Short News

ಬೆಂಗಳೂರು ನಗರದಲ್ಲಿ 2 ಸಾವಿರ ವೈ-ಫೈ ಸ್ಟಾಟ್ ಸ್ಥಾಪನೆ

ಬೆಂಗಳೂರು ನಗರದಲ್ಲಿ 2 ಸಾವಿರ ವೈ-ಫೈ ಸ್ಟಾಟ್ ಸ್ಥಾಪನೆ

ಬೆಂಗಳೂರು ನಗರದಲ್ಲಿ ಮೂರು ತಿಂಗಳಿನಲ್ಲಿ 2 ಸಾವಿರ ವೈ-ಫೈ ಸ್ಪಾಟ್‌ಗಳನ್ನು ಸ್ಥಾಪನೆ ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳದಲ್ಲಿ ಇನ್ನು ಮುಂದೆ ಉಚಿತವಾಗಿ ಇಂಟರ್‌ ನೆಟ್ ಸೌಲಭ್ಯ ಪಡೆಯಬಹುದಾಗಿದೆ. ಐಟಿ-ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ನಮ್ಮ ಮೆಟ್ರೋ ನಿಲ್ದಾಣ, ಮಾಲ್, ಬಿಎಂಟಿಸಿ ಬಸ್ ನಿಲ್ದಣ ಸೇರಿದಂತೆ ಸಾರ್ವಜನಿಕ ಪ್ರದೇಶದಲ್ಲಿ ವೈ-ಫೈ ಹಾಟ್ ಸ್ಪಾಟ್ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಈಗಾಗಲೇ 2 ಸಾವಿರ ಸ್ಥಳಗಳನ್ನು ಗುರುತಿಸಲಾಗಿದ್ದು, ವೈ-ಫೈ ಸೌಲಭ್ಯ ಒದಗಿಸಲು ಟೆಂಡರ್ ಕರೆಯಲಾಗಿದೆ.
ಪಾಕಿಸ್ತಾನ ಪ್ರಧಾನಿಯಾಗಿ ಇಂದು ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ

ಪಾಕಿಸ್ತಾನ ಪ್ರಧಾನಿಯಾಗಿ ಇಂದು ಇಮ್ರಾನ್ ಖಾನ್ ಪ್ರಮಾಣವಚನ ಸ್ವೀಕಾರ

ಪಾಕಿಸ್ತಾನದ 22 ನೇ ಪ್ರಧಾನಿಯಾಗಿ ಪಿಟಿಐ(ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್)ಪಕ್ಷದ ಅಧ್ಯಕ್ಷ ಇಮ್ರಾನ್ ಖಾನ್ ಇಂದು(ಆ.18) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಳಿಗ್ಗೆ 9:30(ಸ್ಥಳೀಯ ಕಾಲಮಾನ) ಕ್ಕೆ ಇಸ್ಲಾಮಾಬಾದಿನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ಆರಂಭವಾಗಲಿದ್ದು, ಅಧ್ಯಕ್ಷ ಮಾಮ್ನೂನ್ ಹುಸೇನ್ ಅವರು ಪ್ರತಿಜ್ಞಾವಿಧಿ ಭೋದಿಸಲಿದ್ದಾರೆ. ಪ್ರಮಾಣವಚನ್ಕೂ ಮುನ್ನ ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ.

ಕ್ರಿಕೆಟಿಗರೂ ಆಗಿದ್ದ ಇಮ್ರಾನ್ ಆನ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ವಿಶ್ವದ ಹಲವು ನಾಯಕರು ಭಾಗವಹಿಸುವ ನಿರಕ್ಷೆ ಇದೆ.

ಪ್ರವಾಹಪೀಡಿತ ಕೊಡಗಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ

ಪ್ರವಾಹಪೀಡಿತ ಕೊಡಗಿಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ

ಪ್ರವಾಹದಿಂದ ತತ್ತರಿಸಿರುವ ಕೊಡಗು ಜಿಲ್ಲೆಗೆ ಇಂದು(ಆ.18) ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೆರಳಿ, ಪ್ರವಾಹ ಸ್ಥಿತಿಯ ಪರಿಶೀಲನೆ ನಡೆಸಲಿದ್ದಾರೆ.

ಕೊಡಗು ಜಿಲ್ಲೆಗೆ ಪ್ರವಾಸ ಬೆಳೆಸುವ ಮುನ್ನ 10:30 ಕ್ಕೆ ಅವರ ಗೃಹಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

ಕರ್ನಾಟಕದ ಮೂವತ್ತು ಜಿಲ್ಲೆಗಳಲ್ಲಿ, ಒಟ್ಟು ಐದು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅತಿಯಾದ ಮಳೆ ಮತ್ತು ಪ್ರವಾಹದಿಂದ ತತ್ತರಿಸಿರುವ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

105 ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕ ಬದಲು

105 ಸ್ಥಳೀಯ ಸಂಸ್ಥೆಗಳ ಚುನಾವಣೆ ದಿನಾಂಕ ಬದಲು

ರಾಜ್ಯ ಚುನಾವಣಾ ಆಯೋಗ 105 ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಿದೆ. ಆಗಸ್ಟ್ 29ರಂದು ನಿಗದಿಯಾಗಿದ್ದ ಚುನಾವಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಲಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದಾಗಿ ಒಂದು ದಿನದ ಸರ್ಕಾರ ರಜೆ ಘೋಷಣೆಯಾಗಿದೆ. ಆದ್ದರಿಂದ, ಆಯೋಗ ಚುನಾವಣೆಯನ್ನು ಮುಂದೂಡಿ ಗುರುವಾರ ಆದೇಶ ಹೊರಡಿಸಿದೆ. ಚುನಾವಣಾ ಆಯೋಗ 29 ನಗರ ಸಭೆ, 53 ಪುರಸಭೆ ಮತ್ತು 23 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿತ್ತು. ಆದರೆ, ನಾಮಪತ್ರ ಸಲ್ಲಿಕೆ ಕಾರ್ಯ ಇನ್ನೂ ಪೂರ್ಣಗೊಂಡಿಲ್ಲ. ಆದ್ದರಿಂದ, ಚುನಾವಣೆಯ ದಿನಾಂಕವನ್ನು ಆಗಸ್ಟ್ 31ಕ್ಕೆ ನಿಗದಿ ಮಾಡಲಾಗಿದೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more