Short News

ಶುಂಠಿಯ ಪವರ್‌ಫುಲ್ ಮನೆ ಔಷಧಿಗಳು

ಶುಂಠಿಯ ಪವರ್‌ಫುಲ್ ಮನೆ ಔಷಧಿಗಳು

ಕೆಲ ಶುಂಠಿ ಚೂರುಗಳನ್ನು ಒಂದು ಲೋಟ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ, ಈ ದ್ರಾವಣವನ್ನು ಸೇವಿಸಿ. ಒಂದಿಷ್ಟು ಶುಂಠಿಯನ್ನು ಚೆನ್ನಾಗಿ ಅರೆದು ಇದರ ರಸ ತೆಗೆದು ಸೇವಿಸುವುದು ಕೂಡ ಪರಿಣಾಮಕಾರಿಯಾಗಿದೆ. ಶುಂಠಿಯ ಈ ರಸ ತೀರಾ ಘಾಟು ಅನಿಸಿದರೆ ಇದಕ್ಕೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಕುಡಿಯಬಹುದು.  ಅಜೀರ್ಣತೆ, ಗಂಟಲು ಕೆರೆತ ಹಾಗೂ ತಲೆನೋವು ನಿವಾರಣೆಗೂ ಶುಂಠಿ ಪ್ರಯೋಜನಕಾರಿಯಾಗಿದೆ. ಇದು ಉರಿಯೂತವನ್ನು ನಿವಾರಿಸುವ ಗುಣವನ್ನು ಹೊಂದಿದ್ದು, ಜೀರ್ಣ ವ್ಯವಸ್ಥೆಯನ್ನು ಉತ್ತಮಗೊಳಿಸುತ್ತದೆ. ಹೊಟ್ಟೆಯಲ್ಲಿ ಲೋಳೆಯ ಸ್ರವಿಸುವಿಕೆಯನ್ನು ಹೆಚ್ಚಿಸುವ ಶುಂಠಿಯು ಒಟ್ಟಾರೆಯಾಗಿ ಜೀರ್ಣ ಕ್ರಿಯೆಯನ್ನು ಸುಧಾರಿಸುತ್ತದೆ.
ಹಿಮಾಚಲ ಪ್ರದೇಶ : ಹಿಮಪಾತಕ್ಕೆ ಸಿಲುಕಿ ಟ್ರೆಕ್ಕಿಂಗ್ ಗೆ ತೆರಳಿದ್ದ 45 ಮಂದಿ ನಾಪತ್ತೆ

ಹಿಮಾಚಲ ಪ್ರದೇಶ : ಹಿಮಪಾತಕ್ಕೆ ಸಿಲುಕಿ ಟ್ರೆಕ್ಕಿಂಗ್ ಗೆ ತೆರಳಿದ್ದ 45 ಮಂದಿ ನಾಪತ್ತೆ

ಹಿಮಾಚಲ ಪ್ರದೇಶದಲ್ಲಿ ಟ್ರೆಕ್ಕಿಂಗ್​ಗೆಂದು ತೆರಳಿದ್ದ 45 ಮಂದಿ ಭಾರೀ ಹಿಮಪಾತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಹಿಮಾಚಲದ ಪ್ರದೇಶದ ಹಲವು ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು, ಟ್ರೆಕ್ಕಿಂಗ್​ಗೆ ತೆರಳಿದ್ದ ತಂಡ ಮನಾಲಿ ತಲುಪಲು ಸಾಧ್ಯವಾಗಿಲ್ಲ. ಜೊತೆಗೆ ತಂಡವನ್ನು ಸಂಪರ್ಕಿಸಲು ಸಹ ಸಾಧ್ಯವಾಗುತ್ತಿಲ್ಲ. ರೂರ್ಕಿಯ ಐಐಟಿಯ 35 ವಿದ್ಯಾರ್ಥಿಗಳು ಸೇರಿದಂತೆ 45 ಮಂದಿ ಲಹೌಲ್ ಹಾಗೂ ಸ್ಪಿಟಿ ಜಿಲ್ಲೆಯಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ್ದರು. ಭಾರೀ ಮಳೆಯ ಪರಿಣಾಮ ಕುಲು ಜಿಲ್ಲೆಯಲ್ಲಿ ಹೈ ಅಲರ್ಟ್​ ಘೋಷಿಸಲಾಗಿದ್ದು, ಸುಮಾರು 20 ಕೋಟಿ ನಷ್ಟ ಉಂಟಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ

ಲೋಕಸಭೆ ಚುನಾವಣೆ : ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಗೆ ಅಧಿಕೃತ ಒಪ್ಪಿಗೆ

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲು ಅಧಿಕೃತ ಒಪ್ಪಿಗೆ ಸಿಕ್ಕಿದೆ. ಜೆಡಿಎಸ್‌ ಜೊತೆ ಮಾತುಕತೆ ನಡೆಸಲು ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಲಾಗಿದೆ. ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಸೋಮವಾರ ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಕಾಂಗ್ರೆಸ್ ಮೈತ್ರಿ ನಿರ್ಧಾರ ಕೈಗೊಂಡಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್‌ 9 ಮತ್ತು ಜೆಡಿಎಸ್‌ 2 ಸ್ಥಾನಗಳಲ್ಲಿ ಜಯಗಳಿಸಿತ್ತು.
'ಮಸೀದಿಯು ಇಸ್ಲಾಂನ ಮುಖ್ಯ ಭಾಗವೇ ಎಂದು ತಿಳಿಯಲು 2 ವರ್ಷ ಬೇಕಾ?'

'ಮಸೀದಿಯು ಇಸ್ಲಾಂನ ಮುಖ್ಯ ಭಾಗವೇ ಎಂದು ತಿಳಿಯಲು 2 ವರ್ಷ ಬೇಕಾ?'

ಒಂದು ವೇಳೆ ಸಂಸತ್ ನಿಂದ ಸಂವಿಧಾನಕ್ಕೆ ವಿರುದ್ಧವಾದ ಕಾನೂನು ಮಾಡಿದರೆ ಆಗ ಸುಪ್ರೀಂ ಕೋರ್ಟ್ ಸರ್ವೋಚ್ಚ ಆಗುತ್ತದೆ. ಆದರೆ ಕಾನೂನು ರೂಪಿಸುವ ಅಧಿಕಾರ ಇರುವುದು ಸಂಸತ್ ಗೆ ಅದರರ್ಥ ನಾವು ಸಂಸತ್ ನ ದಾರಿಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಹಾಗಂತ ನಾವು ಆ ದಾರಿಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ ಎಂದಲ್ಲ ಎಂಬ ಟ್ವೀಟ್ ಮಾಡಿದ್ದಾರೆ ಬಿಜೆಪಿಯ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ. ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ಕೊನೆಗೆ ಸಂವಿಧಾನದ ಪ್ರಕಾರ ಸುಪ್ರೀಂ ಕೋರ್ಟ್ ಸರ್ವೋಚ್ಚ ಅಲ್ಲ. ಸುಪ್ರೀಂ ಕೋರ್ಟ್ ಒಂದು ಸ್ತಂಭವಾದರೆ, ಮತ್ತೊಂದು ಸ್ತಂಭ ಸಂಸತ್ ಎಂದಿದ್ದಾರೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more