Short News

ಕೈಗೂಡದ ಹ್ಯಾಟ್ರಿಕ್ ಗೆಲುವಿನ ಕನಸು, ಧೋನಿ ತಂಡವನ್ನು ರೋಚಕವಾಗಿ ಬಗ್ಗು ಬಡಿದ ಪಂಜಾಬ್

ಕೈಗೂಡದ ಹ್ಯಾಟ್ರಿಕ್ ಗೆಲುವಿನ ಕನಸು, ಧೋನಿ ತಂಡವನ್ನು ರೋಚಕವಾಗಿ ಬಗ್ಗು ಬಡಿದ ಪಂಜಾಬ್

ಟಿ-20 ಲೀಗ್ ನ 12ನೇ ಪಂದ್ಯದಲ್ಲಿ ಚೆನ್ನೈ ವಿರುದ್ಧ ಪಂಜಾಬ್ ರೋಚಕ 4 ರನ್ ಗಳ ಜಯ ಕಂಡಿದೆ. ಟಾಸ್ ಗೆದ್ದ ಚೆನ್ನೈ ನಾಯಕ ಎಂಎಸ್ ಧೋನಿ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ಪಂಜಾಬ್ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು. ಮೊದಲು ಬ್ಯಾಟ್ ಮಾಡಿದ ಪಂಜಾಬ್ 7 ವಿಕೆಟ್ ಕಳೆದುಕೊಂಡು 198 ರನ್ ಗಳ ಟಾರ್ಗೆಟ್ ನೀಡಿತು. ಗೆಲುವಿನ ಗುರಿ ಬೆನ್ನು ಹತ್ತಿದ ಚೆನ್ನೈ ಧೋನಿ ಔಟಾಗದೆ 79 ರಾಯುಡು 49 ರನ್ ಹೊಡೆದರು 5 ವಿಕೆಟ್ ನಷ್ಟಕ್ಕೆ 193ರನ್ ಗಳಿಸಲಷ್ಟೇ ಶಕ್ತವಾಯ್ತು. ಈ ಮೂಲಕ ಹ್ಯಾಟ್ರಿಕ್ ಗೆಲುವಿನ ಕನಸು ನನಸಾಗಲಿಲ್ಲ. ಪಂಜಾಬ್ ಪರ ಕ್ರಿಸ್ ಗೇಲ್ 63 ರಾಹುಲ್ 37 ರನ್ ಗಳಿಸಿದರು.
ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ

ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗಿಂತ ಅವರ ಪತ್ನಿಯೇ ಸಿರಿವಂತೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮಾನಾಥ ರೈ ಚುನಾವಣಾ ಆಯೋಗಕ್ಕೆ ಘೋಷಣೆ ಮಾಡಿರುವ ತಮ್ಮ ಆದಾಯ ವಿವರಗಳಲ್ಲಿ ಇಂತಹದ್ದೊಂದು ಮಾಹಿತಿ ತೆರೆದಿಟ್ಟಿದ್ದಾರೆ.

ರಮಾನಾಥ ರೈ ಅವರು ತಮ್ಮ ಕುಟುಂಬದ ಒಟ್ಟು ಆಸ್ತಿ ಮೊತ್ತ 6.25 ಕೋಟಿ ರೂಪಾಯಿ ಎಂದು ಚುನಾವಣಾ ಆಯೋಗಕ್ಕೆ ನಾಮಪತ್ರ ಸಲ್ಲಿಸುವ ವೇಳೆ ಪ್ರಮಾಣ ಪತ್ರದಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ.

ಬಂಡಾಯ ಬಾವುಟ ಹಾರಿಸಿದ ಕಾಂಗ್ರೆಸ್ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ

ಬಂಡಾಯ ಬಾವುಟ ಹಾರಿಸಿದ ಕಾಂಗ್ರೆಸ್ ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿದ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಕೈ ಪಾಳಯದಲ್ಲಿ ಭಿನ್ನಮತ ಸ್ಪೋಟ ಗೊಂಡಿದೆ.

ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಹಾಗು ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ ಕಾಂಗ್ರೆಸ್ ವರಿಷ್ಠರ ವಿರುದ್ದ ತೊಡೆ ತಟ್ಟಿದ್ದಾರೆ. ಮಂಗಳೂರು ಉತ್ತರ ಕ್ಷೇತ್ರದಿಂದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡಿರುವುದಕ್ಕೆ ವಿಜಯ ಕುಮಾರ್ ಶೆಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕಗ್ಗಂಟಾಗಿದ್ದ ಮಂಗಳೂರಿನ 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆ

ಕಗ್ಗಂಟಾಗಿದ್ದ ಮಂಗಳೂರಿನ 3 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ ಕಗ್ಗಂಟಾಗಿ ಉಳಿದಿದ್ದ ಮಂಗಳೂರು,ಮಂಗಳೂರು ಉತ್ತರ,ಮಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಯುವ ಮುಖಂಡ ಜಿಎಸ್ ಬಿ ಸಮುದಾಯದ ವೇದವ್ಯಾಸ್ ಕಾಮತ್ ಅವರನ್ನು ಆಯ್ಕೆ ಮಾಡಿದೆ. ಈ ಕ್ಷೇತ್ರದಿಂದ ಉದ್ಯಮಿ ಬದ್ರಿನಾಥ್ ಕಾಮತ್ , ಮಾಜಿ ಶಾಸಕ ಯೋಗೀಶ್ ಭಟ್ ಮತ್ತಿತರರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಟಿಕೆಟ್ ಗಾಗಿ ಈ ಆಕಾಂಕ್ಷಿಗಳ ನಡುವೆ ಜಿದ್ದಾಜಿದ್ದಿಯ ಸ್ಪರ್ಧೆ ಏರ್ಪಟ್ಟಿತ್ತು . ಆದರೆ ಎಲ್ಲಾ ಗೊಂದಲಗಳಿಗೆ ತೆರೆಯೆಳೆದ ಬಿಜೆಪಿ ವರಿಷ್ಠರು ವೇದವ್ಯಾಸ್ ಕಾಮತ್ ಅವರಿಗೆ ಟಿಕೆಟ್ ನೀಡಿದ್ದಾರೆ.