Short News

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಎಸ್.ತಿಪ್ಪೇಸ್ವಾಮಿ

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಎಸ್.ತಿಪ್ಪೇಸ್ವಾಮಿ

ಚಳ್ಳಕೆರೆ ತಾಲೂಕಿನ ನೇರಲಕುಂಟೆ ಗ್ರಾಮದಲ್ಲಿ ಎಸ್.ತಿಪ್ಪೇಸ್ವಾಮಿ ಅವರು ಶನಿವಾರ ಕಾರ್ಯಕರ್ತರ, ಅಭಿಮಾನಿಗಳ ಸಭೆ ನಡೆಸಿದರು. ಸಭೆಯಲ್ಲಿ 2018ರ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಅವರು ಘೋಷಣೆ ಮಾಡಿದರು. ಶ್ರೀರಾಮುಲು ಅವರನ್ನು ಸೋಲಿಸುವುದೇ ನನ್ನ ಗುರಿ. ಬೇರೆ ಯಾವುದೇ ಪಕ್ಷದಿಂದ ಟಿಕೆಟ್ ನೀಡಿದರೂ ಸ್ಪರ್ಧೆ ಮಾಡುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಎಸ್.ತಿಪ್ಪೇಸ್ವಾಮಿ ಅವರು ಸ್ಪಷ್ಟಪಡಿಸಿದರು. ಶ್ರೀರಾಮುಲು ಅವರು ನೀಡಿದ ಭರವಸೆಗಳನ್ನು ಈಡೇರಿಸುವುದಿಲ್ಲ ಎಂಬುದು ಬಳ್ಳಾರಿಯ ಜನರಿಗೆ ಅರಿವಾಗಿದೆ ಎಂದರು.
12ವರ್ಷದೊಳಗಿನ ಮಕ್ಕಳ ಅತ್ಯಾಚಾರಿಗೆ ಗಲ್ಲು: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಒಪ್ಪಿಗೆ

12ವರ್ಷದೊಳಗಿನ ಮಕ್ಕಳ ಅತ್ಯಾಚಾರಿಗೆ ಗಲ್ಲು: ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಒಪ್ಪಿಗೆ

ಕಾಶ್ಮೀರದ ಕತುವಾ,ಉತ್ತರಪ್ರದೇಶದ ಉನ್ನಾವೋ,ಸೂರತ್ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ 12ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರವೆಸಗವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕೇಂದ್ರದ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾನುವಾರ ಒಪ್ಪಿಗೆ ಸೂಚಿಸಿದ್ದಾರೆ. ಶನಿವಾರ ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅತ್ಯಾಚಾರಿಗಳ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಕೇಂದ್ರ ಕೈಗೊಂಡಿದ್ದ ಈ ಅಧ್ಯಾದೇಶವನ್ನು ರಾಷ್ಟ್ರಪತಿಗಳ ಅಂಕಿತಕ್ಕೆ ಕಳುಹಿಸಿದ್ದರು. ಇದೀಗ ಈ ಆದೇಶಕ್ಕೆ ರಾಷ್ಟ್ರಪತಿಗಳು ಒಪ್ಪಿಗೆ ನೀಡಿದ್ದಾರೆ.
ಈಜು ಬೇಸಿಗೆ ಶಿಬಿರ, ಆಸಕ್ತರು ಈಗಲೇ ಸಂಪರ್ಕಿಸಿ

ಈಜು ಬೇಸಿಗೆ ಶಿಬಿರ, ಆಸಕ್ತರು ಈಗಲೇ ಸಂಪರ್ಕಿಸಿ

ಬೆಂಗಳೂರಿನ ಬಸವನಗುಡಿ ಈಜು ಕೇಂದ್ರ (ಬಿಎಸಿ), ಮೇ 1ರಿಂದ 28 ರವರೆಗೆ ಬೇಸಿಗೆ ಈಜು ತರಬೇತಿ ಶಿಬಿರ ಹಮ್ಮಿಕೊಂಡಿದೆ. ಮಹಿಳೆಯರು, ಪುರುಷರು ಮತ್ತು ಮಕ್ಕಳು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಆಸಕ್ತರು ಪಂಪ ಮಹಾಕವಿ ರಸ್ತೆಯಲ್ಲಿರುವ ಬಿಎಸಿ ಕಚೇರಿಯಲ್ಲಿ ಮುಂಚಿತವಾಗಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 98444 62077 ಈ ನಂಬರ್ ಗೆ ಸಂಪರ್ಕಿಸಬಹುದು.
ಎಟಿಪಿ ಮಾಸ್ಟರ್ಸ್‌  ಟೂರ್ನಿ : ಪೈನಲ್ ಗೆ ಲಗ್ಗೆ ಇಟ್ಟ  ನಡಾಲ್‌

ಎಟಿಪಿ ಮಾಸ್ಟರ್ಸ್‌ ಟೂರ್ನಿ : ಪೈನಲ್ ಗೆ ಲಗ್ಗೆ ಇಟ್ಟ ನಡಾಲ್‌

ಎಟಿಪಿ ಮಾಂಟೆ ಕಾರ್ಲೊ ಮಾಸ್ಟರ್ಸ್‌ ಟೆನಿಸ್‌ ಟೂರ್ನಿಯಲ್ಲಿ ಸ್ಪೇನ್‌ನ ರಫೆಲ್‌ ನಡಾಲ್‌ ಫೈನಲ್‌ ಗೆ ಲಗ್ಗೆ ಇಟ್ಟಿದ್ದಾರೆ. ಶನಿವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ ನಲ್ಲಿ ಬಲ್ಗೇರಿಯಾದ ಗ್ರಿಗರ್‌ ದಿಮಿಟ್ರೊವ್‌ ಅವರನ್ನು 6-4, 6-1ರ ನೇರ ಸೆಟ್‌ಗಳಿಂದ ಸೋಲಿಸಿದರು. ಇದರೊಂದಿಗೆ ಟೂರ್ನಿಯಲ್ಲಿ 11ನೇ ಬಾರಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ ನಡಾಲ್. ಭಾನುವಾರ ಫೈನಲ್ ನಡೆಯಲಿದೆ.