Short News

ಅಗಸ್ಟ್ 24 ರಿಂದ ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9 ಮಾರಾಟ ಆರಂಭ

ಅಗಸ್ಟ್ 24 ರಿಂದ ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9 ಮಾರಾಟ ಆರಂಭ

ಸ್ಯಾಮ್ ಸಂಗ್ ನ ಮತ್ತೊಂದು ಫೋನ್ ಬಿಡುಗಡೆಗೆ ಸಜ್ಜಾಗುತ್ತಿದೆ. ಅದುವೇ ಸ್ಯಾಮ್ ಸಂಗ್ ಗ್ಯಾಲಕ್ಸಿ ನೋಟ್ 9,. ಸ್ಯಾಮ್ ಸಂಗ್ ನ ಮುಂಬರುವ ಫ್ಯಾಬ್ಲೆಟ್ ನ ಆವೃತ್ತಿ ಇದಾಗಿದ್ದು , ಮಾಹಿತಿಯ ಪ್ರಕಾರ ಅಗಸ್ಟ್ 24 ರಿಂದ ಮಾರಾಟಕ್ಕೆ ಲಭ್ಯವಾಗಲಿದೆ. ಎಲ್ಲರಿಗೂ ತಿಳಿದಿರುವಂತೆ ಅಗಸ್ಟ್ 9 ರಂದು ನಡೆಯುವ ಗ್ಯಾಲಕ್ಸಿ ಅನ್ ಪ್ಯಾಕ್ಡ್ ಕಾರ್ಯಕ್ರಮದಲ್ಲಿ ಸ್ಯಾಮ್ ಸಂಗ್ ನ ಬಹುನಿರೀಕ್ಷಿತ ಫ್ಲ್ಯಾಗ್ ಶಿಪ್ ನ್ನು ಬಿಡುಗಡೆಗೊಳಿಸುವ ಬಗ್ಗೆ ತಯಾರಿ ನಡೆದಿದೆ ಮತ್ತು ಈಗಾಗಲೇ ಅಂತರ್ಜಾಲದಲ್ಲಿ ಸಾಕಷ್ಟು ಗಾಸಿಪ್ ಗಳಿಗೆ ಕಾರಣವಾಗಿರುವ ಕೆಲವು ಸ್ಯಾಮ್ ಸಂಗ್ ಸ್ಮಾರ್ಟ್ ಫೋನ್ ಗಳ ಬಗ್ಗೆ ಸಂಪೂರ್ಣ ಚಿತ್ರಣ ಸಿಗುವ ಸಾಧ್ಯತೆ ಇದೆ.

ಉಪ್ಪಿ ಸಿನೆಮಾದಲ್ಲಿ ಟಾಲಿವುಡ್ ಹಾಸ್ಯ ನಟ ಬ್ರಹ್ಮಾನಂದಂ

ಉಪ್ಪಿ ಸಿನೆಮಾದಲ್ಲಿ ಟಾಲಿವುಡ್ ಹಾಸ್ಯ ನಟ ಬ್ರಹ್ಮಾನಂದಂ

ಟಾಲಿವುಡ್ ಚಿತ್ರರಂಗದ ಜನಪ್ರಿಯ ಹಾಸ್ಯ ನಟ ಬ್ರಹ್ಮಾನಂದಂ ಈಗ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಈ ಹಿಂದೆ ಪುನೀತ್ ರಾಜ್ ಕುಮಾರ್ ನಟನೆಯ 'ನಿನ್ನಿಂದಲೆ' ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಖಾತೆ ತೆರೆದಿದ್ದ ಬ್ರಹ್ಮಾನಂದಂ ಈಗ ಎರಡನೇ ಸಿನಿಮಾ ಮಾಡುತ್ತಿದ್ದಾರೆ. ಬ್ರಹ್ಮಾನಂದಂ ಸದ್ಯ ರಿಯಲ್ ಸ್ಟಾರ್ ಉಪೇಂದ್ರ ಜೊತೆಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಉಪೇಂದ್ರ ಅವರ 'ಐ ಲವ್ ಯೂ' ಸಿನಿಮಾದಲ್ಲಿ ಬ್ರಹ್ಮಾನಂದಂ ಅವರ ಕಾಮಿಡಿ ಇರಲಿದೆ. ಅವರ ಭಾಗದ ಚಿತ್ರೀಕರಣ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ನಡೆಯಲಿದೆ.
'ಒಂಥರಾ ಬಣ್ಣಗಳು' ಚಿತ್ರ ಹೊಸತರ ಪ್ರಯೋಗಗಳು

'ಒಂಥರಾ ಬಣ್ಣಗಳು' ಚಿತ್ರ ಹೊಸತರ ಪ್ರಯೋಗಗಳು

'ಒಂಥರಾ ಬಣ್ಣಗಳು' ಸ್ಯಾಂಡಲ್ ವುಡ್ ನಲ್ಲಿ ತೆರೆಗೆ ಬರುವುದಕ್ಕೆ ಸಿದ್ದವಾಗಿರುವ ಮಲ್ಟಿ ಸ್ಟಾರರ್ ಸಿನಿಮಾ. ಸೋನು ಗೌಡ, ಹಿತಾ ಚಂದ್ರಶೇಖ್,ಪ್ರವೀಣ್, ಕಿರಣ್ ಶ್ರೀನಿವಾಸ್, ಹಾಗೂ ಪ್ರತಾಪ್ ನಾರಾಯಣ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಚಿತ್ರ. ಚಿತ್ರೀಕರಣ ಮುಗಿಸಿ ಹಾಡುಗಳನ್ನು ಬಿಡುಗಡೆ ಮಾಡಿ ಟೀಸರ್ ಮತ್ತು ಟ್ರೇಲರ್ ರಿಲೀಸ್ ಮಾಡಿರುವ 'ಒಂಥರಾ ಬಣ್ಣಗಳು' ಚಿತ್ರತಂಡ ಹೊಸದೊಂದು ಪ್ರಯೋಗಕ್ಕೆ ಮುಂದಾಗಿದೆ.

'ಒಂಥರಾ ಬಣ್ಣಗಳು' ಚಿತ್ರ ಹೊಸತರ ಪ್ರಯೋಗಗಳು

ಸಂಸದರಿಗೆ ಐ ಫೋನ್ ಮತ್ತು ಮೂಚಿ ಲೆದರ್ ಬ್ಯಾಗ್ ಕೊಟ್ಟಿದ್ದು ನಾನು !! ಡಿಕೆಶಿ

ಸಂಸದರಿಗೆ ಐ ಫೋನ್ ಮತ್ತು ಮೂಚಿ ಲೆದರ್ ಬ್ಯಾಗ್ ಕೊಟ್ಟಿದ್ದು ನಾನು !! ಡಿಕೆಶಿ

ಕರ್ನಾಟಕದ ಮೈತ್ರಿ ಸರ್ಕಾರ ರಾಜ್ಯದ ಸಂಸದರಿಗೆ ದುಬಾರಿ ಐ ಫೋನ್ ಮತ್ತು ಮೂಚಿ ಲೆದರ್ ಬ್ಯಾಗ್ ನ್ನು ಉಡುಗೊರೆಯನ್ನಾಗಿ ನೀಡಿದೆ. ಈ ಸುದ್ದಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದು, ಸಂಸದರಿಗೆ ಗಿಫ್ಟ್ ಕೊಟ್ಟಿದ್ದು ನಾನೇ. ಒಳ್ಳೆಯ ಹೃದಯ ಶ್ರೀಮಂತಿಕೆಯಿಂದ ವೈಯಕ್ತಿಕವಾಗಿ ಗಿಫ್ಟ್ ನೀಡಿದ್ದೇನೆ, ಆದರೆ ಕಾಮಾಲೆ ಕಣ್ಣಿಗೆ ಎಲ್ಲವೂ ಕೆಟ್ಟದಾಗಿಯೇ ಕಾಣುತ್ತದೆ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಕಾವೇರಿ ಸಮಸ್ಯೆ ಮತ್ತು ರಾಜ್ಯಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಬುಧವಾರದಂದು ರಾಜ್ಯದ ಸಂಸದರ ಸಭೆ ಕರೆಯಲಾಗಿದೆ.
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more