
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗಿಂತ ಅವರ ಪತ್ನಿಯೇ ಸಿರಿವಂತೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮಾನಾಥ ರೈ ಚುನಾವಣಾ ಆಯೋಗಕ್ಕೆ ಘೋಷಣೆ ಮಾಡಿರುವ ತಮ್ಮ ಆದಾಯ ವಿವರಗಳಲ್ಲಿ ಇಂತಹದ್ದೊಂದು ಮಾಹಿತಿ ತೆರೆದಿಟ್ಟಿದ್ದಾರೆ.
ರಮಾನಾಥ ರೈ ಅವರು ತಮ್ಮ ಕುಟುಂಬದ ಒಟ್ಟು ಆಸ್ತಿ ಮೊತ್ತ 6.25 ಕೋಟಿ ರೂಪಾಯಿ ಎಂದು ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಪ್ರಮಾಣ ಪತ್ರದಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ ಗೊಂಡಿದೆ.
ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಹಾಗು ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಕಾಂಗ್ರೆಸ್ ವರಿಷ್ಠರ ವಿರುದ್ದ ತೊಡೆ ತಟ್ಟಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಿಂದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿಜಯ ಕುಮಾರ್ ಶೆಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.