Short News

ಆಂಗ್ಲೋ-ಇಂಡಿಯನ್ ಸದಸ್ಯರ ನಾಮನಿರ್ದೇಶನದ ವಿರುದ್ಧ ಸುಪ್ರೀಂಗೆ ಕಾಂಗ್ರೆಸ್ ದೂರು

ಆಂಗ್ಲೋ-ಇಂಡಿಯನ್ ಸದಸ್ಯರ ನಾಮನಿರ್ದೇಶನದ ವಿರುದ್ಧ ಸುಪ್ರೀಂಗೆ ಕಾಂಗ್ರೆಸ್ ದೂರು

ಕರ್ನಾಟಕ ವಿಧಾನಸಭೆಗೆ ಆಂಗ್ಲೋ ಇಂಡಿಯನ್ ಸದಸ್ಯರನ್ನು ನಾಮ ನಿರ್ದೇಶನ ಮಾಡಿರುವ ರಾಜ್ಯಪಾಲರ ನಿರ್ಧಾರದ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ಕಾನೂನು ಹೋರಾಟ ನಡೆಸಲು ಮುಂದಾಗಿದೆ. ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯಪಾಲರು ಆಂಗ್ಲೋ - ಇಂಡಿಯನ್ ವ್ಯಕ್ತಿಯನ್ನು ವಿಧಾನಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಸದನದಲ್ಲಿ ಇನ್ನೂ ಯಡಿಯೂರಪ್ಪ ವಿಶ್ವಾಸ ಮತ ಸಾಬೀತುಪಡಿಸಿಲ್ಲ. ಹೀಗಿರುವಾಗ ಸಚಿವ ಸಂಪುಟದ ಸದಸ್ಯರು ಶಾಸಕರ ನಾಮ ನಿರ್ದೇಶನಕ್ಕೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡುವಂತಿಲ್ಲ ಎಂದು ಸುಪ್ರೀಂಗೆ ಸಲ್ಲಿಸಿದ ಅರ್ಜಿಯಲ್ಲಿ ಕಾಂಗ್ರೆಸ್-ಜೆಡಿಎಸ್ ವಾದಿಸಿವೆ.
ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ, ಬಿಜೆಪಿಯಿಂದ ಕರಾಳ ದಿನ ಆಚರಣೆ

ಕುಮಾರಸ್ವಾಮಿ ಪ್ರಮಾಣ ವಚನ ಸಮಾರಂಭ, ಬಿಜೆಪಿಯಿಂದ ಕರಾಳ ದಿನ ಆಚರಣೆ

ಎಚ್.ಡಿ.ಕುಮಾರಸ್ವಾಮಿ ಬುಧವಾರ ಸಂಜೆ 4.30ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ದೇಶದ ಗಣ್ಯಾತಿ ಗಣ್ಯರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದರೆ, ಬಿಜೆಪಿ ಶಾಸಕರು ಗೈರು ಹಾಜರಾಗುತ್ತಿದ್ದಾರೆ. ಇದರ ಜೊತೆಗೆ ರಾಜ್ಯಾದ್ಯಂತ ಕರಾಳ ದಿನ ಆಚರಣೆಗೆ ಬಿಜೆಪಿ ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ವರದಿ ತಿಳಿಸಿದೆ. ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿ ಕರಾಳ ದಿನ ಆಚರಣೆ ಮಾಡಲು ಬಿಜೆಪಿ ಕರೆ ನೀಡಿದೆ.
ಮಂಗಳೂರಿನಲ್ಲಿ ಮಾರಕ ನಿಫಾಹ್ ವೈರಾಣು ಸೊಂಕು ತಗುಲಿರುವ ಎರಡು  ಪ್ರಕರಣಗಳು ಪತ್ತೆ

ಮಂಗಳೂರಿನಲ್ಲಿ ಮಾರಕ ನಿಫಾಹ್ ವೈರಾಣು ಸೊಂಕು ತಗುಲಿರುವ ಎರಡು ಪ್ರಕರಣಗಳು ಪತ್ತೆ

ಕೇರಳದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ನಿಫಾಹ್ ವೈರಾಣು ಸೊಂಕು ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಪತ್ತೆಯಾಗಿದೆ. ನಿಫಾಹ್ ವೈರಾಣು ಸೊಂಕು ತಗುಲಿರುವ ಶಂಕಿತ ಎರಡು ಪ್ರಕರಣಗಳು ಪತ್ತೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾಹಿತಿ ನೀಡಿದ್ದಾರೆ. ಈ ಶಂಕಿತ ಸೋಂಕು ತಗುಲಿದ ವ್ಯಕ್ತಿಗಳಲ್ಲಿ ಒಬ್ಬರು ಮಂಗಳೂರಿನವರು ಮತ್ತೊಬ್ಬರು ಕೇರಳದವರೆಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿರುವ ಈ ಇಬ್ಬರ ರಕ್ತದ ಮಾದರಿಯನ್ನ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಪಷ್ಟನೆ ತಿಳಿಯಲಿದೆ ಎಂದಿದ್ದಾರೆ.
ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಪ್ರಹ್ಲಾದ್ ಬಾಬು ಕಣಕ್ಕೆ

ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ವಿಧಾನಸಭಾ ಕ್ಷೇತ್ರಕ್ಕೆ ಅವರ ಸೋದರ ಪ್ರಹ್ಲಾದ್ ಬಾಬು ಅವರು ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಇಂದು ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಪ್ರಕಟಿಸಿದ್ದು, ಪ್ರಹ್ಲಾದ್ ಬಾಬು ಹೆಸನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ನಿಂದ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯರೆಡ್ಡಿ ಸ್ಪರ್ಧಿಸಿದ್ದರೆ ಸಾಮಾಜಿಕ ಹೋರಾಟಗಾರ ರವಿಕೃಷ್ಣ ರೆಡ್ಡಿ ಸ್ವತಂತ್ರ ಅಭ್ಯರ್ಥಿಯಾಗಿ ಅಖಾಡದಲ್ಲಿದ್ದಾರೆ. ಜೂನ್ 11ರಂದು ಮತದಾನ ನಡೆಯಲಿದ್ದು, ಜೂನ್ 13ಕ್ಕೆ ಮತ ಎಣಿಕೆ ನಡೆಯಲಿದೆ.