Short News

ರೋಹಿಂಗ್ಯಾ ಮುಸ್ಲಿಮರ ಮೇಲೆ ಅತ್ಯಾಚಾರ, ಮ್ಯಾನ್ಮಾರ್‌ ಸೇನಾಪಡೆ ವಿಶ್ವಸಂಸ್ಥೆಯ ಕಪ್ಪುಪಟ್ಟಿಗೆ ಸೇರ್ಪಡೆ

ರೋಹಿಂಗ್ಯಾ ಮುಸ್ಲಿಮರ ಮೇಲೆ ಅತ್ಯಾಚಾರ, ಮ್ಯಾನ್ಮಾರ್‌ ಸೇನಾಪಡೆ ವಿಶ್ವಸಂಸ್ಥೆಯ ಕಪ್ಪುಪಟ್ಟಿಗೆ ಸೇರ್ಪಡೆ

ರೋಹಿಂಗ್ಯಾ ಮುಸ್ಲಿಮರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿದೆ ಎಂದು ನಂಬಲರ್ಹ ವರದಿ ತಿಳಿಸಿದನ್ನು ಆಧರಿಸಿ ವಿಶ್ವಸಂಸ್ಥೆಯು ಮ್ಯಾನ್ಮಾರ್‌ನ ಸೇನಾ ಪಡೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿದೆ. ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್‌ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಸಲ್ಲಿಸಿದ ವರದಿಯಲ್ಲಿ ವಿವಿಧ ದೇಶಗಳ ಒಟ್ಟು 51 ಪಡೆಗಳನ್ನು ಕಪ್ಪುಪಟ್ಟಿಗೆ ಸೇರಿಸುವ ವಿಷಯವನ್ನು ಉಲ್ಲೇಖಿಸಲಾಗಿದೆ. ಮ್ಯಾನ್ಮಾರ್‌ನಿಂದ ಬಾಂಗ್ಲಾಗೆ ವಲಸೆ ಬಂದ 7 ಲಕ್ಷಕ್ಕೂ ಅಧಿಕ ರೋಹಿಂಗ್ಯಾ ಮುಸ್ಲಿಮರನ್ನು ದೈಹಿಕ ಮತ್ತು ಮಾನಸಿಕವಾಗಿ ಹಿಂಸಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ

ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗಿಂತ ಅವರ ಪತ್ನಿಯೇ ಸಿರಿವಂತೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮಾನಾಥ ರೈ ಚುನಾವಣಾ ಆಯೋಗಕ್ಕೆ ಘೋಷಣೆ ಮಾಡಿರುವ ತಮ್ಮ ಆದಾಯ ವಿವರಗಳಲ್ಲಿ ಇಂತಹದ್ದೊಂದು ಮಾಹಿತಿ ತೆರೆದಿಟ್ಟಿದ್ದಾರೆ.

ರಮಾನಾಥ ರೈ ಅವರು ತಮ್ಮ ಕುಟುಂಬದ ಒಟ್ಟು ಆಸ್ತಿ ಮೊತ್ತ 6.25 ಕೋಟಿ ರೂಪಾಯಿ ಎಂದು ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಪ್ರಮಾಣ ಪತ್ರದಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ.

ಬಂಡಾಯ ಬಾವುಟ ಹಾರಿಸಿದ ಕಾಂಗ್ರೆಸ್ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ

ಬಂಡಾಯ ಬಾವುಟ ಹಾರಿಸಿದ ಕಾಂಗ್ರೆಸ್ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ ಗೊಂಡಿದೆ.

ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಹಾಗು ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಕಾಂಗ್ರೆಸ್ ವರಿಷ್ಠರ ವಿರುದ್ದ ತೊಡೆ ತಟ್ಟಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಿಂದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿಜಯ ಕುಮಾರ್ ಶೆಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕಗ್ಗಂಟಾಗಿದ್ದ ಮಂಗಳೂರಿನ 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆ

ಕಗ್ಗಂಟಾಗಿದ್ದ ಮಂಗಳೂರಿನ 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಕಗ್ಗಂಟಾಗಿ ಉಳಿದಿದ್ದ ಮಂಗಳೂರು,ಮಂಗಳೂರು ಉತ್ತರ,ಮಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಯುವ ಮುಖಂಡ ಜಿಎಸ್ ಬಿ ಸಮುದಾಯದ ವೇದವ್ಯಾಸ್ ಕಾಮತ್ ಅವರನ್ನು ಆಯ್ಕೆ ಮಾಡಿದೆ. ಈ ಕ್ಷೇತ್ರದಿಂದ ಉದ್ಯಮಿ ಬದ್ರಿನಾಥ್ ಕಾಮತ್ , ಮಾಜಿ ಶಾಸಕ ಯೋಗೀಶ್ ಭಟ್ ಮತ್ತಿತರರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಟಿಕೆಟ್ ಗಾಗಿ ಈ ಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಏರ್ಪಟ್ಟಿತ್ತು . ಆದರೆ ಎಲ್ಲಾ ಗೊಂದಲಗಳಿಗೆ ತೆರೆಯೆಳೆದ ಬಿಜೆಪಿ ವರಿಷ್ಠರು ವೇದವ್ಯಾಸ್ ಕಾಮತ್ ಅವರಿಗೆ ಟಿಕೆಟ್ ನೀಡಿದ್ದಾರೆ.