ತೋರಿರುವ ಆಟಗಾರರಿಗೆ ಕ್ರಿಕ್​ಇನ್ಫೋ ಪ್ರಶಸ್ತಿ ನೀಡುತ್ತಾ ಬರುತ್ತಿದ್ದು,2017ರ ಪ್ರಶಸ್ತಿಗಳಿಸಿರುವವರ ಪಟ್ಟಿಯನ್ನು ಪ್ರಕಟಿಸಿದೆ. ಭಾರತದ 3ಜನ ಈ ಪ್ರಶಸ್ತಿಗೆ ಆಯ್ಜೆಯಾಗಿದ್ದು,ಯಜುವೀಂದ್ರ್​ ಚಹಲ್​ ಅತ್ಯುತ್ತಮ ಟಿ20 ಬೌಲರ್, ಕುಲ್​ದೀಪ್​ ಯಾದವ್​ ಡೆಬ್ಯು ಕ್ರಿಕೆಟರ್​ ಆಗಿ ಹೊರಹೊಮ್ಮಿದ್ದಾರೆ. ಇನ್ನು ವರ್ಷದ ಬ್ಯಾಟಿಂಗ್​ ಪರ್ಫಾರ್ಮರ್​ ಆಗಿ ಹರ್ಮನ್​ಪ್ರೀತ್​ ಕೌರ್​ ಪ್ರಶಸ್ತಿ ಪಡೆದಿದ್ದಾರೆ. ಒಟ್ಟು 12 ಪ್ರಶಸ್ತಿಗಳಲ್ಲಿ 3 ಜನ ಭಾರತೀಯರಿದ್ದು, ಅತಿ ಹೆಚ್ಚು ಪ್ರಶಸ್ತಿ ಪಡೆದ ದೇಶ ಎಂಬ ಹೆಗ್ಗಳಿಕೆ ಭಾರತದ ಪಾಲಾಗಿದೆ.