Short News

ಡ್ರಗ್ಸ್ ಮಾರಾಟಗಾರರ ವಿರುದ್ಧ ಗೂಂಡಾ ಕಾಯ್ದೆ: ಉಪ ಮುಖ್ಯಮಂತ್ರಿ

ಡ್ರಗ್ಸ್ ಮಾರಾಟಗಾರರ ವಿರುದ್ಧ ಗೂಂಡಾ ಕಾಯ್ದೆ: ಉಪ ಮುಖ್ಯಮಂತ್ರಿ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡ್ರಗ್ಸ್ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಶುಕ್ರವಾರ ವಿಧಾನಸಭೆಗೆ ಮಾಹಿತಿ ನೀಡಿದ್ದಾರೆ. ಶುಕ್ರವಾರ ವಿಧಾನಸಭೆಯಲ್ಲಿ ಮಾದಕ ವಸ್ತುಗಳಿಗೆ ಯುವಕರು ಬಲಿಯಾಗುತ್ತಿರುವ ವಿಚಾರ ಪ್ರಸ್ತಾಪಿಸಿದ ಬಿಜೆಪಿಯ ಆರ್ ಅಶೋಕ್ ಅವರು, ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಮಿತಿ ಮೀರುತ್ತಿದೆ. ಹೀಗಾಗಿ ಡ್ರಗ್ಸ್ ಮಾರಾಟ ಮಾಡುವವರ ವಿರುದ್ಧ ಗೂಂಡಾ ಕಾಯ್ದೆ ಅಡಿ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.
ಅಗಸ್ಟಾವೆಸ್ಟ್‌ಲ್ಯಾಂಡ್‌ಗೂ ಗಾಂಧಿ ಕುಟುಂಬಕ್ಕೂ ಸಂಬಂಧವಿಲ್ಲ: ಆಂಟನಿ

ಅಗಸ್ಟಾವೆಸ್ಟ್‌ಲ್ಯಾಂಡ್‌ಗೂ ಗಾಂಧಿ ಕುಟುಂಬಕ್ಕೂ ಸಂಬಂಧವಿಲ್ಲ: ಆಂಟನಿ

ಅಗಸ್ಟಾವೆಸ್ಟ್‌ಲ್ಯಾಂಡ್‌ ಪ್ರಕರಣದ ತನಿಖೆಗೆ ಮೊದಲು ಆದೇಶಿಸಿದ್ದೇ ಕಾಂಗ್ರೆಸ್ ಪಕ್ಷ. ಈ ಪ್ರಕರಣಕ್ಕೂ ಗಾಂಧಿ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಆಂಟನಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಕರಣದ ತನಿಖೆ ನಡೆಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೆವು. ತನಿಖೆ ನಮ್ಮ ಆದೇಶವಾಗಿತ್ತು. ಈ ಪ್ರಕರಣಕ್ಕೂ ಗಾಂಧಿ ಕುಟುಂಬಕ್ಕೂ ಸಂಬಂಧವಿಲ್ಲ. ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ' ಎಂದಿದ್ದಾರೆ.
ಮಹಿಳೆಯರಿಗೆ ಶಬರಿಮಲೆ ಪ್ರವೇಶ ನಿರ್ಬಂಧ, ದೇವಾಲಯದ ಸ್ಪಷ್ಟನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದ ಸುಪ್ರೀಂ

ಮಹಿಳೆಯರಿಗೆ ಶಬರಿಮಲೆ ಪ್ರವೇಶ ನಿರ್ಬಂಧ, ದೇವಾಲಯದ ಸ್ಪಷ್ಟನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದ ಸುಪ್ರೀಂ

ಮಹಿಳೆಯರಿಗೆ 41ದಿನಗಳ ಕಾಲ ಕಠಿನ ವ್ರತ(ದೇಹದಂಡನೆ)ಕೈಗೊಳ್ಳುವುದು ಅಸಾಧ್ಯ ಎಂಬ ಕಾರಣಕ್ಕೆ ಶಬರಿಮಲೆ ದೇಗುಲ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಹೇಳಿತ್ತು. ಇದಕ್ಕೆ ಉತ್ತರಿಸಿರುವ ಸುಪ್ರೀಂ ಕೋರ್ಟ್ 41 ದಿನಗಳ ಕಾಲ ಇಂದ್ರಿಯಗಳನ್ನು ನಿಗ್ರಹಿಸಬೇಕು ಎಂಬ ಷರತ್ತನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದೆ.ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶ ನಿಷೇಧ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನಿಕ ಪೀಠ. ದೇವರ ಮೇಲಿನ ಭಕ್ತಿಯಿಂದ ಮಹಿಳೆಯರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ ಎಂದು ಹೇಳಿದೆ.
ಅಧಿವೇಶನ ಸಂದರ್ಭದಲ್ಲೇ ಜಿಎಸ್ಟಿ ಸಭೆ, ಜನಸಾಮಾನ್ಯರ ಅಧಿಕ ಬಳಕೆಯ 40ಕ್ಕೂ ಅಧಿಕ ಉತ್ಪನ್ನಗಳ ಬೆಲೆ ಇಳಿಕೆ?

ಅಧಿವೇಶನ ಸಂದರ್ಭದಲ್ಲೇ ಜಿಎಸ್ಟಿ ಸಭೆ, ಜನಸಾಮಾನ್ಯರ ಅಧಿಕ ಬಳಕೆಯ 40ಕ್ಕೂ ಅಧಿಕ ಉತ್ಪನ್ನಗಳ ಬೆಲೆ ಇಳಿಕೆ?

ಮುಂಗಾರು ಅಧಿವೇಶನದಲ್ಲಿ ಮಹತ್ವದ ಮಸೂದೆ ಮಂಡನೆ,ಅವಿಶ್ವಾಸ ನಿರ್ಣಯ ಎದುರಿಸುತ್ತಿರುವ ಕೇಂದ್ರವು,ಜನತೆಗೆ ಶನಿವಾರದ ಬಳಿಕ ಕೊಂಚ ನೆಮ್ಮದಿಯ ಸುದ್ದಿ ನೀಡುವ ಸಾಧ್ಯತೆ ಹೆಚ್ಚಿದೆ.ಜುಲೈ 21ರಂದು ದೆಹಲಿಯಲ್ಲಿ ನಡೆಯಲಿರುವ ಜಿಎಸ್​ಟಿ ಮಂಡಳಿ ಸಭೆ ಸೇರಲಿದೆ. ನ್ಯಾಪ್ಕಿನ್,ಕೈಮಗ್ಗ,ಕರಕುಶಲ ಉತ್ಪನ್ನ ಸೇರಿದಂತೆ 40ಕ್ಕೂ ಅಧಿಕ ಸರಕು, ಸೇವೆಗಳ ತೆರಿಗೆ ಹೊರೆ ಇಳಿಸುವ ಸಾಧ್ಯತೆ ಕಂಡು ಬಂದಿದೆ.ಜಿಎಸ್​ಟಿ ಜಾರಿಯಾಗಿ ಒಂದು ವರ್ಷವಾಗಿದ್ದು, ಇಲ್ಲಿ ತನಕ 328 ಸರಕು, ಸೇವೆಗಳ ಮೇಲಿನ ತೆರಿಗೆ ಇಳಿಸಲಾಗಿದೆ. ಇದೀಗ ಜನಸಾಮಾನ್ಯರ ಅಧಿಕ ಬಳಕೆಯ 40ಕ್ಕೂ ಅಧಿಕ ಉತ್ಪನ್ನಗಳ ತೆರಿಗೆ ಪ್ರಮಾಣ ಕಡಿಮೆ ಮಾಡುವ ಪ್ರಸ್ತಾವನೆ ಮಂಡಳಿ ಮುಂದಿದೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more