Short News

ಕುಮಾರಸ್ವಾಮಿ ಅವರ ಆಲಮಟ್ಟಿ ಬಾಗಿನ ಕಾರ್ಯಕ್ರಮ ರದ್ದು

ಕುಮಾರಸ್ವಾಮಿ ಅವರ ಆಲಮಟ್ಟಿ ಬಾಗಿನ ಕಾರ್ಯಕ್ರಮ ರದ್ದು

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯಕ್ರಮ ರದ್ದಾಗಿದೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದರು.ಹುಬ್ಬಳ್ಳಿಯಲ್ಲಿ ನ್ಯಾಯಾಲಯದ ಕಟ್ಟಡ ಉದ್ಘಾಟನೆ ಮಾಡಿದ ಬಳಿಕ ಕುಮಾರಸ್ವಾಮಿ ಅವರು ವಿಜಯಪುರಕ್ಕೆ ಭೇಟಿ ನೀಡಬೇಕಿತ್ತು. ಆದರೆ, ಹವಾಮಾನ ವೈಫರಿತ್ಯದ ಕಾರಣ ಪ್ರವಾಸ ರದ್ದಾಗಿದೆ. ಹೆಲಿಕಾಪ್ಟರ್ ಟೇಕಾಫ್‌ಗೆ ಪೈಲೆಟ್ ನಿರಾಕರಿಸಿದರು. ಮೋಡ ಕವಿದ ವಾತಾವರಣದ ಹಿನ್ನಲೆಯಲ್ಲಿ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಟೇಕಾಫ್ ಆಗಲಿಲ್ಲ. ಆದ್ದರಿಂದ, ಕುಮಾರಸ್ವಾಮಿ ಅವರು ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ.
ಸಾರ್ವಕಾಲಿಕ ಕನಿಷ್ಛ ಮೌಲ್ಯಕ್ಕೆ ಕುಸಿದ ರೂಪಾಯಿ ಮೌಲ್ಯ, ಪ್ರತೀ ಡಾಲರ್ ಗೆ 70.32 ರೂ.

ಸಾರ್ವಕಾಲಿಕ ಕನಿಷ್ಛ ಮೌಲ್ಯಕ್ಕೆ ಕುಸಿದ ರೂಪಾಯಿ ಮೌಲ್ಯ, ಪ್ರತೀ ಡಾಲರ್ ಗೆ 70.32 ರೂ.

ಮತ್ತೆ ಭಾರತೀಯ ರೂಪಾಯಿ ಪಾತಾಳಕ್ಕೆ ಕುಸಿದಿದ್ದು, ಇದೇ ಮೊದಲ ಬಾರಿಗೆ ರೂಪಾಯಿ ಮೌಲ್ಯ ಪ್ರತೀ ಡಾಲರ್ ಗೆ 70.32 ರೂ ಇಳಿಕೆ ಕಂಡಿದೆ. ಗುರುವಾರದ ವಹಿವಾಟು ಆರಂಭವಾಗುತ್ತಿದ್ದಂತೆಯೇ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಮತ್ತೆ 43 ಪೈಸೆಯಷ್ಟು ದಿಢೀರ್ ಕುಸಿತ ಕಂಡಿತು. ಮಾರುಕಟ್ಟೆ ಪರಿಸ್ಥಿತಿಯನ್ನು ಕೇಂದ್ರ ವಿತ್ತ ಸಚಿವಾಲಯ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೂಡಿಕೆದಾರರು ಆತಂಕ ಪಡುವ ಅಗತ್ಯವಿಲ್ಲ. ಭಾರತೀಯ ಆರ್ಥಿಕತೆ ಸ್ಥಿರವಾಗಿದ್ದು, ಅಸ್ಥಿರವಾದ ಅಂತಾರಾಷ್ಟ್ರೀಯ ಆರ್ಥಿಕ ವಾತಾವರಣಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ತುಂಗಭದ್ರೆಯಿಂದ ಹರಿದ ನೀರು, ಮುಳುಗಿದ 60 ವರ್ಷ ಹಳೆಯ ಕಂಪ್ಲಿ ಸೇತುವೆ

ತುಂಗಭದ್ರೆಯಿಂದ ಹರಿದ ನೀರು, ಮುಳುಗಿದ 60 ವರ್ಷ ಹಳೆಯ ಕಂಪ್ಲಿ ಸೇತುವೆ

ತುಂಗಭದ್ರಾ ಜಲಾಶಯದಿಂದ ನದಿಗೆ 1ಲಕ್ಷ 91ಸಾವಿರ ಕ್ಯುಸೆಕ್ ನೀರು ಹೊರಬಿಟ್ಟಿರುವ ಕಾರಣ ಬಳ್ಳಾರಿ-ಕೊಪ್ಪಳ ಜಿಲ್ಲೆಗಳ ಸಂಪರ್ಕಿಸುವ ಕಂಪ್ಲಿ-ಕೋಟೆ ಪ್ರದೇಶದ 60ವರ್ಷಗಳ ಹಳೆಯದಾದ ಸೇತುವೆ ಸಂಪೂರ್ಣವಾಗಿ ಮುಳುಗಿ, ನೀರು ಸೇತುವೆಯ ಮೇಲೆ ಹರಿಯುತ್ತಿದೆ. ಕಂಪ್ಲಿ-ಕೋಟೆ ಬಳಿಯ ಭತ್ತ,ಬಾಳೆ ತೋಟಗಳಿಗೆ ನೀರುನುಗ್ಗಿದೆ. ಕೋಟೆಯ ಪ್ರಸನ್ನ ವೆಂಕಟರಮಣ ದೇವಸ್ಥಾನ, ಹೊಳೆ ಆಂಜನೇಯಸ್ವಾಮಿ ದೇವಸ್ಥಾನ, ಐತಿಹಾಸಿಕ ಕೋಟೆ ಜಲಾವೃತ್ತವಾಗಿದ್ದು, ಬಹುತೇಕ ಮಾರ್ಗಗಳು ಜಲಾವೃತಗೊಂಡಿವೆ. ಕೋಟೆ ಪ್ರದೇಶದಲ್ಲಿ ವಾಸವಾಗಿದ್ದ ಮೀನುಗಾರರ ಆರು ಕುಟುಂಬಗಳನ್ನು ಸರ್ಕಾರಿ ಶಾಲೆಗೆ ವರ್ಗಾವಣೆ ಮಾಡಿ, ಕಂದಾಯ ಅಧಿಕಾರಿಗಳು ನೆರವಾಗಿದ್ದಾರೆ.
ಕರ್ನಾಟಕದಲ್ಲಿ ವರುಣನ ಆರ್ಭಟ: 5 ಜಿಲ್ಲೆಗೆ ಸಂಪರ್ಕ ಕಡಿತ

ಕರ್ನಾಟಕದಲ್ಲಿ ವರುಣನ ಆರ್ಭಟ: 5 ಜಿಲ್ಲೆಗೆ ಸಂಪರ್ಕ ಕಡಿತ

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಮಳೆಯಿಂದಾಗಿ ಐದು ಜಿಲ್ಲೆಗಳ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಲವು ಅನಾಹುತಗಳು ಸಂಭವಿಸಿದ್ದು, ಭೂ ಕುಸಿತದಿಂದಾಗಿ ಶಿರಾಡಿ ಘಾಟ್ ನಲ್ಲಿ ಟ್ಯಾಂಕರ್ ಉರುಳಿ ಬಿದ್ದಿದೆ.ಶಿರಾಡಿ, ಆಗುಂಬೆ ಮತ್ತು ಸಂಪಾಜೆ ಘಾಟಿ ರಸ್ತೆ ಸಂಪೂರ್ಣ ಬಂದ್ ಮಾಡಲಾಗಿದೆ. ಕರಾವಳಿಯವರನ್ನು ಸಂಪರ್ಕಿಸಲು ಸದ್ಯಕ್ಕೆ ಚಾರ್ಮಾಡಿ ಘಾಟಿಯೊಂದೇ ಆಸರೆಯಾಗಿದ್ದು, ಅಲ್ಲಿ ಕೂಡ ಘನ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more