Short News

ಮುತ್ತುರಾಜ್ ಅಂಡರ್ ಪಾಸ್‌ ಕಾಮಗಾರಿಗೆ ಡಿಸೆಂಬರ್‌ನಲ್ಲಿ ಮುಕ್ತಿ

ಮುತ್ತುರಾಜ್ ಅಂಡರ್ ಪಾಸ್‌ ಕಾಮಗಾರಿಗೆ ಡಿಸೆಂಬರ್‌ನಲ್ಲಿ ಮುಕ್ತಿ

ಹೊಸಕೆರೆ ಹಳ್ಳಿ ಸಮೀಪದ ಮುತ್ತುರಾಜ್ ಜಂಕ್ಷನ್‌ನಲ್ಲಿ ಕೈಗೊಂಡಿರುವ ಅಂಡರ್ ಪಾಸ್‌ ಕಾಮಗಾರಿ ಡಿಸೆಂಬರ್‌ ಒಳಗೆ ಪೂರ್ಣಗೊಳಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗವುದು ಎಂದು ಬಿಬಿಎಂಪಿ ಮೇಯರ್ ಸಂಪತ್‌ರಾಜ್‌ ತಿಳಿಸಿದ್ದಾರೆ. ನಾಯಂಡಹಳ್ಳಿ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಸಿಗ್ನಲ್ ಫ್ರೀ ಕಾರಿಡಾರ್ ಯೋಜನೆಯಡಿ ಮುತ್ತುರಾಜ್ ಜಂಕ್ಷನ್‌ನಲ್ಲಿ ಕೈಗೊಂಡ ಕೆಳಸೇತುವೆ ಕಾಮಗಾರಿಯ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಶೀಘ್ರದಲ್ಲಿ ಕತ್ರಿಗುಪ್ಪೆಯ ಫುಡ್‌ ವರ್ಲ್ಡ್ ಜಂಕ್ಷನ್‌ನಲ್ಲಿ ಕೆಳಸೇತುವೆ ಮತ್ತು ಜೆಡಿ ಮರ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗುತ್ತದೆ ಎಂದರು.
ಹಿಮಾಚಲ ಪ್ರದೇಶ : ಹಿಮಪಾತಕ್ಕೆ ಸಿಲುಕಿ ಟ್ರೆಕ್ಕಿಂಗ್ ಗೆ ತೆರಳಿದ್ದ 45 ಮಂದಿ ನಾಪತ್ತೆ

ಹಿಮಾಚಲ ಪ್ರದೇಶ : ಹಿಮಪಾತಕ್ಕೆ ಸಿಲುಕಿ ಟ್ರೆಕ್ಕಿಂಗ್ ಗೆ ತೆರಳಿದ್ದ 45 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಟ್ರೆಕ್ಕಿಂಗ್​ಗೆಂದು ತೆರಳಿದ್ದ 45 ಮಂದಿ ಭಾರೀ ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಹಿಮಾಚಲದ ಪ್ರದೇಶದ ಹಲವು ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು, ಟ್ರೆಕ್ಕಿಂಗ್​ಗೆ ತೆರಳಿದ್ದ ತಂಡ ಮನಾಲಿ ತಲುಪಲು ಸಾಧ್ಯವಾಗಿಲ್ಲ. ಜೊತೆಗೆ ತಂಡವನ್ನು ಸಂಪರ್ಕಿಸಲು ಸಹ ಸಾಧ್ಯವಾಗುತ್ತಿಲ್ಲ. ರೂರ್ಕಿಯ ಐಐಟಿಯ 35 ವಿದ್ಯಾರ್ಥಿಗಳು ಸೇರಿದಂತೆ 45 ಮಂದಿ ಲಹೌಲ್ ಹಾಗೂ ಸ್ಪಿಟಿ ಜಿಲ್ಲೆಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದರು. ಭಾರೀ ಮಳೆಯ ಪರಿಣಾಮ ಕುಲು ಜಿಲ್ಲೆಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿದ್ದು, ಸುಮಾರು 20 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ

ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲು ಅಧಿಕೃತ ಒಪ್ಪಿಗೆ ಸಿಕ್ಕಿದೆ. ಜೆಡಿಎಸ್‌ ಜೊತೆ ಮಾತುಕತೆ ನಡೆಸಲು ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಲಾಗಿದೆ. ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸೋಮವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ಮೈತ್ರಿ ನಿರ್ಧಾರ ಕೈಗೊಂಡಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್‌ 9 ಮತ್ತು ಜೆಡಿಎಸ್‌ 2 ಸ್ಥಾನಗಳಲ್ಲಿ ಜಯಗಳಿಸಿತ್ತು.
'ಮಸೀದಿಯು ಇಸ್ಲಾಂನ ಮುಖ್ಯ ಭಾಗವೇ ಎಂದು ತಿಳಿಯಲು 2 ವರ್ಷ ಬೇಕಾ?'

'ಮಸೀದಿಯು ಇಸ್ಲಾಂನ ಮುಖ್ಯ ಭಾಗವೇ ಎಂದು ತಿಳಿಯಲು 2 ವರ್ಷ ಬೇಕಾ?'

ಒಂದು ವೇಳೆ ಸಂಸತ್ ನಿಂದ ಸಂವಿಧಾನಕ್ಕೆ ವಿರುದ್ಧವಾದ ಕಾನೂನು ಮಾಡಿದರೆ ಆಗ ಸುಪ್ರೀಂ ಕೋರ್ಟ್ ಸರ್ವೋಚ್ಚ ಆಗುತ್ತದೆ. ಆದರೆ ಕಾನೂನು ರೂಪಿಸುವ ಅಧಿಕಾರ ಇರುವುದು ಸಂಸತ್ ಗೆ ಅದರರ್ಥ ನಾವು ಸಂಸತ್ ನ ದಾರಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಹಾಗಂತ ನಾವು ಆ ದಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ ಎಂದಲ್ಲ ಎಂಬ ಟ್ವೀಟ್ ಮಾಡಿದ್ದಾರೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ. ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಕೊನೆಗೆ ಸಂವಿಧಾನದ ಪ್ರಕಾರ ಸುಪ್ರೀಂ ಕೋರ್ಟ್ ಸರ್ವೋಚ್ಚ ಅಲ್ಲ. ಸುಪ್ರೀಂ ಕೋರ್ಟ್ ಒಂದು ಸ್ತಂಭವಾದರೆ, ಮತ್ತೊಂದು ಸ್ತಂಭ ಸಂಸತ್ ಎಂದಿದ್ದಾರೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more