Short News

ನಾಲ್ಕು ಮೆಟ್ರೋ ನಿಲ್ದಾಣಗಳಲ್ಲಿ ಇ-ಚಾರ್ಜಿಂಗ್ ಘಟಕ ವಾರದಲ್ಲಿ ಶುರು

ನಾಲ್ಕು ಮೆಟ್ರೋ ನಿಲ್ದಾಣಗಳಲ್ಲಿ ಇ-ಚಾರ್ಜಿಂಗ್ ಘಟಕ ವಾರದಲ್ಲಿ ಶುರು

ಬೆಂಗಳೂರಲ್ಲಿ ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚು ಉತ್ತೇಜನ ನೀಡಲಾಗುತ್ತಿದೆ. ಇನ್ನು ಒಂದು ವಾರದ ಒಳಗೆ ನಾಲ್ಕು ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇ-ಚಾರ್ಜಿಂಗ್ ಸ್ಟೇಷನ್ ಗಳನ್ನು ಆರಂಭಿಸಲಾಗುತ್ತಿದೆ. ಬೈಯಪ್ಪನಹಳ್ಳಿ, ಎಂಜಿ ರಸ್ತೆ, ನಾಯಂಡಹಳ್ಳಿ , ಜಯನಗರ ಮೆಟ್ರೋ ನಿಲ್ದಾಣಗಳಲ್ಲಿ ಇ-ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗುತ್ತಿದೆ. ಇನ್ನು ಒಂದೇ ವಾರದಲ್ಲಿ ಚಾರ್ಜಿಂಗ್ ಯಂತ್ರಗಳನ್ನು ಅಳವಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳನ್ನು ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಚಾರ್ಜಿಂಗ್ ಯಂತ್ರವನ್ನು ಅಳವಡಿಸಲಾಗುತ್ತಿದೆ.
ಕಾಶ್ಮೀರದ ಉಗ್ರ ಬುರ್ಹಾನ್ ವಾನಿಯ ಅಂಚೆ ಚೀಟಿ ಬಿಡುಗಡೆ ಮಾಡಿದ ಪಾಕಿಸ್ತಾನ

ಕಾಶ್ಮೀರದ ಉಗ್ರ ಬುರ್ಹಾನ್ ವಾನಿಯ ಅಂಚೆ ಚೀಟಿ ಬಿಡುಗಡೆ ಮಾಡಿದ ಪಾಕಿಸ್ತಾನ

ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಮುಖ್ಯಸ್ಥ ಬುರ್ಹಾನ್ ವಾನಿಯನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಕರೆಯುವ ಮೂಲಕ ಪಾಕಿಸ್ತಾನ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಅಷ್ಟೇ ಅಲ್ಲ, ಬುರ್ಹಾನ್ ವಾನಿ ಸ್ಮರಣಾರ್ಥ ಅಂಚೆ ಚೀಟಿಯನ್ನು ಪಾಕಿಸ್ಥಾನ ಅಂಚೆ ಇಲಾಖೆ ಬಿಡುಗಡೆ ಮಾಡಿದ್ದು, ಈ ಅಂಚೆ ಚೀಟಿಗಳು ಬುರ್ಹಾನ್ ಭಾವಚಿತ್ರವನ್ನು ಹೊಂದಿವೆ! 'ಬುರ್ಹಾನ್ ವಾನಿ ಭಾರತೀಯ ಸೇನೆಯ ದೌರ್ಜನ್ಯಕ್ಕೆ ಬಲಿಯಾದ ಸಂತ್ರಪ್ತ. ಮತ್ತು ಆತ ಕಾಶ್ಮೀರದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮ' ಎಂದು ಪಾಕಿಸ್ತಾನದಲ್ಲಿರುವ ವಾನಿ ಬೆಂಬಲಿಗರು ಹೇಳಿದ್ದಾರೆ. 2016 ರ ಜುಲೈನಲ್ಲಿ ಭಾರತೀಯ ಸೇನೆಯು ಬುರ್ಹಾನ್ ವಾನಿಗೆ ಗುಂಡಿಕ್ಕಿತ್ತು.
ನರೇಂದ್ರ ದಾಬೋಲ್ಕರ್ ಹತ್ಯೆ ಆರೋಪಿಯನ್ನು ವಿಚಾರಣೆಗೆ ಕರೆತಂದ ಎಸ್‌ಐಟಿ

ನರೇಂದ್ರ ದಾಬೋಲ್ಕರ್ ಹತ್ಯೆ ಆರೋಪಿಯನ್ನು ವಿಚಾರಣೆಗೆ ಕರೆತಂದ ಎಸ್‌ಐಟಿ

ಗೌರಿ ಹತ್ಯೆ ತನಿಖೆ ವೇಗ ಪಡೆದುಕೊಂಡ ನಂತರ ಮಹಾರಾಷ್ಟ್ರ ಎಎಸ್‌ಟಿ ತಂಡ ನರೇಂದ್ರ ದಾಬೋಲ್ಕರ್ ಹತ್ಯೆ ಆರೋಪಿಗಳನ್ನು ಬಂಧಿಸಿದ್ದರು. ಈಗ ಈ ಎರಡೂ ಹಂತಕರ ಗುಂಪಿಗೆ ಪರಸ್ಪರ ನಿಕಟ ಸಂಪರ್ಕ ಇದೆ. ಮಾತ್ರವಲ್ಲ ಒಂದೇ ಸಂಘಟನೆಯ ಸದಸ್ಯರು ಈ ಹತ್ಯೆ ಮಾಡಿದ್ದಾರೆ ಎಂಬ ಅನುಮಾನ ಮಹಾರಾಷ್ಟ್ರ ಹಾಗೂ ಕರ್ನಾಟಕ ಪೊಲೀಸರಿಗೆ ವ್ಯಕ್ತವಾಗಿದೆ. ಗೌರಿ ಹತ್ಯೆ ಪ್ರಕರಣದ ಮಾಸ್ಟರ್‌ ಮೈಂಡ್‌ ಅಮೋಲ್ ಕಾಳೆ,ಮನೋಹರ ಯಡವೆಯನ್ನು ಮಹಾರಾಷ್ಟ್ರ ಪೊಲೀಸರು ವಿಚಾರಣೆಗೆಂದು ವಶಕ್ಕೆ ಪಡೆದಿದ್ದರು. ಈಗ ಕರ್ನಾಟಕದ ಎಸ್‌ಐಟಿಯು ದಾಬೋಲ್ಕರ್ ಹತ್ಯೆ ಪ್ರಕರಣದ ಶರತ್‌ ಕಲಾಸ್ಕರ್‌ ಎಂಬಾತನನ್ನು ವಿಚಾರಣೆಗೆಂದು ವಶಕ್ಕೆ ಪಡೆದಿದೆ.
ಸಿದ್ದರಾಮಯ್ಯ ಮನೆಯಲ್ಲಿ ಎಚ್‌ಡಿಕೆ, ತೀವ್ರ ಕುತೂಹಲ ಮೂಡಿಸಿದ ರಾಜಕೀಯ ನಾಯಕರ ಭೇಟಿ

ಸಿದ್ದರಾಮಯ್ಯ ಮನೆಯಲ್ಲಿ ಎಚ್‌ಡಿಕೆ, ತೀವ್ರ ಕುತೂಹಲ ಮೂಡಿಸಿದ ರಾಜಕೀಯ ನಾಯಕರ ಭೇಟಿ

ಒಂದು ಕಡೆ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರ ದಂಗೆ ಹೇಳಿಕೆಗೆ ವಿಪಕ್ಷ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇನ್ನೊಂದು ಕಡೆ ದೇವೇಗೌಡ ಕುಟುಂಬದ ವಿರುದ್ಧವೇ ಭ್ರಷ್ಟಚಾರದ ಆರೋಪ ಪ್ರತಿ ಧ್ವನಿಸುತ್ತಿದೆ. ಇದರ ನಡುವೆ ಇಂದು ಖುದ್ದು ಕುಮಾರಸ್ವಾಮಿ ಸಿದ್ದರಾಮಯ್ಯನವರ ನಿವಾಸ ಕಾವೇರಿಗೆ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಿಜೆಪಿಯಿಂದ ಎದುರಾಗುತ್ತಿರುವ ಪ್ರತಿರೋಧ, ಇತ್ತೀಚಿನ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಸಚಿವ ಡಿ.ಕೆ ಶಿವಕುಮಾರ್​, ಉಪಮುಖ್ಯಮಂತ್ರಿ ಪರಮೇಶ್ವರ್​, ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಮೊದಲಾದವರು ಉಪಸ್ಥಿತರಿದ್ದರು.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more